ರಾಂಚಿ: ಹಿಜಬ್, ಕೇಸರಿ ಶಾಲು ವಿವಾದ ಅಂತರಾಷ್ಟ್ರೀಯ ಪಟ್ಟದಲ್ಲಿ ಸುದ್ದಿ ಮಾಡುತ್ತಿದೆ. ಹಿಂದೂ, ಮುಸ್ಲಿಂ ನಡುವೆ ಇರುವ ಬಾಂಧವ್ಯಕ್ಕೆ ಕುತ್ತು ತರುವಂತಾಗಿದೆ. ಆದರೆ ಜಾರ್ಖಂಡ್‍ನಲ್ಲಿ ಮುಸ್ಲಿಂ ಉದ್ಯಮಿಯೊಬ್ಬ ಕೃಷ್ಣ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದು, ಮೆಚ್ಚುಗೆಗೆ ಪಾತ್ರವಾಗಿದ್ದಾನೆ.
ಜಾರ್ಖಂಡ್‍ನ ದುಮ್ಕಾದ ಮಹೇಶ್‍ಬಥನ್ ಉದ್ಯಮಿ ನೌಶಾದ್ ಶೇಖ್ ಶ್ರೀಕೃಷ್ಣನಿಂದ ಪ್ರಭಾವಿತರಾಗಿ ದೇವಸ್ಥಾನ ನಿರ್ಮಾಣ ಮಾಡಿದ್ದಾರೆ. ತಮ್ಮ ಸ್ವಂತ ಖರ್ಚಿನಿಂದ ಸುಮಾರು 42 ಲಕ್ಷ ರೂ. ಖರ್ಚು ಮಾಡಿ ದೇವಸ್ಥಾನವೊಂದನ್ನು ಕಟ್ಟಿಸಿದ್ದಾರೆ. 3 ವರ್ಷಗಳಲ್ಲಿ ಈ 42 ಲಕ್ಷ ರೂ. ವೆಚ್ಚದ ಕೃಷ್ಣನ ದೇವಸ್ಥಾನವನ್ನು ನಿರ್ಮಾಣ ಮಾಡಲಾಗಿದೆ. ಮುಸ್ಲಿಂ ಉದ್ಯಮಿ ಕಟ್ಟಿಸಿದ ಈ ದೇವಸ್ಥಾನದಲ್ಲಿ ಹಿಂದೂ ಪದ್ಧತಿಯಂತೆ 150 ಬ್ರಾಹ್ಮಣರಿಂದ ಪ್ರಾಣ-ಪ್ರತಿಷ್ಠೆ ನೆರವೇರಿಸಲಾಯಿತು. ಇದನ್ನೂ ಓದಿ: ಇಂದು ಸಂಜೆಯಿಂದ ಲಘು ವಾಹನಗಳ ಸಂಚಾರಕ್ಕೆ ಪೀಣ್ಯ ಫ್ಲೈಓವರ್ ಮುಕ್ತ
Advertisement
ಈ ಪ್ರದೇಶದಲ್ಲಿ ವಾಸಿಸುವ ಹೆಚ್ಚಿನ ಜನರು ಹಿಂದೂಗಳಾಗಿರುವುದರಿಂದ ಅವರಿಗಾಗಿ ಕೃಷ್ಣನ ದೇವಾಲಯವನ್ನು ನಿರ್ಮಿಸಲು ಶೇಖ್ ಯೋಚಿಸಿದರು. ಸೋಮವಾರ ದೇವಸ್ಥಾನದ ಪ್ರಾಣ-ಪ್ರತಿಷ್ಠೆ ನಡೆದಿದ್ದು, ಎಲ್ಲಾ ಸಮುದಾಯದ ಜನರು ಈ ದೇವಸ್ಥಾನಕ್ಕೆ ಆಗಮಿಸಿ, ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ಕೃಷ್ಣ ಪರಮಾತ್ಮನೇ ನನ್ನ ಕನಸಿನಲ್ಲಿ ಬಂದು ತನಗಾಗಿ ದೇವಸ್ಥಾನವನ್ನು ನಿರ್ಮಿಸಲು ಪ್ರೇರೇಪಣೆ ನೀಡಿದ್ದಾನೆ ಎಂದು ಆ ಮುಸ್ಲಿಂ ಉದ್ಯಮಿ ಶೇಖ್ ತಿಳಿಸಿದ್ದಾರೆ. ಇದನ್ನೂ ಓದಿ: ಸಚಿವ ಈಶ್ವರಪ್ಪ ನಿವಾಸಕ್ಕೆ ಯೂತ್ ಕಾಂಗ್ರೆಸ್ ಮುತ್ತಿಗೆ
Advertisement
ಈ ಕುರಿತಾಗಿ ಖಾಸಗಿ ವಾಹಿನಿ ಜೊತೆಗೆ ಮಾತನಾಡಿದ ಶೇಖ್, ಎಲ್ಲರಿಗೂ ದೇವರು ಒಬ್ಬನೇ. ದೇವಸ್ಥಾನ, ಮಸೀದಿ ಅಥವಾ ಚರ್ಚ್‍ನಲ್ಲಿ ಪೂಜಿಸುತ್ತಾರೆ. ನಾವು ಎಲ್ಲಿ ಪೂಜಿಸುತ್ತೇವೆ ಎಂಬುದು ಮುಖ್ಯವಲ್ಲ, ನಾವು ಎಷ್ಟು ಭಕ್ತಿಯನ್ನು ಹೊಂದಿದ್ದೇವೆ ಎಂಬುದು ಮುಖ್ಯವಾಗುತ್ತದೆ.