ನವದೆಹಲಿ: ಅಯೋಧ್ಯೆ ರಾಮಮಂದಿರ (Ayodhya Ram Mandir) ಉದ್ಘಾಟನೆ ಸಂದರ್ಭದಲ್ಲಿ ರೈಲಿನಲ್ಲಿ ಪ್ರಯಾಣಿಸಬೇಡಿ. ಎಲ್ಲರೂ ಮನೆಯಲ್ಲೇ ಇರಿ ಎಂದು ಮುಸ್ಲಿಮರಿಗೆ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಅಧ್ಯಕ್ಷ ಬದ್ರುದ್ದೀನ್ ಅಜ್ಮಲ್ (Badruddin Ajmal) ಕರೆ ನೀಡಿದ್ದಾರೆ.
ದಾರುಲ್ ಉಲೂನ್ ದಿಯೋಬಂದ್ನ ಹಳೆಯ ವಿದ್ಯಾರ್ಥಿಯೂ ಆಗಿರುವ ಅಜ್ಮಲ್ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ದೇಶದಾದ್ಯಂತ ಕರಸೇವಕರ (ಸ್ವಯಂಸೇವಕರ) ದೊಡ್ಡ ಚಳುವಳಿ ಇರುತ್ತದೆ. ಬಾಬ್ರಿ ಮಸೀದಿ ಧ್ವಂಸದ ನಂತರ ನಡೆದ ಘಟನೆಗಳು ಪುನರಾವರ್ತನೆಯಾಗುವುದನ್ನು ನಾವು ಬಯಸುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 51 ಇಂಚು ಎತ್ತರ, 1.5 ಟನ್ ತೂಕ ಇರಲಿದೆ ಅಯೋಧ್ಯೆ ರಾಮನ ವಿಗ್ರಹ
Advertisement
Advertisement
ಮುಸ್ಲಿಂ ಸಹೋದರರ ಹಿತಾಸಕ್ತಿ ಮತ್ತು ದೇಶದ ಶಾಂತಿಗಾಗಿ ಮುಸ್ಲಿಮರು ರೈಲಿನಲ್ಲಿ ಪ್ರಯಾಣಿಸುವುದನ್ನು ತಪ್ಪಿಸಿ ಮತ್ತು ಈ ಅವಧಿಯಲ್ಲಿ ಮನೆಯಲ್ಲೇ ಇರುವುದು ಸೂಕ್ತ ಎಂದು ಹೇಳಿದ್ದಾರೆ.
Advertisement
ಭಾರತದಾದ್ಯಂತ ಸ್ವಯಂಸೇವಕರು ರೈಲು ಮತ್ತು ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ಯುವಕರಿರುವ ರೈಲು ಕಂಪಾರ್ಟ್ಮೆಂಟ್ನಲ್ಲಿ ಒಂದೆರಡು ಮುಸ್ಲಿಮರು ಸಿಕ್ಕಿಹಾಕಿಕೊಂಡರೆ ಸಮಸ್ಯೆಯಾಗಬಹುದು. ಇದು ಕೋಮುವಾದ ಎಂದು ಕೆಲವರು ಭಾವಿಸಿದರೆ ಅದು ತಪ್ಪು. ಯಾವುದೇ ರೀತಿಯ ಘರ್ಷಣೆಯಾಗದಂತೆ ಜನರನ್ನು ರಕ್ಷಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ವೈದಿಕ ಪಂಡಿತರಿಗಾಗಿ ಕ್ರಿಕೆಟ್ ಟೂರ್ನಿ – ವಿಜೇತರಿಗೆ ಅಯೋಧ್ಯೆ ಟ್ರಿಪ್
Advertisement
ಜನವರಿ 22 ರಂದು ರಾಮಮಂದಿರದಲ್ಲಿ ನಡೆಯುವ ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಭಾರತ ಮತ್ತು ವಿದೇಶದಿಂದ ಹಲವಾರು ವಿವಿಐಪಿ ಅತಿಥಿಗಳು ಅಯೋಧ್ಯೆಯಲ್ಲಿ ಶುಭ ಸಂದರ್ಭದಲ್ಲಿ ಭಾಗವಹಿಸಲು ಆಹ್ವಾನಗಳನ್ನು ಸ್ವೀಕರಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮಲಲ್ಲಾ (ಶಿಶು ಭಗವಾನ್ ರಾಮ) ಅವರ ಪ್ರಾಣ ಪ್ರತಿಷ್ಠಾ (ಪ್ರತಿಷ್ಠಾಪನೆ) ಸಮಾರಂಭ ಜ.22 ರಂದು ನಡೆಯಲಿದೆ. ಇದಕ್ಕೂ ಒಂದು ವಾರದ ಮೊದಲು ಅಂದರೆ ಜನವರಿ 16 ರಿಂದ ವೈದಿಕ ಆಚರಣೆಗಳು ಪ್ರಾರಂಭವಾಗುತ್ತವೆ. ಇದನ್ನೂ ಓದಿ: ಉತ್ತರ ಪ್ರದೇಶದ ಎಲ್ಲಾ ಜೈಲುಗಳಲ್ಲೂ ರಾಮಮಂದಿರ ಉದ್ಘಾಟನೆ ನೇರಪ್ರಸಾರ