ಬೆಂಗಳೂರು: ಒಬ್ಬ ಹೇಡಿ ಮಾಡಿದ ಕೃತ್ಯದಿಂದ ಇಡೀ ಸಮುದಾಯವನ್ನು ವಿರೋಧಿಸುವುದು ಸರಿಯಲ್ಲ. ನಮ್ಮ ಧರ್ಮದಲ್ಲಿ ಇಂತಹ ಕೃತ್ಯ ಮಾಡಿ ಎಂದು ಎಲ್ಲಿಯೂ ಹೇಳಿಲ್ಲ ಎಂದು ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಹೇಳಿಕೆ ನೀಡಿದ್ದಾರೆ.
Advertisement
ರಾಜಸ್ಥಾನದಲ್ಲಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದ ಟೈಲರ್‌ನನ್ನು ಬರ್ಬರವಾಗಿ ಹತ್ಯೆಗೈದ ಘಟನೆಗೆ ಜನರು ಮುಸ್ಲಿಂ ಸಮುದಾಯವನ್ನು ದೂಷಿಸುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಅಬ್ದುಲ್ ರಜಾಕ್, ಈ ಕೃತ್ಯ ಮಾಡಿದವರು ಹೇಡಿಗಳು. ಇವರ ಹಿಂದೆ ಯಾರೋ ಇದ್ದಾರೆ. ಎಲ್ಲಾ ಮುಗಿದು ಸಮಾಧಾನವಾಗಿದ್ದ ಸಂದರ್ಭದಲ್ಲಿ ಇಂತಹ ಘಟನೆ ನಡೆದಿದೆ ಎಂದು ಹೇಳಿದರು. ಇದನ್ನೂ ಓದಿ: ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಮುಸ್ಲಿಂ ಯುವಕರಿಂದ ಟೈಲರ್ ಶಿರಚ್ಛೇದ
Advertisement
Advertisement
ನಾನು ಈ ಘಟನೆಯನ್ನು ಖಂಡಿಸುತ್ತೇನೆ. ಅವರ ಹಿಂದೆ ಯಾರೋ ಇದ್ದಾರೆ ಎನ್ನುವುದು ಸತ್ಯ. ಘಟನೆ ಬಗ್ಗೆ ಸರ್ಕಾರ ತಕ್ಷಣ ತನಿಖೆ ನಡೆಸಿ, ಅವರನ್ನು ಗಲ್ಲಿಗೇರಿಸಬೇಕು. ನೂಪುರ್ ಶರ್ಮಾರನ್ನು ಕೂಡಾ ಬಿಡದೇ ಬಂಧಿಸಬೇಕು. ಅವರನ್ನೂ ಕಾನೂನಿನ ಅಡಿಯಲ್ಲಿ ಶಿಕ್ಷೆಗೆ ಒಳಪಡಿಸಬೇಕು. ಇಂತಹ ಘಟನೆಗಳಿಂದ ಒಂದೇ ಸಮುದಾಯವನ್ನು ಟಾರ್ಗೆಟ್ ಮಾಡಬೇಡಿ ಎಂದು ಅಬ್ದುಲ್ ರಜಾಕ್ ಮನವಿ ಮಾಡಿಕೊಂಡರು. ಇದನ್ನೂ ಓದಿ: ಟೈಲರ್ ಶಿರಚ್ಛೇದನ ಮಾಡಿದ ಮುಸ್ಲಿಂ ಯುವಕರು ಕೆಲವೇ ಗಂಟೆಗಳಲ್ಲಿ ಅರೆಸ್ಟ್
Advertisement
Live Tv