ಲಕ್ನೋ: ಕೋಮು ಸಂಘರ್ಷದ ನಡುವೆ ಮುಸ್ಲಿಂ ಕುಟುಂಬವೊಂದು ಸಾಮರಸ್ಯವನ್ನು ಮೆರೆದಿದೆ. ಗಣೇಶ ಹಬ್ಬದ ಹಿನ್ನೆಲೆ ಅಲಿಘರ್‌ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು 7 ದಿನಗಳ ಕಾಲ ಮನೆಯಲ್ಲಿ ಗಣಪತಿಯನ್ನು ಕೂರಿಸಿ ಹಬ್ಬ ಆಚರಿಸಿದ್ದಾರೆ.
Advertisement
ರೋರವಾರ ಪೊಲೀಸ್ ವೃತ್ತದ ಎಡಿಎ ಕಾಲೋನಿ ನಿವಾಸಿ ರೂಬಿ ಆಸಿಫ್ ಖಾನ್ ಎಂಬವರು ತಮ್ಮ ಮನೆಗೆ ಗಣೇಶ ಮೂರ್ತಿಯನ್ನು ತಂದು ಸಕಲ ವಿಧಿ ವಿಧಾನಗಳೊಂದಿಗೆ ಗಣೇಶನನ್ನು ಪ್ರತಿಷ್ಠಾಪಿಸಿದ್ದಾರೆ. ಇದನ್ನೂ ಓದಿ: ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ – ಹುಬ್ಬಳ್ಳಿಯಲ್ಲಿ ಕಿಂಗ್‌ಪಿನ್ ಅರೆಸ್ಟ್!
Advertisement
ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮಹಿಳೆ, ನೀರಿನಲ್ಲಿ ಮುಳುಗಿಸುವ ಮುನ್ನ 7 ದಿನಗಳ ಕಾಲ ಗಣೇಶನ ಮೂರ್ತಿಯನ್ನು ಇಟ್ಟಿರುತ್ತೇವೆ. ನಾನು ಮತ್ತು ನನ್ನ ಕುಟುಂಬಸ್ಥರು ಪ್ರತಿದಿನ ಪೂಜೆ ಮಾಡಿ, ದೇವರಿಗೆ ಮೋದಕವನ್ನು ನೈವೇದ್ಯೆ ಮಾಡಿ ಇಡುತ್ತೇವೆ. ನನಗೆ ಗಣೇಶನ ಮೇಲೆ ಅಪಾರವಾದ ನಂಬಿಕೆ ಇದೆ. ಅಲ್ಲದೇ ಗಣೇಶ ಕೂರಿಸಲು ನನ್ನ ಮನೆಯವರು ವಿರೋಧ ವ್ಯಕ್ತಪಡಿಸಲಿಲ್ಲ. ನಾನು ಮತ್ತು ನನ್ನ ಕುಟುಂಬ ಎಲ್ಲಾ ಹಬ್ಬಗಳನ್ನು ಧರ್ಮದ ಭೇದವಿಲ್ಲದೆ ಆಚರಿಸುತ್ತೇವೆ. ನನ್ನ ಪತಿ ಆಸಿಫ್ ಖಾನ್ ಅವರು ಕೂಡ ನನ್ನ ನಂಬಿಕೆಯನ್ನು ಬೆಂಬಲಿಸುತ್ತಾರೆ ಮತ್ತು ಇಡೀ ಕುಟುಂಬ ಹಬ್ಬವನ್ನು ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮನವಿ ಸಲ್ಲಿಸಲು ಬಂದ ಮಹಿಳೆಗೆ ಗದರಿದ ಅರವಿಂದ ಲಿಂಬಾವಳಿ
Advertisement
Advertisement
ಗಣೇಶ ಚತುರ್ಥಿ ಹಿಂದೂ ಪಂಚಾಂಗದ ಪ್ರಕಾರ ತಿಂಗಳ ಭಾದ್ರಪದದ ನಾಲ್ಕನೇ ದಿನದಂದು ಪ್ರಾರಂಭವಾಗುತ್ತದೆ. ಮಹಾರಾಷ್ಟ್ರ, ಪಶ್ಚಿಮ ಮತ್ತು ದಕ್ಷಿಣ ಭಾರತದ ಹಲವೆಡೆ ಗಣೇಶನ ಆಶೀರ್ವಾದವನ್ನು ಪಡೆಯಲು ಲಕ್ಷಾಂತರ ಭಕ್ತರು ಒಟ್ಟಿಗೆ ಸೇರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ.