ಚಂಡೀಗಢ: 16 ವರ್ಷಕ್ಕಿಂತ ಮೇಲ್ಪಟ್ಟ ಮುಸ್ಲಿಂ ಹುಡುಗಿಯರು ತನ್ನ ಆಯ್ಕೆಯ ವ್ಯಕ್ತಿಯೊಂದಿಗೆ ವಿವಾಹ ಮಾಡಿಕೊಳ್ಳಬಹುದು ಎಂದು ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ತೀರ್ಪು ನೀಡಿದೆ.
ರಕ್ಷಣೆ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದ ಪಠಾಣ್‍ಕೋಟ್ ಮೂಲದ ಮುಸ್ಲಿಂ ದಂಪತಿಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ ನ್ಯಾಯಮೂರ್ತಿ ಜಸ್ಜಿತ್ ಸಿಂಗ್ ಬೇಡಿ ಅವರ ಏಕಸದಸ್ಯ ಪೀಠ ಈ ಆದೇಶ ಪ್ರಕಟಿಸಿದೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಆಸ್ಕರ್ ಪ್ರಶಸ್ತಿ ವಿಜೇತ ನಿರ್ದೇಶಕ ಅರೆಸ್ಟ್
Advertisement
Advertisement
ಅರ್ಜಿದಾರರು ತಮ್ಮ ಕುಟುಂಬ ಸದಸ್ಯರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದರು ಎಂಬ ಕಾರಣಕ್ಕಾಗಿ, ಅವರು ಭಾರತದ ಸಂವಿಧಾನದ ಮೂಲಭೂತ ಹಕ್ಕುಗಳಿಂದ ವಂಚಿತರಾಗಲು ಸಾಧ್ಯವಿಲ್ಲ ಎಂದು ಪೀಠ ಹೇಳಿದೆ.
Advertisement
ಇಸ್ಲಾಮಿಕ್ ಶರಿಯಾ ನಿಯಮವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಬೇಡಿ, ಮುಸ್ಲಿಂ ವೈಯಕ್ತಿಕ ಕಾನೂನು ಅಡಿ ಮುಸ್ಲಿಂ ಮದುವೆಯನ್ನು ಮಾನ್ಯ ಮಾಡಲಾಗುತ್ತದೆ ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ.
Advertisement
ಸರ್ ದಿನ್ಶಾ ಫರ್ದುಂಜಿ ಮುಲ್ಲಾ ಅವರ ‘ಪ್ರಿನ್ಸಿಪಲ್ಸ್ ಆಫ್ ಮೊಹಮ್ಮದನ್ ಲಾ’ ಪುಸ್ತಕದ ಆರ್ಟಿಕಲ್ 195 ರ ಪ್ರಕಾರ, ಹುಡುಗಿ 16 ವರ್ಷಕ್ಕಿಂತ ಮೇಲ್ಪಟ್ಟವಳಾಗಿದ್ದು, ಹುಡುಗ 21 ವರ್ಷ ಮೀರಿದರೆ ಮದುವೆಯಾಗಬಹುದು. ಈ ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ಕಾನೂನುಗಳ ಪ್ರಕಾರ ಪ್ರಾಪ್ತರಾದ ಕಾರಣ ಮದುವೆ ಕಾನೂನುಬದ್ಧವಾಗಿದೆ ಎಂದು ಉಲ್ಲೇಖಿಸಿದ್ದಾರೆ.
ದಂಪತಿಗೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಮತ್ತು ಕಾನೂನಿನ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಎಸ್‍ಎಸ್‍ಪಿ ಪಠಾಣ್‍ಕೋಟ್‍ಗೆ ಕೋರ್ಟ್ ನಿರ್ದೇಶನ ನೀಡಿದೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರೋಧಿಸಿ ಬೆಳಗಾವಿ ಬಂದ್ ಕರೆ – ರ‍್ಯಾಪಿಡ್ ಆಕ್ಷನ್ ಫೋರ್ಸ್‌ನಿಂದ ಪಂಥ ಸಂಚಲನ
ಅರ್ಜಿದಾರರ ಪ್ರಕಾರ, ದಂಪತಿಯ ವಿವಾಹ 2022 ಜೂನ್ 8 ರಂದು ಮುಸ್ಲಿಂ ವಿಧಿಗಳು ಮತ್ತು ಸಮಾರಂಭಗಳ ಪ್ರಕಾರ ನೆರವೇರಿಸಲಾಯಿತು. ಆದರೆ, ಅವರ ಕುಟುಂಬಗಳು ಈ ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಅವರ ಅನುಮತಿಯಿಲ್ಲದೆ ಮದುವೆಯಾಗಿದ್ದಕ್ಕಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದರು.