ಶಿವಮೊಗ್ಗ: ಅಯೋಧ್ಯೆಯಲ್ಲಿ ಶ್ರೀರಾಮ (Ayodhya Ram Mandir) ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯೊಬ್ಬರು ಅಲ್ಲಾಹು ಅಕ್ಬರ್ (Allahu Akbar) ಎಂದು ಘೋಷಣೆ ಕೂಗಿದ ಘಟನೆ ನಡೆಯಿತು.
ಶಿವಮೊಗ್ಗದ (Shivamogga) ಶಿವಪ್ಪನಾಯಕ ವೃತ್ತದಲ್ಲಿ, ಬಾಲರಾಮ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತರು ಸಿಹಿ ವಿತರಿಸಿದರು. ಈ ವೇಳೆ ಹಿಂದೂ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದರು. ಅದೇ ದಾರಿಯಲ್ಲಿ ಬಂದ ಮುಸ್ಲಿಂ ಮಹಿಳೆಯಿಂದ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಾರೆ. ನೀವು ಮೋದಿ ಪರ ಕೆಲಸ ಮಾಡ್ತಿದ್ದೀರಾ ಎಂದು ಈ ವೇಳೆ ಪೊಲೀಸರಿಗೆ ಮುಸ್ಲಿಂ ಮಹಿಳೆಯರು ಅವಾಜ್ ಹಾಕಿದ್ದಾರೆ. ಇದನ್ನೂ ಓದಿ: ಟೆಂಟ್ ಹೌಸ್‌ನಲ್ಲಿದ್ದ ಗೊಂಬೆ ಎಂದಿದ್ದ ಸಚಿವ ಕೆ.ಎನ್.ರಾಜಣ್ಣ ಕುಟುಂಬದಿಂದ ರಾಮ ಜಪ
Advertisement
Advertisement
ಸ್ಥಳದಲ್ಲಿದ್ದ ಹಿಂದೂ ಕಾರ್ಯಕರ್ತರು ಮುಸ್ಲಿಂ ಮಹಿಳೆಯರ ಹೇಳಿಕೆಗೆ ಪ್ರತಿರೋಧ ವ್ಯಕ್ತಪಡಿಸಿದ್ದಾರೆ. ಪ್ರತಿಯೊಬ್ಬರಿಂದಲೂ ಜೈ ಶ್ರೀರಾಮ್ ಘೋಷಣೆ ಮೊಳಗಿಬಂತು. ಮುಸ್ಲಿಂ ಮಹಿಳೆ ಬಂಧಿಸುವಂತೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ್ ಅವರು ಪೊಲೀಸರನ್ನು ಒತ್ತಾಯಿಸಿದರು. ಮುಸ್ಲಿಂ ಮಹಿಳೆ ನ್ಯೂಸೆನ್ಸ್ ಮಾಡ್ತಿದ್ದರೂ ಸುಮ್ಮನಿದ್ದೀರಾ ಎಂದು ಕಾಂತೇಶ್ ಪೊಲೀಸರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಮುಸ್ಲಿಂ ಮಹಿಳೆಯನ್ನು ವಶಕ್ಕೆ ಪಡೆದು ಜೀಪಿನಲ್ಲಿ ಪೊಲೀಸರು ಕರೆದೊಯ್ದರು.
Advertisement
Advertisement
ಘಟನೆ ಬಳಿಕ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆಕೆಯ ಪೂರ್ವಾಪರ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಬಗ್ಗೆ ಮಾಹಿತಿ ತಿಳಿದುಬಂದಿದೆ. 2018 ರಿಂದ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾನಸಿಕ ರೋಗಕ್ಕೆ ಮಹಿಳೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಮಹಿಳೆ ತಂದೆ ಪೊಲೀಸರಿಗೆ ದಾಖಲೆಗಳನ್ನು ನೀಡಿದ್ದಾರೆ. ಮಾನಸಿಕ ಕಾಯಿಲೆಗೆ ಮುಸ್ಲಿಂ ಮಹಿಳೆ ಚಿಕಿತ್ಸೆ ಪಡೆಯುತ್ತಿರುವ ಬಗ್ಗೆ ಎಸ್‌ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಾಲರಾಮನ ಪ್ರಾಣಪ್ರತಿಷ್ಠೆ ಸಂಪನ್ನ – ಅಯೋಧ್ಯೆಯಲ್ಲಿ ಅಂಬಾನಿ ಕುಟುಂಬ ಸಂಭ್ರಮ