ಬೆಳಗಾವಿ: ನಗರದ ಲಿಂಗರಾಜ ಕಾಲೇಜಿನಲ್ಲಿ ನಡೆಯುತ್ತಿರುವ ಆಂತರಿಕ ಪರೀಕ್ಷೆಗೆ ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುತ್ತಿಲ್ಲ ಎಂದು ಆಗ್ರಹಿಸಿ 40ಕ್ಕೂ ಅಧಿಕ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
Advertisement
ಹಿಜಬ್ ನಮ್ಮ ಹಕ್ಕು, ನಮ್ಮ ಧರ್ಮ ಪಾಲನೆ ಜೊತೆಗೆ ಶಿಕ್ಷಣವು ಮುಖ್ಯ. ನಾವು ಭಾರತೀಯರು ಮೊದಲಿನಿಂದಲೂ ಹಿಜಬ್ ಧರಿಸಿಕೊಂಡೇ ಕಾಲೇಜಿಗೆ ತೆರಳಿ ಪರೀಕ್ಷೆ ಬರೆಯುತ್ತಿದ್ದೆವು. ಆದರೆ ಇಂದು ಏಕಾಏಕಿ ಕಾಲೇಜಿನ ಆಡಳಿತ ಮಂಡಳಿ ಹಿಜಬ್ ತೆಗೆದು ಪರೀಕ್ಷೆ ಬರೆಯುವಂತೆ ಹೇಳಿದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದರು. ಇದನ್ನೂ ಓದಿ: ಇಂಟಲಿಜೆನ್ಸ್ ಈಶ್ವರಪ್ಪ ಹತ್ರ ಇದೆಯಾ..?- ಪ್ರಿಯಾಂಕ್ ಖರ್ಗೆ ಕಿಡಿ
Advertisement
Advertisement
ಲಿಂಗರಾಜ ಪದವಿ ಮಹಾವಿದ್ಯಾಲಯದಲ್ಲಿ ಯಾವುದೇ ಸಮವಸ್ತ್ರವಿಲ್ಲ. ಆದರೆ ಕಾಲೇಜು ಆಡಳಿತ ಮಂಡಳಿಯವರು ನಮ್ಮ ವಿರುದ್ಧ ನಡೆದುಕೊಳ್ಳುತ್ತಿರುವುದು ನಮ್ಮ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಲಿಂಗರಾಜ ಕಾಲೇಜಿನ ಆಡಳಿತ ಮಂಡಳಿಯರೊಂದಿಗೆ ಮಾತುಕತೆ ನಡೆಸಲಿ. ಹಿಜಬ್ ಧರಿಸಲು ಅನುಮತಿ ನೀಡುವಂತೆ ಸೂಚಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಲಿಂಗರಾಜ ಪದವಿ ಮಹಾವಿದ್ಯಾಲಯದ 40ಕ್ಕೂ ಅಧಿಕ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಇದನ್ನೂ ಓದಿ: 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ