ಶಿಮ್ಲಾ: ಹಿಮಾಚಲ ಪ್ರದೇಶದ ಶಿಮ್ಲಾ (Shimla) ಜಿಲ್ಲೆಯ ರಾಮ್‍ಪುರದ ಹಿಂದೂ ದೇವಾಲಯದ (Temple) ಆವರಣದಲ್ಲಿ ಮುಸ್ಲಿಂ ಜೋಡಿಗಳು (Muslim Couple) ಇಸ್ಲಾಮಿಕ್ ಪದ್ಧತಿಯಂತೆ ವಿವಾಹವಾಗುವ (Marriage) ಮೂಲಕ ಕೋಮು ಸೌಹಾರ್ದತೆಗೆ ಸಾಕ್ಷಿಯಾದರು.
ಹಿಮಾಚಲ ಪ್ರದೇಶದ ವಿಶ್ವ ಹಿಂದೂ ಪರಿಷತ್ತಿನ ಠಾಕೂರ್ ಸತ್ಯನಾರಾಯಣ ದೇವಸ್ಥಾನದಲ್ಲಿ ಈ ಅಪರೂಪದ ವಿವಾಹ ನೆರವೇರಿತು. ದೇವಸ್ಥಾನದಲ್ಲಿ ನಡೆದ ಮುಸ್ಲಿಂ ಜೋಡಿಯ ವಿವಾಹ ಸಮಾರಂಭಕ್ಕೆ ಮುಸ್ಲಿಂ ಹಾಗೂ ಹಿಂದೂ ಸಮುದಾಯದ ಜನರು ಸಾಕ್ಷಿಯಾದರು. ವಧು ಎಂಟೆಕ್ ಸಿವಿಲ್ ಇಂಜಿನಿಯರ್ ಆಗಿದ್ದು, ವರ ಸಿವಿಲ್ ಇಂಜಿನಿಯರ್ ಆಗಿದ್ದಾರೆ.
ವಿವಾಹ ಸಂದರ್ಭದಲ್ಲಿ ಮೌಲ್ವಿ, ವಕೀಲರು, ಅತಿಥಿಗಳು ದೇವಾಲಯದ ಆವರಣದಲ್ಲಿ ಪಾಲ್ಗೊಂಡಿದ್ದರು. ಧಾರ್ಮಿಕ ಸೌಹಾರ್ದತೆ ಹಾಗೂ ಸಹೋದರತ್ವದ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಈ ಮದುವೆಯನ್ನು ದೇವಸ್ಥಾನದ ಆವರಣದಲ್ಲಿ ಮಾಡಲಾಗಿತ್ತು ಎಂದು ವಧುವಿನ ತಂದೆ ತಿಳಿಸಿದ್ದಾರೆ. ಇದನ್ನೂ ಓದಿ: ಜೀವನದಿ ಕಾವೇರಿ ತೀರ್ಥ ಪ್ರಸಾದ ಇನ್ಮುಂದೆ ಭಕ್ತರ ಮನೆ ಬಾಗಿಲಿಗೆ
ಸತ್ಯನಾರಾಯಣ ದೇವಾಲಯ ಸಂಕೀರ್ಣವು ವಿಶ್ವ ಹಿಂದೂ ಪರಿಷತ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಕಚೇರಿಯಾಗಿರುವುದು ಗಮನಾರ್ಹ ವಿಷಯವಾಗಿತ್ತು. ಈ ಬಗ್ಗೆ ದೇವಸ್ಥಾನ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಮಾತನಾಡಿ, ವಿಶ್ವ ಹಿಂದೂ ಪರಿಷತ್ ಹಾಗೂ ಆರ್‌ಎಸ್‍ಎಸ್ ಅನ್ನು ಆಗಾಗ ಮುಸ್ಲಿಂ ವಿರೋಧಿ ಎಂದು ಆರೋಪಿಸಲಾಗುತ್ತದೆ. ಆದರೆ ಇಲ್ಲಿ ಮುಸ್ಲಿಂ ಜೋಡಿ ವಿವಾಹವಾಗುವ ಮೂಲಕ ಸನಾತನ ಧರ್ಮವು ಯಾವಾಗಲೂ ಎಲ್ಲರನ್ನು ಪ್ರೇರೆಪಿಸುತ್ತಾರೆ ಎಂಬುದಕ್ಕೆ ಉದಾಹರಣೆಯಾಗಿದೆ ಎಂದರು. ಇದನ್ನೂ ಓದಿ: ಐವರು ಮಕ್ಕಳಿದ್ದರೂ, ಆಸ್ತಿಯೆಲ್ಲಾ UP ಸರ್ಕಾರದ ಹೆಸರಿಗೆ ಬರೆದ ವೃದ್ಧ