ಲಕ್ನೋ: ಬಿಜೆಪಿ ಆಡಳಿತದಲ್ಲಿ ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸುತ್ತಿರುವ ಮೋದಿ ಅವರು, ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ಸುರಕ್ಷಿತವಾಗಿದ್ದಾರೆ. ಆ ಸಮುದಾಯದ ಹೆಣ್ಣು ಮಕ್ಕಳು ಶಾಲೆ ಹಾಗೂ ಕಾಲೇಜುಗಳಿಗೆ ಹೋಗುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಮತ್ತೆ ಶಾಸಕನಾದ್ರೆ ಮುಸ್ಲಿಮರು ಟೋಪಿ ತೆಗೆದು ತಿಲಕ ಇಡುವಂತೆ ಮಾಡ್ತೀನಿ: ಬಿಜೆಪಿ ಶಾಸಕ
Advertisement
Advertisement
ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ನಮ್ಮ ಮುಸ್ಲಿಂ ಹೆಣ್ಣು ಮಕ್ಕಳು ವಿದ್ಯಾಭ್ಯಾಸಕ್ಕೆ ಹೋಗುವಾಗ ಬೀದಿಗಳಲ್ಲಿ ಕಿಡಿಗೇಡಿಗಳಿಂದ ಸಾಕಷ್ಟು ತೊಂದರೆ ಎದುರಿಸುತ್ತಿದ್ದರು. ಆದರೆ ಈಗ ನಮ್ಮ ಸರ್ಕಾರ ಅಪರಾಧಿಗಳನ್ನು ಕಸ್ಟಡಿಗೆ ತೆಗೆದುಕೊಂಡಿದ್ದು, ಹೆಣ್ಣು ಮಕ್ಕಳಲ್ಲಿ ಭದ್ರತೆ ಭಾವ ಮೂಡಿದೆ ಎಂದಿದ್ದಾರೆ.
Advertisement
ಪ್ರತಿ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಮೈತ್ರಿ ಪಕ್ಷಗಳನ್ನು ಬದಲಾಯಿಸುತ್ತಿರುವ ಬಗ್ಗೆ ಮಾತನಾಡಿ, ಅವರು ತಮ್ಮ ಮಿತ್ರಪಕ್ಷಗಳನ್ನು ಬದಲಾಯಿಸುತ್ತಲೇ ಇರುವಾಗ ರಾಜ್ಯದ ಜನತೆಗೆ ಹೇಗೆ ಸೇವೆ ಸಲ್ಲಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮುಸ್ಲಿಮರ ಎಲ್ಲಾ ಚಿಹ್ನೆಗಳನ್ನು ನಾಶ ಮಾಡ್ತಿದೆ ಬಿಜೆಪಿ: ಹಿಜಬ್ ಕುರಿತು ಮುಫ್ತಿ ಪ್ರತಿಕ್ರಿಯೆ
Advertisement
ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಲೋಕ ದಳ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ. 2017ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಎಸ್‌ಪಿ ಮೈತ್ರಿ ಮಾಡಿಕೊಂಡಿತ್ತು. ಅಂತೆಯೇ 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಎಸ್‌ಪಿಯೊಂದಿಗೆ ಮೈತ್ರಿ ಸಾಧಿಸಿತ್ತು.