ಗುವಾಹಟಿ: ಅಯೋಧ್ಯೆ ರಾಮಮಂದಿರ ‘ಪ್ರಾಣ ಪ್ರತಿಷ್ಠಾಪನೆ’ (Ram Mandir) ದಿನದಂದು ಮುಸ್ಲಿಮರು ಮತ್ತು ಕ್ರೈಸ್ತರು ವಿಶೇಷ ಪ್ರಾರ್ಥನೆ ಮಾಡಿ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಮನವಿ ಮಾಡಿದ್ದಾರೆ.
ಎಲ್ಲಾ ಜಾತಿ ಮತ್ತು ಸಮುದಾಯದವರು ಶಾಂತಿಯಿಂದ ಇರಲು ನಾಳೆ ವಿಶೇಷ ಪ್ರಾರ್ಥನೆ ಮಾಡಲು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಲ್ಲಿ ನಾನು ಮನವಿ ಮಾಡುತ್ತೇನೆ. ಇದು ಹಿಂದೂಗಳ ವಿಜಯವಲ್ಲ, ಭಾರತೀಯ ನಾಗರಿಕತೆಯ ವಿಜಯವಲ್ಲ. ಒಂದು ಧರ್ಮದ ಆಕ್ರಮಣಕಾರನು ಭಾರತೀಯ ಪೂಜಾ ಸ್ಥಳವನ್ನು ಒಡೆದ. ಬಾಬರ್ ಆಕ್ರಮಣಕಾರನಾಗಿದ್ದ. ಅವನು ಕೇವಲ ಹಿಂದೂಗಳ ಮೇಲೆ ದಾಳಿ ಮಾಡಲಿಲ್ಲ. ಬ್ರಿಟಿಷ್ ವಸಾಹತುಶಾಹಿ ಮತ್ತು ಬಾಬರ್ ನಡುವೆ ಯಾವುದೇ ವ್ಯತ್ಯಾಸವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ರಾಮಮಂದಿರದಲ್ಲಿ ‘ಪ್ರಾಣ ಪ್ರತಿಷ್ಠೆ’ ನೇರಪ್ರಸಾರಕ್ಕೆ ತಮಿಳುನಾಡಿನಲ್ಲಿ ನಿಷೇಧ: ನಿರ್ಮಲಾ ಸೀತಾರಾಮನ್ ಆರೋಪ
Advertisement
Advertisement
1992 ರಲ್ಲಿ ಬಾಬರಿ ಮಸೀದಿಗೂ ಮೊದಲು ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಇತ್ತು. 16 ನೇ ಶತಮಾನದ ಮಸೀದಿಯು ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ಹಳೆಯ ವಿವಾದದ ಕೇಂದ್ರವಾಗಿತ್ತು. ಈ ಸ್ಥಳವು ಭಗವಾನ್ ರಾಮನ ಜನ್ಮಸ್ಥಳವಾಗಿದೆ. ಮುಸ್ಲಿಂ ಆಕ್ರಮಣಕಾರರು ಅಲ್ಲಿರುವ ದೇವಾಲಯವನ್ನು ಧ್ವಂಸಗೊಳಿಸಿ ಮಸೀದಿಯನ್ನು ನಿರ್ಮಿಸಿದ್ದರು. ಈಗ ಕೆಡವಲಾದ ಮಸೀದಿಯ ಒಳಗಿನ ಶಾಸನಗಳು ಇದನ್ನು 1528-29 ರಲ್ಲಿ ಮೊಘಲ್ ಚಕ್ರವರ್ತಿ ಬಾಬರ್‌ನ ಕಮಾಂಡರ್ ಮೀರ್ ಬಾಕಿ ನಿರ್ಮಿಸಿದ ಎಂದು ತಿಳಿಸಿವೆ ಎಂದಿದ್ದಾರೆ.
Advertisement
ರಾಮಮಂದಿರದಲ್ಲಿ ಪ್ರತಿಷ್ಠಾಪನೆ ಸಮಾರಂಭದಲ್ಲಿ ಅಂಗಡಿಗಳನ್ನು ಮುಚ್ಚುವಂತೆ ನಾವು ವ್ಯಾಪಾರ ಸಂಸ್ಥೆಗಳಿಗೆ ಮನವಿ ಮಾಡುತ್ತೇವೆ ಎಂದು ಶರ್ಮಾ ಅವರು ತಿಳಿಸಿದ್ದಾರೆ. ಇದನ್ನೂ ಓದಿ: PublicTV Explainer: ‘ದಶಾವತಾರಿ ರಾಮ’ನೂರಿನ ಅಯೋಧ್ಯೆ ರಾಮಮಂದಿರದ 10 ವಿಶೇಷತೆಗಳು..
Advertisement
ದಶಕಗಳ ಸುದೀರ್ಘ ಕಾನೂನು ಹೋರಾಟಗಳ ನಂತರ 2019 ರಲ್ಲಿ ಸುಪ್ರೀಂ ಕೋರ್ಟ್ ವಿವಾದಿತ ಸ್ಥಳವನ್ನು ರಾಮಮಂದಿರ ನಿರ್ಮಿಸಲು ಟ್ರಸ್ಟ್‌ಗೆ ಹಸ್ತಾಂತರಿಸಿತು. ಮಸೀದಿ ನಿರ್ಮಿಸಲು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಗೆ ಭೂಮಿ ನೀಡುವಂತೆ ನ್ಯಾಯಾಲಯ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು.
ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ದೇಶದೆಲ್ಲೆಡೆ ರಾಮಭಕ್ತರಲ್ಲಿ ಸಂಭ್ರಮ-ಸಡಗರ ಮನೆ ಮಾಡಿದೆ. 500 ವರ್ಷಗಳ ನಂತರ ಶ್ರೀರಾಮ ಮತ್ತೆ ಪಟ್ಟಕ್ಕೇರಲು ಸಿದ್ಧನಾಗಿದ್ದಾನೆ. ಸೋಮವಾರ ಪ್ರಾಣ ಪ್ರತಿಷ್ಠೆಗಾಗಿ ಅಯೋಧ್ಯೆ ಕಂಗೊಳಿಸುತ್ತಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದ ಸ್ಯಾಟಲೈಟ್ ಚಿತ್ರ ಬಿಡುಗಡೆ ಮಾಡಿದ ಇಸ್ರೋ