ವಾಷಿಂಗ್ಟನ್: ವಿಶ್ವದ ಶ್ರೀಮಂತ ಎಲೋನ್ ಮಸ್ಕ್ (Elon Musk) ಬುಧವಾರ ಹೊಸ ಕೃತಕ ಬುದ್ಧಿಮತ್ತೆಯ (Artificial Intelligence) ಸ್ಟಾರ್ಟ್ ಅಪ್ ‘ಎಕ್ಸ್ಎಐ’ (xAI) ಅನ್ನು ಪ್ರಾರಂಭಿಸಿದ್ದಾರೆ. ಇತ್ತೀಚೆಗೆ ಎಐ (AI) ಲೋಕದಲ್ಲಿ ಭಾರೀ ಸದ್ದು ಮಾಡಿದ್ದ ಓಪನ್ ಎಐನ (OpenAI) ಚಾಟ್ ಜಿಪಿಟಿಗೆ (ChatGPT) ಸೆಡ್ಡು ಹೊಡೆಯಲು ಇದೀಗ ಮಸ್ಕ್ ಮುಂದಾಗಿದ್ದಾರೆ.
ಈಗಾಗಲೇ ಎಲೆಕ್ಟ್ರಿಕ್ ಕಾರು ತರಾರಿಕಾ ಕಂಪನಿ ಟೆಸ್ಲಾ, ರಾಕೆಟ್ ಉಡಾವಣಾ ಕಂಪನಿ ಸ್ಪೇಸ್ಎಕ್ಸ್ನ ಸಿಇಒ ಮಾತ್ರವಲ್ಲದೇ ಟ್ವಿಟ್ಟರ್ನ ಮಾಲೀಕನಾಗಿರುವ ಮಸ್ಕ್ ಈಗ ಎಐ ಲೋಕದಲ್ಲಿ ಹೊಸ ಹೆಜ್ಜೆ ಇಟ್ಟಿದ್ದಾರೆ.
Advertisement
Advertisement
ಈ ಹಿಂದೆ ಮಸ್ಕ್ ಎಐ ಅಭಿವೃದ್ಧಿಯನ್ನು ನಿಲ್ಲಿಸಬೇಕು. ಇದರಿಂದ ದೊಡ್ಡ ಅಪಾಯದ ಸಾಧ್ಯತೆಯಿದೆ. ಈ ವಲಯದಲ್ಲಿ ನಿಯಂತ್ರಣದ ಅಗತ್ಯವಿದೆ. ಇದು ನಾಗರಿಕತೆಯ ವಿನಾಶಕ್ಕೆ ಕಾರಣವಾಗಬಹುದು ಎಂದು ಪದೇ ಪದೇ ಕಳವಳ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಭಾರತದಲ್ಲಿ 20 ಲಕ್ಷಕ್ಕೆ ಕಾರು – ಕೇಂದ್ರದ ಜೊತೆ ಟೆಸ್ಲಾ ಮಾತುಕತೆ
Advertisement
ಇದೀಗ ತನ್ನದೇ ಎಐ ಕಂಪನಿಯನ್ನು ಪ್ರಾರಂಭ ಮಾಡಿ ಮಾಹಿತಿಯನ್ನು ಹಂಚಿಕೊಂಡಿರುವ ಮಸ್ಕ್, ಸುರಕ್ಷಿತ ಎಐ ಅನ್ನು ನಿರ್ಮಿಸುವ ತನ್ನ ಯೋಜನೆಯನ್ನು ವಿವರಿಸಿದ್ದಾರೆ. ಎಐಗೆ ನೈತಿಕತೆಯನ್ನು ಸ್ಪಷ್ಟವಾಗಿ ಪ್ರೋಗ್ರಾಮಿಂಗ್ ಮಡುವ ಬದಲು ಅವರು ಎಕ್ಸ್ಎಐಯಲ್ಲಿ ಹೆಚ್ಚಿನ ಕುತೂಹಲಕಾರಿ ಅಂಶವನ್ನು ರಚಿಸಲು ಪ್ರಯತ್ನಿಸುತ್ತಿರುವುದಾಗಿ ತಿಳಿಸಿದ್ದಾರೆ.
Advertisement
ಮನುಷ್ಯರಿಗಿಂತಲೂ ಚುರುಕಾದ ಸೂಪರ್ ಇಂಟೆಲಿಜೆನ್ಸ್ ಅಥವಾ ಕೃತಕ ಬುದ್ಧಿಮತ್ತೆ ಇನ್ನು ಕೇವಲ 5-6 ವರ್ಷಗಳಲ್ಲಿ ಬರಲಿದೆ ಎಂದು ಮಸ್ಕ್ ಭವಿಷ್ಯ ನುಡಿದಿದ್ದಾರೆ.
ಮಸ್ಕ್ ಈ ಹಿಂದೆ 2015ರಲ್ಲಿ ಓಪನ್ ಎಐನ ಸಹ ಸಂಸ್ಥಾಪಕರಾಗಿದ್ದರು. ಆದರೆ 2018ರಲ್ಲಿ ಅವರು ಕಂಪನಿಯ ಮಂಡಳಿಯಿಂದ ಕೆಳಗಿಳಿದರು. ಓಪನ್ ಎಐನಲ್ಲಿ ಮೈಕ್ರೊಸಾಫ್ಟ್ ಹೂಡಿಕೆ ಮಾಡುತ್ತಿದೆ. ಇದನ್ನೂ ಓದಿ: ಟ್ವಿಟ್ಟರ್ಗಿಂತ ಥ್ರೆಡ್ಸ್ ಭಿನ್ನ ಹೇಗೆ? ವಿಶೇಷತೆ ಏನು?
Web Stories