ಬಿಜೆಪಿ ಗೆಲುವು ಸಂಭ್ರಮಿಸಿದ ಮುಸ್ಲಿಂ ವ್ಯಕ್ತಿಯ ಹತ್ಯೆ – ತನಿಖೆಗೆ ಆದೇಶಿಸಿದ ಯೋಗಿ

Public TV
2 Min Read
Yogi

ಲಕ್ನೋ: ಉತ್ತರ ಪ್ರದೇಶದ ಕುಶಿನಗರದಲ್ಲಿ ಭಾರತೀಯ ಜನತಾ ಪಕ್ಷ ಪರ ಪ್ರಚಾರ ನಡೆಸಿದ ಮುಸ್ಲಿಂ ವ್ಯಕ್ತಿಯನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.

ಮೃತ ದುರ್ದೈವಿಯನ್ನು ಬಾಬರ್ ಅಲಿ(25) ಎಂದು ಗುರುತಿಸಲಾಗಿದ್ದು, ಚುನಾವಣಾ ಸಮಯದಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದರು. ಅಲ್ಲದೇ ಇತ್ತೀಚೆಗೆ ರಾಜ್ಯದಲ್ಲಿ ಬಿಜೆಪಿ ಗೆಲುವನ್ನು ಆಚರಿಸಿದ್ದರು. ಹೀಗಾಗಿ ಭಾನುವಾರ ಬಾಬರ್ ಅಲಿಯನ್ನು ನೆರೆಹೊರೆಯವರು ಥಳಿಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ SSLC ಪರೀಕ್ಷೆ – ಸಮವಸ್ತ್ರ ಧರಿಸಿದ್ರೆ ಮಾತ್ರ ಪ್ರವೇಶಕ್ಕೆ ಅನುಮತಿ

ಮಾರ್ಚ್ 20 ರಂದು ಬಾಬರ್ ಅಲಿ ಅವರನ್ನು ಕಥರ್‍ಗರ್ಹಿಯಲ್ಲಿ ಥಳಿಸಲಾಯಿತು. ನಂತರ ಅವರನ್ನು ಲಕ್ನೋದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಭಾನುವಾರ ಬಾಬರ್ ಅಲಿ ಮೃತದೇಹವನ್ನು ಅವರ ಸ್ವಗ್ರಾಮಕ್ಕೆ ಕೊಂಡೊಯ್ಯಲಾಗಿತ್ತು. ಆದರೆ ಅವರ ಕುಟುಂಬಸ್ಥರು ಅಂತ್ಯಕ್ರಿಯೆಯನ್ನು ಮಾಡಲು ನಿರಾಕರಿಸಿ, ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಬಾಬರ್ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ಕಾರಣ ಅವರ ನೆರೆಹೊರೆಯವರು ಈ ವಿಚಾರವಾಗಿ ಅಸಮಾಧಾನಗೊಂಡಿದ್ದರು. ಅಲ್ಲದೇ ಬಿಜೆಪಿಯನ್ನು ಬೆಂಬಲಿಸದಂತೆ ಅವರ ನೆರೆಹೊರೆಯವರು ಪದೇ, ಪದೇ ಎಚ್ಚರಿಕೆ ನೀಡಿದ್ದರು. ಆದರೂ ಮಾರ್ಚ್ 10 ರಂದು ಯುಪಿ ಅಸೆಂಬ್ಲಿ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿತು. ಇದಕ್ಕೆ ಬಾಬರ್ ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಿದ್ದರು. ಹೀಗಾಗಿ ಬಾಬರ್ ಅಲಿಯನ್ನು ದುಷ್ಕರ್ಮಿಗಳು ಕೊಂದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ:  ಹಿಂದುತ್ವದ ವಿರೋಧಿ ಆಗ್ಬೇಡಿ: ಕೇಜ್ರಿವಾಲ್‍ಗೆ ಅಸ್ಸಾಂ ಸಿಎಂ ತಿರುಗೇಟು

Share This Article
Leave a Comment

Leave a Reply

Your email address will not be published. Required fields are marked *