CrimeLatestMain PostNational

ಗುಂಡು ಹಾರಿಸಿ ಮುಸ್ಲಿಂ ಆಧ್ಯಾತ್ಮಿಕ ನಾಯಕ ಸೂಫಿ ಬಾಬಾನ ಹತ್ಯೆ

Advertisements

ಮುಂಬೈ: ಅಫ್ಘಾನಿಸ್ತಾನ ಮೂಲದ 35 ವರ್ಷದ ಮುಸ್ಲಿಂ ಆಧ್ಯಾತ್ಮಿಕ ನಾಯಕನನ್ನು ಮಹಾರಾಷ್ಟ್ರದ ನಾಸಿಕ್‍ನಲ್ಲಿ ಮಂಗಳವಾರ ಗುಂಡಿಕ್ಕಿ ಕೊಲ್ಲಲಾಗಿದೆ.

ಸೂಫಿ ಬಾಬಾ ಎಂದೇ ಖ್ವಾಜಾ ಸಯ್ಯದ್ ಚಿಶ್ತಿ ಅವರು ಫೇಮಸ್ ಆಗಿದ್ದರು. ಮುಂಬೈನಿಂದ ಸುಮಾರು 200 ಕಿಮೀ ದೂರದಲ್ಲಿರುವ ಯೋಲಾ ಪಟ್ಟಣದ ಎಂಐಡಿ ಪ್ರದೇಶದ ತೆರೆದ ಜಾಗದಲ್ಲಿ ಹಣೆಗೆ ಗುಂಡು ಹಾರಿಸಿ ಸೂಫಿ ಬಾಬಾನನ್ನು ಕೊಲ್ಲಲಾಗಿದೆ. ಸೂಫಿ ಬಾಬಾ ಅವರನ್ನು ಕೊಂದ ನಂತರ ಆರೋಪಿ ಬಳಸುತ್ತಿದ್ದ ಎಸ್‍ಯುವಿಯನ್ನು ವಶಪಡಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿಯ ಪತ್ತೆಗೆ SDRF ತಂಡ ಆಗಮನ

ಈ ಪ್ರಕರಣದ ಪ್ರಮುಖ ಆರೋಪಿ ಸೂಫಿ ಬಾಬಾನ ಚಾಲಕನೇ ಎಂದು ಹೇಳಲಾಗುತ್ತಿದೆ. ಸಯ್ಯದ್ ಚಿಶ್ತಿ ಹಲವಾರು ವರ್ಷಗಳಿಂದ ನಾಸಿಕ್‍ನ ಯೋಲಾ ಪಟ್ಟಣದಲ್ಲಿ ವಾಸಿಸುತ್ತಿದ್ದರು. ಈ ಹತ್ಯೆಯ ಹಿಂದಿನ ಉದ್ದೇಶ ಏನು ಎಂಬುವುದರ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ ಎಂದಿದ್ದಾರೆ. ಸದ್ಯ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸಂಭವಾಮಿ ಯುಗೇ ಯುಗೇ – ಗೀತೋಪದೇಶದ ಸಾಲನ್ನು ಪೋಸ್ಟ್ ಮಾಡಿದ್ದ ಗುರೂಜಿ ಹಂತಕ

Live Tv

Leave a Reply

Your email address will not be published.

Back to top button