ಚೆನ್ನೈ: ತಿರುಪತಿ ತಿರುಮಲ ದೇವಸ್ಥಾನಕ್ಕೆ (Temple) ಚೆನ್ನೈ (Chennai) ಮೂಲದ ಮುಸ್ಲಿಂ ದಂಪತಿ (Muslim Couple) 1 ಕೋಟಿ ರೂ. ದೇಣಿಗೆಯನ್ನು (Donate) ನೀಡಿದ್ದಾರೆ.
ಚೆನ್ನೈ ಮೂಲದ ಮುಸ್ಲಿಂ ದಂಪತಿ ಸುಬೀನಾ ಬಾನು ಮತ್ತು ಅಬ್ದುಲ್ ಘನಿ ಈ ದೇಣಿಗೆಯನ್ನು ದೇವಾಲಯದ ವ್ಯವಹಾರಗಳನ್ನು ನಿರ್ವಹಿಸುವ ತಿರುಮಲ ತಿರುಪತಿ (Tirupati) ದೇವಸ್ಥಾನಂ (ಟಿಟಿಡಿ)ಗೆ ನೀಡಿದರು. ಈ ಹಣದಲ್ಲಿ ನೂತನವಾಗಿ ನಿರ್ಮಾಣವಾದ ಪದ್ಮಾವತಿ ವಿಶ್ರಾಂತಿ ಗೃಹಕ್ಕೆ 87 ಲಕ್ಷ ರೂ. ಮೌಲ್ಯದ ಪೀಠೋಪಕರಣಗಳು ಮತ್ತು ಪಾತ್ರೆಗಳು ಮತ್ತು ಎಸ್‍ವಿ ಅನ್ನ ಪ್ರಸಾದ ಟ್ರಸ್ಟ್‌ಗೆ 15 ಲಕ್ಷ ರೂ. ನೀಡಿರುವುದು ಸೇರಿವೆ. ಇದನ್ನೂ ಓದಿ: ದಲಿತ ಬಾಲಕ ದೇವರ ಮೂರ್ತಿ ಮುಟ್ಟಿದ್ದಕ್ಕೆ 60 ಸಾವಿರ ರೂ. ದಂಡ ಹಾಕಿದ ಗ್ರಾಮಸ್ಥರು
Advertisement
A Chennai-based couple Subeena Banu & Abdul Ghani donated Rs 1 cr to Tirumala Tirupati Devasthanams
The donation includes Rs 87 lakh worth of furniture & utensils for the newly constructed Padmavathi Rest House & a DD for Rs 15 lakh towards SV Anna Prasadam Trust (20.09) pic.twitter.com/jdZBfYyJAb
— ANI (@ANI) September 20, 2022
Advertisement
ಅಬ್ದುಲ್ ಘನಿ ದೇವಸ್ಥಾನಕ್ಕೆ ದೇಣಿಗೆ ನೀಡುತ್ತಿರುವುದು ಇದೇ ಮೊದಲಲ್ಲ. 2020ರಲ್ಲಿ ಕೊರೊನಾ ಸಮಯದಲ್ಲಿ ದೇವಾಲಯದ ಆವರಣದಲ್ಲಿ ಸೋಂಕುನಿವಾರಕಗಳನ್ನು ಸಿಂಪಡಿಸಲು ಬಹು ಆಯಾಮದ ಟ್ರಾಕ್ಟರ್-ಮೌಂಟೆಡ್ ಸ್ಪ್ರೇಯರ್ ಅನ್ನು ದೇಣಿಗೆ ನೀಡಿದರು. ಇದಕ್ಕೂ ಮುನ್ನ ದೇವಸ್ಥಾನಕ್ಕೆ ತರಕಾರಿ ಸಾಗಿಸಲು ರೂ.35 ಲಕ್ಷದ ರೆಫ್ರಿಜರೇಟರ್ ಟ್ರಕ್ ಅನ್ನು ಕೊಡುಗೆಯಾಗಿ ನೀಡಿದ್ದರು. ಇದನ್ನೂ ಓದಿ: ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ- ಟ್ರಯಲ್ ಬ್ಲಾಸ್ಟ್ ನಡೆಸುತ್ತಿದ್ದ ಸ್ಥಳ ಮಹಜರು