ಮೈಸೂರು: ಅಸ್ಪೃಶ್ಯತೆ ಮತ್ತು ಅಸಮಾನತೆ ಬಗ್ಗೆ ನಾದ ಬ್ರಹ್ಮ, ಸಂಗೀತ ಮಾಂತ್ರಿಕ ಹಂಸಲೇಖ ಅವರು ಆಡಿರುವ ಮಾತು ಈಗ ವಿವಾದದ ಕಿಡಿ ಹೊತ್ತಿಸಿದೆ.
Advertisement
ಮೈಸೂರಿನ ಮಾನಸಗಂಗೋತ್ರಿಯಲ್ಲಿಯಲ್ಲಿ ನಡೆದಿದ್ದ ಪ್ರಶಸ್ತಿ ಸಮಾರಂಭವೊಂದರ ಕಾರ್ಯಕ್ರಮದಲ್ಲಿ ಮಾತಾಡಿದ್ದ ಹಂಸಲೇಖ, ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ಕುಳಿತುಕೊಂಡು ಬಂದಿದ್ದಾರೆ. ಆದರೆ ದಲಿತರು ಕೋಳಿ ಕೊಟ್ರೆ ತಿಂತಾರಾ..? ಕುರಿ ರಕ್ತ ಪ್ರೈ ಮಾಡಿ ಕೊಟ್ರೆ ತಿಂತಾರಾ..? ಲಿವರ್ ಕೊಟ್ರೆ ತಿಂತಾರಾ..? ದಲಿತರ ಮನೆಗೆ ಹೋಗುವುದು ದೊಡ್ಡ ವಿಷಯ ಅಲ್ಲ, ತಮ್ಮ ಮನೆಗೆ ಕರೆದುಕೊಂಡು ಹೋಗಿ ಅವರು ತಿಂದ ಲೋಟ, ತಟ್ಟೆ ತೊಳೆಯೋದು ದೊಡ್ಡ ವಿಷಯ ಎಂದು ಹೇಳಿದ್ದರು. ಇದನ್ನೂ ಓದಿ: ಮಗಳ ಹುಟ್ಟುಹಬ್ಬವನ್ನು ವಿಲ್ಲಾದಲ್ಲಿ ಆಚರಿಸುತ್ತಿರೋ ಅಭಿ, ಐಶ್ – ದಿನಕ್ಕೆ ಇದರ ಬೆಲೆ ಎಷ್ಟು ಗೊತ್ತಾ?
Advertisement
Advertisement
ಅಲ್ಲದೆ ಗ್ರಾಮ ವಾಸ್ತವ್ಯ ಎನ್ನುವುದು ಬೂಟಾಟಿಕೆ, ಅದೊಂದು ನಾಟಕ. ಇತ್ತೀಚಿಗೆ ಇದನ್ನ ಎಲ್ಲರೂ ಶುರು ಮಾಡಿಕೊಂಡಿದ್ದಾರೆ. ಇದು ಒಂದು ಗೀಳಾಗಿದೆ. ರಾಜಕಾರಣಿಗಳು ಎಲ್ಲರು ಶುರು ಮಾಡಿಕೊಂಡಿದ್ದಾರೆ ಎಂದು ಹೇಳುತ್ತಾ ಕುಮಾರಸ್ವಾಮಿ, ಆರ್ ಅಶೋಕ್, ಅಶ್ವಥ್ ನಾರಾಯಣ್ ಮಾಡಿದ್ದ ಗ್ರಾಮವಾಸ್ತವ್ಯ ಬಗ್ಗೆಯೂ ಹಂಸಲೇಖ ಅವರು ಮಾತಾಡಿದ್ದರು. ಹಂಸಲೇಖ ಭಾಷಣದ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ. ಅಲ್ಲದೆ ಹಂಸಲೇಖ ವಿರುದ್ಧ ಹಲವರು ಆಕ್ರೋಶ ಹೊರಹಾಕಿದರೆ ಮತ್ತೆ ಕೆಲವರು ಪ್ರತಿಭಟನೆಗೆ ಮುಂದಾಗಿದ್ದಾರೆ.
Advertisement
ಕ್ಷಮೆಯಾಚಿಸಿದ ಸಂಗೀತ ಮಾಂತ್ರಿಕ!
ಪೇಜಾವರ ಸ್ವಾಮೀಜಿ ಬಗ್ಗೆ ಹಂಸಲೇಖ ಅವರು ಆಡಿರುವ ಮಾತನ್ನು ಕೆಲವರು ಖಂಡಿಸಿ ಕ್ಷಮೆಗೆ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಹಂಸಲೇಖ ಅವರು ಕ್ಷಮೆಯಾಚಿಸಿದ್ದಾರೆ.