ಪಾಟ್ನಾ: ದೇಶದಲ್ಲಿ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿ ಬಿಹಾರದ ಮುಸ್ಲಿಂ ಕುಟುಂಬವೊಂದು ರಾಜ್ಯದ ಪೂರ್ವ ಚಂಪಾರಣ್ ಜಿಲ್ಲೆಯ ಕೈತ್ವಾಲಿಯಾ ಪ್ರದೇಶದಲ್ಲಿ ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ – ವಿರಾಟ್ ರಾಮಾಯಣ ಮಂದಿರ ನಿರ್ಮಾಣಕ್ಕಾಗಿ 2.5 ಕೋಟಿ ರೂ. ಮೌಲ್ಯದ ಭೂಮಿಯನ್ನು ದಾನ ಮಾಡಿದೆ.
ಈ ಯೋಜನೆಯನ್ನು ಪಾಟ್ನಾ ಮೂಲದ ಮಹಾವೀರ ಮಂದಿರ ಟ್ರಸ್ಟ್‌ನ ಮುಖ್ಯಸ್ಥ ಆಚಾರ್ಯ ಕಿಶೋರ್ ಕುನಾಲ್ ಕೈಗೆತ್ತಿಕೊಂಡಿದ್ದು, ಭೂಮಿಯನ್ನು ದಾನ ಮಾಡಿರುವ ಇಶ್ತಿಯಾಕ್ ಅಹ್ಮದ್ ಖಾನ್ ಅವರು ಗುವಾಹಟಿ ಮೂಲದ ಪೂರ್ವ ಚಂಪಾರಣ್‍ನಲ್ಲಿ ಉದ್ಯಮಿಯಾಗಿದ್ದಾರೆ. ಇತ್ತೀಚೆಗಷ್ಟೇ ಕೇಶರಿಯಾ ಉಪವಿಭಾಗದ (ಪೂರ್ವ ಚನ್‍ಂಪಾರಣ್) ರಿಜಿಸ್ಟಾರ್ ಆಫಿಸ್‍ನಲ್ಲಿ ದೇವಾಲಯದ ನಿರ್ಮಾಣಕ್ಕಾಗಿ ತಮ್ಮ ಕುಟುಂಬಕ್ಕೆ ಸೇರಿದ ಭೂಮಿಯನ್ನು ದಾನ ಮಾಡಲು ಇದಕ್ಕೆ ಸಂಬಂಧಿಸಿದ ಎಲ್ಲಾ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದರು ಎಂದು ಮಾಜಿ ಭಾರತೀಯ ಪೊಲೀಸ್ ಸೇವೆ ಅಧಿಕಾರಿ ಕುನಾಲ್ ತಿಳಿಸಿದ್ದಾರೆ. ಇದನ್ನೂ ಓದಿ: 2ನೇ ಬಾರಿಗೆ ಗೋವಾ ಸಿಎಂ ಆಗಿ ಪ್ರಮೋದ್ ಸಾವಂತ್ ಆಯ್ಕೆ
Advertisement
Advertisement
ಈ ವಿಚಾರವಾಗಿ ಮಾತನಾಡಿದ ಆಚಾರ್ಯ ಕಿಶೋರ್ ಕುನಾಲ್ ಅವರು, ಇಶ್ತಿಯಾಕ್ ಅಹ್ಮದ್ ಖಾನ್ ಮತ್ತು ಅವರ ಕುಟುಂಬದವರ ಈ ದೇಣಿಗೆ ಎರಡು ಸಮುದಾಯಗಳ ನಡುವಿನ ಸಾಮಾಜಿಕ ಸಾಮರಸ್ಯ ಮತ್ತು ಸಹೋದರತ್ವಕ್ಕೆ ಉತ್ತಮ ಉದಾಹರಣೆಯಾಗಿದೆ. ಮುಸ್ಲಿಮರ ಸಹಾಯವಿಲ್ಲದಿದ್ದರೆ ಈ ಕನಸಿನ ಯೋಜನೆ ಸಾಕಾರಗೊಳ್ಳುವುದು ಕಷ್ಟವಾಗುತ್ತಿತ್ತು ಎಂದಿದ್ದಾರೆ.
Advertisement
Advertisement
ಮಹಾವೀರ ಮಂದಿರ ಟ್ರಸ್ಟ್ ಈ ದೇವಸ್ಥಾನ ನಿರ್ಮಾಣಕ್ಕಾಗಿ ಇದುವರೆಗೆ 125 ಎಕರೆ ಭೂಮಿಯನ್ನು ಪಡೆದುಕೊಂಡಿದೆ. ಟ್ರಸ್ಟ್ ಶೀಘ್ರದಲ್ಲೇ ಈ ಪ್ರದೇಶದಲ್ಲಿ ಇನ್ನೂ 25 ಎಕರೆ ಭೂಮಿಯನ್ನು ಪಡೆಯಲಿದೆ. ವಿರಾಟ್ ರಾಮಾಯಣ ಮಂದಿರವು 215 ಅಡಿ ಎತ್ತರವಿರುವ ಕಾಂಬೋಡಿಯಾದ 12ನೇ ಶತಮಾನದ ವಿಶ್ವಪ್ರಸಿದ್ಧ ಅಂಕೋರ್ ವಾಟ್ ಸಂಕೀರ್ಣಕ್ಕಿಂತ ಎತ್ತರವಾಗಿರಲಿದೆ. ಪೂರ್ವ ಚಂಪಾರಣ್‍ನಲ್ಲಿರುವ ಸಂಕೀರ್ಣವು ಎತ್ತರದ ಗೋಪುರಗಳೊಂದಿಗೆ 18 ದೇವಾಲಯಗಳನ್ನು ಒಳಗೊಂಡಿರುತ್ತದೆ ಮತ್ತು ಅಲ್ಲಿನ ಶಿವನ ದೇವಾಲಯವು ವಿಶ್ವದ ಅತಿದೊಡ್ಡ ಶಿವಲಿಂಗವನ್ನು ಹೊಂದಿರುತ್ತದೆ. ಇದನ್ನೂ ಓದಿ: ರಷ್ಯಾ ಯುದ್ಧವನ್ನು 2ನೇ ಮಹಾಯುದ್ಧಕ್ಕೆ ಹೋಲಿಸಿದ ಝೆಲೆನ್ಸ್ಕಿ
ದೇವಾಲಯ ನಿರ್ಮಾಣಕ್ಕೆ ಒಟ್ಟು ಸುಮಾರು 500 ಕೋಟಿ ರೂ. ವೆಚ್ಚ ಆಗಲಿದೆ ಎಂದು ಅಂದಾಜಿಸಲಾಗಿದೆ. ನವದೆಹಲಿಯಲ್ಲಿ ನೂತನ ಸಂಸತ್ ಭವನ ನಿರ್ಮಾಣದಲ್ಲಿ ತೊಡಗಿರುವ ತಜ್ಞರಿಂದ ಟ್ರಸ್ಟ್ ಶೀಘ್ರದಲ್ಲೇ ಸಲಹೆ ಪಡೆಯಲಿದೆ.