Connect with us

Dakshina Kannada

ಅನಂತ್ ಕುಮಾರ್ ಸಾವಿನಲ್ಲೂ ವಿಕೃತಿ ಮೆರೆದ ಮುಸ್ಲಿಂ ಪೇಜ್

Published

on

Share this

ಮಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನಕ್ಕೆ ದೇಶ, ರಾಜ್ಯದ ರಾಜಕಾರಣಿಗಳು ಮತ್ತು ಇತರರು ಕಂಬನಿ ಮಿಡಿಯುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಪೇಜ್ ಒಂದು ವಿಕೃತಿ ಮೆರೆದಿದೆ.

ಹೌದು. ಮಂಗಳೂರು ಮುಸ್ಲಿಂ ಪೇಜ್ ಎಂಬ ಫೇಸ್ ಬುಕ್ ಪೇಜ್ ನಲ್ಲಿ ಅನಂತ್ ಕುಮಾರ್ ನಿಧನದ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿದೆ. ಪೇಜ್ ನಲ್ಲಿ `ಜಾತಿ ರಾಜಕಾರಣ ಕುತಂತ್ರಿ ಬ್ರಾಹ್ಮಣ ಅನಂತ ಕುಮಾರ್ ಮೇಲೆ ಹೋಗಿಯೂ ಜಾತಿ ವಿಷ ಬೀಜ ಬಿತ್ತಬೇಡ’ ಎಂದು ಬರೆದು ಪೋಸ್ಟ್ ಮಾಡಲಾಗಿದೆ.

ಅಲ್ಲದೇ ಅನಂತ್ ಕುಮಾರ್ ಅವರ ಫೋಟೋ ಹಾಕಿ ಅದರ ಮೇಲೆ `ಜಾತಿ ಜಾತಿ ರಾಮ ರಾಮ ಅನ್ನುತ್ತಲೇ ಹೊಗೆ ಹಾಕಿಕೊಂಡ ಕೋಮುವಾದಿ ಅನಂತ್ ಕುಮಾರ್ ದೇಶ ಹಾಳು ಮಾಡಲು ಇನ್ನೊಮ್ಮೆ ಹುಟ್ಟಿ ಬರಬೇಡ’ ಎಂದು ಬರೆದುಕೊಳ್ಳುವ ಮೂಲಕ ತಮ್ಮ ವಿಕೃತ ಮನಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ.

ಪೇಜ್ ನಲ್ಲಿ ಪೋಸ್ಟ್ ಹಾಕುತ್ತಿದ್ದಂತೆಯೇ ಸಾವಿನಲ್ಲೂ ವಿಕೃತಿ ಮೆರೆದ ಮನಸ್ಥಿತಿಗಳ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೇ ಪೇಜ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತ್ ಕುಮಾರ್ (59) ಅವರು ಇಂದು ನಸುಕಿನ ಜಾವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ್ ಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸದ್ಯ ಅನಂತ ಕುಮಾರ್ ಅವರ ಮೃತದೇಹವನ್ನು ಸಚಿವರ ಬೆಂಗಳೂರು ನಿವಾಸದಲ್ಲಿ ಇಡಲಾಗಿದ್ದು, ಸಾರ್ವಜನಿಕರು ಮೃತರಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ.

ಮಂಗಳವಾರ ನಗರದ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅನಂತ್ ಕುಮಾರ್ ಅವರ ಅಂತ್ಯ ಸಂಸ್ಕಾರ ನಡೆಯಲಿದ್ದು, ಬೆಳಗ್ಗೆ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ.

https://www.youtube.com/watch?v=uK_SiBW5Ly0

https://www.youtube.com/watch?v=Xe5uJiq9Y18

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Click to comment

Leave a Reply

Your email address will not be published. Required fields are marked *

Advertisement