ಕೊಪ್ಪಳ: ವಿಧಾನಸಭಾ ಫಲಿತಾಂಶ (Vidhanasabha Election Result 2023) ಹೊರಬಿದ್ದು, ಕಾಂಗ್ರೆಸ್ (Congress) ಗೆಲುವಿನ ಪತಾಕೆ ಹಾರಿಸಿದೆ. ಈ ಬೆನ್ನಲ್ಲೇ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವೆ ಸಿಎಂ ಪಟ್ಟಕ್ಕೆ ಭಾರೀ ಫೈಟ್ ನಡೆಯುತ್ತಿದೆ. ಇದರ ಮಧ್ಯೆ ಇದೀಗ ಜಮೀರ್ ಅಹ್ಮದ್ ಖಾನ್ ಅವರನ್ನು ಡಿಸಿಎಂ ಮಾಡುವಂತೆ ಒತ್ತಾಯಿಸಿ ಕೊಪ್ಪಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
Advertisement
ಹೌದು. ಕೊಪ್ಪಳದ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿಯಲ್ಲಿ ಮುಸ್ಲಿಮರು ಈ ಪ್ರತಿಭಟನೆ ನಡೆಸುತ್ತಿದ್ದಾರೆ. ಜಮೀರ್ (Zameer Ahmed Khan) ಡಿಸಿಎಂ ಮಾಡುವ ಜೊತೆಗೆ ಕನಕಗಿರಿ ಶಾಸಕ ಶಿವರಾಜ್ ತಂಗಡಗಿಗೂ ಸಹ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿಎಂ ಪಟ್ಟಕ್ಕೆ ಸಿದ್ದು ಪಟ್ಟು – ದೆಹಲಿಯಲ್ಲಿ ಬೆಂಬಲಿಗರ ಜೊತೆ ಬಲ ಪ್ರದರ್ಶನ
Advertisement
ಜಮೀರ್ ಹಾಗೂ ಶಿವರಾಜ್ ತಂಗಡಗಿ (Shivaraj Tangadagi) ಭಾವಚಿತ್ರ ಹಿಡಿದು ಪ್ರೊಟೆಸ್ಟ್ ಮಾಡಿದ್ದಾರೆ. ಜಮೀರ್ ಅಹ್ಮದ್ ಗೆ ಡಿಸಿಎಂ ಸ್ಥಾನ ನೀಡುವ ಮೂಲಕ ಮುಸ್ಲಿಂ ಸಮಾಜಕ್ಕೆ ನ್ಯಾಯ ಒದಗಲಿಸಲು ಒತ್ತಾಯಿಸುತ್ತಿದ್ದಾರೆ. ಅಲ್ಲದೆ ಮೂರು ಬಾರಿ ಶಾಸಕರಾಗಿರುವ ತಂಗಡಗಿಗೆ ಮಂತ್ರಿ ಸ್ಥಾನ ನೀಡುವಂತೆ ಒತ್ತಡ ಹಾಕಿದ್ದಾರೆ.