ಭೋಪಾಲ್: ರೈಲಿನಲ್ಲಿ ಒಟ್ಟಿಗೆ ಪ್ರಯಾಣಿಸುತ್ತಿದ್ದ ಎಂಬ ಕಾರಣಕ್ಕೆ ಮುಸ್ಲಿಂ ವ್ಯಕ್ತಿ ಹಾಗೂ ಹಿಂದೂ ವಿವಾಹಿತೆಯನ್ನು ಬಲವಂತವಾಗಿ ಕೆಳಗಿಳಿಸಿ ಬಜರಂಗದಳದ ಸದಸ್ಯರು ಉಜ್ಜಯಿನಿ ರೈಲ್ವೆ ಪೊಲೀಸ್ ಠಾಣೆಗೆ ಎಳೆದೊಯ್ದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಮುಸ್ಲಿಂ ವ್ಯಕ್ತಿ ಮತ್ತು ಹಿಂದೂ ಮಹಿಳೆ ರೈಲಿನಲ್ಲಿ ಜೊತೆಯಾಗಿ ಪ್ರಯಾಣಿಸಿದ್ದಾರೆ. ಇದು ಲವ್ ಜಿಹಾದ್ ಎಂದು ಭಜರಂಗದಳದ ಸದಸ್ಯರು ಆರೋಪಿಸಿದ್ದಾರೆ. ನಂತರ ಮುಸ್ಲಿಂ ವ್ಯಕ್ತಿಯನ್ನು ರೈಲಿನಿಂದ ಕೆಳಗಿಳಿಸಿ ಹಲ್ಲೆ ನಡೆಸಿ ಪೊಲೀಸ್ ಠಾಣೆಗೆ ಬಲವಂತವಾಗಿ ಎಳೆದುಕೊಂಡು ಹೋಗಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಸ್ನಾನದ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್‍ಮೇಲ್ ಮಾಡುತ್ತಾ ಅತ್ತಿಗೆಯನ್ನೇ ರೇಪ್ ಮಾಡ್ದ!
Advertisement
Advertisement
ಇಂದೋರ್‌ನ ಈ ಇಬ್ಬರು ಪ್ರಯಾಣಿಕರು ಮತ್ತು ಕುಟುಂಬದ ಸ್ನೇಹಿತರನ್ನು ಸರ್ಕಾರಿ ರೈಲ್ವೆ ಪೊಲೀಸರು ವಿಚಾರಣೆಗೆ ಒಳಪಡಿಸಿದರು. ಇವರಿಬ್ಬರ ಪೋಷಕರು ಬರುವವರೆಗೂ ಪೊಲೀಸ್ ಠಾಣೆಯಲ್ಲಿ ಕುಳಿತುಕೊಳ್ಳುವಂತೆ ಮಾಡಿದರು. ನಂತರ ಅವರ ಹೇಳಿಕೆಗಳನ್ನು ದಾಖಲಿಸಿ ಬಿಡುಗಡೆ ಮಾಡಿ ಕಳುಹಿಸಿದರು.
Advertisement
मुस्लिम लड़का और गैर मुस्लिम लड़की MP उज्जैन से ट्रेन में जा रहे थे, हिंदू संगठन वालों को खबर लगी तो वहाँ पहुँचकर लड़के को पीटते हुए थाने ले गए, जाँच के बाद पुलिस ने बताया कि लड़का और लड़की दोनों शादीशुदा हैं, दोनों में पारिवारिक संबंध भी है, जिसके बाद पुलिस ने उन्हें जाने दिया… pic.twitter.com/Q6u0md3pMC
— Ashraf Hussain (@AshrafFem) January 18, 2022
Advertisement
ಈ ಘಟನೆ ಜ.14ರಂದು ನಡೆದಿದೆ. ಮುಸ್ಲಿಂ ವ್ಯಕ್ತಿ ಆಸಿಫ್ ಶೇಖ್ ಎಂದು ಗುರುತಿಸಲಾಗಿದ್ದು, ಈತ ಎಲೆಕ್ಟ್ರಾನಿಕ್ ಅಂಗಡಿಯೊಂದರ ಮಾಲೀಕ. ಮಹಿಳೆ ಖಾಸಗಿ ಶಾಲೆಯೊಂದರ ಶಿಕ್ಷಕಿಯಾಗಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ಬಾಂಗ್ಲಾ ನಟಿ ಶವವಾಗಿ ಗೋಣಿಚೀಲದಲ್ಲಿ ಪತ್ತೆ
ನಾವು ಭಜರಂಗದಳದವರು ಎಂದು ಪರಿಚಯಿಸಿಕೊಂಡಿರುವ ಮೂವರು ಸದಸ್ಯರು ಮುಸ್ಲಿಂ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ್ದಾರೆ. ಆತನನ್ನು ರೈಲ್ವೆ ಪೊಲೀಸ್ ಠಾಣೆಗೆ ಎಳೆದೊಯ್ಯುತ್ತಿದ್ದಾಗ, ಮಹಿಳೆಯೂ ಅವರ ಹಿಂದೆ ಸಾಗುತ್ತಿರುವ ದೃಶ್ಯದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಮತ್ತೊಂದು ವೀಡಿಯೋದಲ್ಲಿ, ನಿಮ್ಮ ತಪ್ಪು ತಿಳಿವಳಿಕೆಯಿಂದ ನನ್ನ ಜೀವನವೇ ಹಾಳಾಯಿತು. ನಾನು ವಯಸ್ಕಳು, ಶಾಲೆಯಲ್ಲಿ ಶಿಕ್ಷಕಿಯಾಗಿ ಮಕ್ಕಳಿಗೆ ಬೋಧನೆ ಮಾಡುತ್ತಿದ್ದೇನೆ’ ಎಂದು ಭಜರಂಗದಳದ ಸದಸ್ಯನೊಬ್ಬನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದಳದ ಸದಸ್ಯನೊಬ್ಬ ಪಿಂಟು ಕೌಶಲ್ ಎಂದು ಗುರುತಿಸಲಾಗಿದ್ದು, ನಿನ್ನೊಂದಿಗೆ ನಾನು ಮಾತನಾಡುವುದಿಲ್ಲ ಎಂದು ಮಹಿಳೆಗೆ ಪ್ರತಿಕ್ರಿಯಿಸುತ್ತಿರುವುದು ಕಂಡುಬಂದಿದೆ.
ಘಟನೆ ಸಂಬಂಧ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ಗುಪ್ತ ಮಾತನಾಡಿ, ಶೇಖ್ ಮತ್ತು ಮಹಿಳೆ ತಮ್ಮ ಕುಟುಂಬದವರಿಂದ ಪರಸ್ಪರ ಪರಿಚಿತರು ಮತ್ತು ಸ್ನೇಹಿತರು. ಇದು ಲವ್ ಜಿಹಾದ್ ಎಂದು ಆರೋಪಿಸಿ ಭಜರಂಗದಳದವರು ಇಬ್ಬರನ್ನೂ ಠಾಣೆಗೆ ಕರೆತಂದಿದ್ದರು. ನಾವು ಅವರ ಹೇಳಿಕೆಗಳನ್ನು ದಾಖಲಿಸಿದ್ದೇವೆ. ಇಬ್ಬರೂ ವಯಸ್ಕರು, ಯಾವುದೇ ಅಪರಾಧವಿಲ್ಲದ ಕಾರಣ ಬಿಟ್ಟು ಕಳುಹಿಸಿದ್ದೇವೆ. ಭಜರಂಗದಳದವರ ವಿರುದ್ಧವೂ ಯಾವುದೇ ದೂರು ಕೇಳಿಬರದ ಕಾರಣ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ನಿಧನ
ಭಜರಂಗದಳದ ವಿದ್ಯಾರ್ಥಿಗಳ ವಿಭಾಗ ವಿಎಚ್‌ಪಿಯ ಮಾಳವ ಪ್ರಾಂತದ ಪ್ರಚಾರ ಪ್ರಮುಖ್ ಕುಂದನ್ ಚಂದ್ರಾವತ್ ಪ್ರತಿಕ್ರಿಯಿಸಿ, ಹಿಂದೂ ಮಹಿಳೆಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ದಾರಿ ತಪ್ಪಿಸಿ ತನ್ನೊಂದಿಗೆ ಕರೆದೊಯ್ಯುತ್ತಿದ್ದಾನೆ ಎಂಬ ಮಾಹಿತಿ ಬಲ್ಲ ಮೂಲಗಳಿಂದ ತಿಳಿದು ಬಂದಿತ್ತು. ಹಿಂದೂ ಸಹೋದರಿಯರ ರಕ್ಷಣೆಗಾಗಿ ನಮ್ಮ ಕಾರ್ಯಕರ್ತರು ಮಧ್ಯಪ್ರವೇಶಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು. ಈ ಪ್ರಕ್ರಿಯೆಯಲ್ಲಿ ವ್ಯಕ್ತಿ ಮತ್ತು ನಮ್ಮ ಸದಸ್ಯರೊಂದಿಗೆ ಸಣ್ಣ ಜಗಳವಾಗಿದೆ ಅಷ್ಟೇ. ಯಾವುದೇ ಹಲ್ಲೆ ಘಟನೆ ನಡೆದಿಲ್ಲ. ನಂತರ ಅವರನ್ನು ಪೊಲೀಸರು ಬಿಟ್ಟು ಕಳುಹಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.