ಬೆಂಗಳೂರು: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಹಲವು ಮುಸ್ಲಿಂ ಸಂಘಟನೆಗಳು ಇಂದು ಸಿಲಿಕಾನ್ ಸಿಟಿಯಲ್ಲಿ ಪ್ರತಿಭಟನೆ ನಡೆಸಿದವು.
ಟೌನ್ ಹಾಲ್ ಬಳಿ 10ಕ್ಕೂ ಹೆಚ್ಚು ಸಂಘಟನೆಗಳು ಸೇರಿಕೊಂಡು ಲೋಕಸಭೆಯಲ್ಲಿ ಅಂಗೀಕಾರವಾದ ಮುಸ್ಲಿಂಯೇತರ ಅಕ್ರಮ ವಲಸಿಗರಿಗೆ ಭಾರತ ಪೌರತ್ವ ನೀಡುವ ಈ ಮಸೂದೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಈ ಮಸೂದೆಯಿಂದ ಸಂವಿಧಾನದ ಪರಿಚ್ಛೇದ 14 ಮತ್ತು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಒಪ್ಪಂದಗಳ ಉಲ್ಲಂಘನೆಯಾಗಿದೆ. ದೇಶಕ್ಕೆ ಬಂದಿರುವ ನುಸುಳುಕೋರರನ್ನು ಹುಡುಕಿ. ಇದಕ್ಕೆಂದೆ ಪೊಲೀಸ್ ವ್ಯವಸ್ಥೆ ಇದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಪೌರತ್ವ ತಿದ್ದುಪಡಿ ಮಸೂದೆಗೆ ಇಮ್ರಾನ್ ಖಾನ್ ಆಕ್ರೋಶ
Advertisement
Advertisement
ಎಲ್ಲಾ ಮುಸಲ್ಮಾನರನ್ನು ಹೊರ ರಾಷ್ಟ್ರದಿಂದ ಬಂದಿದ್ದಾರೆ ಎಂದು ಬಿಂಬಿಸುವುದು ತಪ್ಪು. ಈ ಮಸೂದೆಯನ್ನು ಹಿಂಪಡೆಯದಿದ್ದರೆ ದೊಡ್ಡ ಮಟ್ಟದ ಪ್ರತಿಭಟನೆಯನ್ನು ನಡೆಸಲಾಗುವುದು ಎಂದು ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ.
Advertisement
ಪೌರತ್ವ ತಿದ್ದುಪಡಿ ಮಸೂದೆಯನ್ನು ಸೋಮವಾರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿ ಮಂಡಿಸಿದ್ದು, ಪಾಸ್ ಸಹ ಆಗಿದೆ. ಆದರೆ ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಭಾರೀ ಗದ್ದಲ ಎಬ್ಬಿಸಿದ್ದು, ಎಐಎಂಐಎಂ ನಾಯಕ ಅಸಾದುದ್ದಿನ್ ಓವೈಸಿ ಲೋಕಸಭೆಯಲ್ಲಿ ಮಸೂದೆಯ ಪ್ರತಿಯನ್ನೇ ಹರಿದು ಹಾಕುವ ಮೂಲಕ ತೀವ್ರ ಚರ್ಚೆಗೆ ಕಾರಣರಾಗಿದ್ದಾರೆ. ಇದನ್ನೂ ಓದಿ: ಪೌರತ್ವ ತಿದ್ದುಪಡಿ ಮಸೂದೆಯ ಪ್ರತಿ ಹರಿದು ಹಾಕಿದ ಓವೈಸಿ
Advertisement
ಮಸೂದೆಗೆ ಈಶಾನ್ಯ ರಾಜ್ಯಗಳು ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ವಿಪಕ್ಷಗಳು ಸಹ ಈ ಕುರಿತು ಭಾರೀ ಆಕ್ರೋಶ ವ್ಯಕ್ತಪಡಿಸುತ್ತಿವೆ. ಕಾಂಗ್ರೆಸ್ ಹಾಗೂ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸೇರಿದಂತೆ ಇತರೆ ವಿರೋಧ ಪಕ್ಷಗಳು ಪೌರತ್ವ ತಿದ್ದುಪಡಿ ಮಸೂದೆ ಅಸಂವಿಧಾನಿಕವಾಗಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಲೋಕಸಭೆಯಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಪಾಸ್ – ಪರ 311, ವಿರುದ್ಧ 80 ಮತ
ಈಶಾನ್ಯ ರಾಜ್ಯಗಳಲ್ಲಿಯೂ ಸಹ ಈ ಕುರಿತು ಜನಾಕ್ರೋಶ ಹೆಚ್ಚಾಗುತ್ತಿದೆ. ಅಕ್ರಮ ವಲಸಿಗರನ್ನು ಧಾರ್ಮಿಕ ಆಧಾರದ ಮೇಲೆ ಹೊರತಾಗಿಯೂ ಗಡಿಪಾರು ಮಾಡುವ 1985ರ ಅಸ್ಸಾಂ ಒಪ್ಪಂದವನ್ನು ರದ್ದುಗೊಳಿಸಿ, ಮಸೂದೆಯನ್ನು ಅಂಗೀಕಾರ ಮಾಡಲಾಗುತ್ತಿದೆ ಎಂದು ಈಶಾನ್ಯ ರಾಜ್ಯಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.