ದಕ್ಷಿಣದ ಹೆಸರಾಂತ ನಟ ರಜನಿಕಾಂತ್ (Rajinikanth) ನಟನೆಯ ಕೂಲಿ (Coolie) ಸಿನಿಮಾ ತಂಡಕ್ಕೆ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ (Ilayaraja) ನೋಟಿಸ್ (Notice) ಕಳುಹಿಸಿದ್ದಾರೆ. ಈ ಸಿನಿಮಾದಲ್ಲಿ ತಮ್ಮ ಸಂಗೀತ ಸಂಯೋಜನೆಯನ್ನು ಅನುಮತಿ ಇಲ್ಲದೇ ಬಳಸಿದ್ದಾರೆ ಎಂದು ನೋಟಿಸ್ ನಲ್ಲಿ ಅವರು ಉಲ್ಲೇಖಿಸಿದ್ದಾರೆ.
ಕೂಲಿ ಸಿನಿಮಾಗೆ ಅನಿರುದ್ಧ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಇಳಯರಾಜ ಅವರ ವಾ ವಾ ಪಾಕಂ ವಾ ಹಾಡನ್ನು ಚಿತ್ರಕ್ಕಾಗಿ ಮರುಸೃಷ್ಟಿಸಲಾಗಿದೆ. ಇದಕ್ಕೆ ತಮ್ಮ ಅನುಮತಿ ಇರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ನಿರ್ಮಾಣ ಸಂಸ್ಥೆಗೆ ನೋಟಿಸ್ ನೀಡಲಾಗಿದೆ.
ಕೂಲಿ ಚಿತ್ರದ ನಿರ್ದೇಶಕ ಲೋಕೇಶ್ ಕನಕರಾಜ್ ಪದೇ ಪದೇ ಇಂತಹ ತಪ್ಪುಗಳನ್ನು ಮಾಡುತ್ತಾರೆ ಎನ್ನುವ ಆರೋಪ ಕೂಡ ಇದೆ. ಈ ಹಿಂದೆ ವಿಕ್ರಮ್ ಸಿನಿಮಾದಲ್ಲೂ ಅವರು ಇಳಯರಾಜ ಅವರು ಹಾಡನ್ನು ಬಳಸಿಕೊಂಡಿದ್ದರು. ಆಗಲೂ ಇಳಯರಾಜ ಗರಂ ಆಗಿದ್ದರು. ಈಗ ಮತ್ತೆ ಲೋಕೇಶ್ ತಪ್ಪು ಮಾಡಿದ್ದಾರೆ.