– ಪಾಲಿಕೆ ಸದಸ್ಯ ಅಜ್ಮಲ್ ಬೇಗ್‍ರಿಂದ ಬಿಬಿಎಂಪಿಗೆ ಮನವಿ
– ಕರೆ ಮಾಡಿದ್ರೆ ಮೊಬೈಲ್ ಈಗ ಸ್ವಿಚ್ ಆಫ್
ಬೆಂಗಳೂರು: ಅಲ್ಪಸಂಖ್ಯಾತ ಮತದಾರರನ್ನು ಓಲೈಸಲು ಬಾಪೂಜಿನಗರದ ಬಿಬಿಎಂಪಿ ಪಾಲಿಕೆ ಸದಸ್ಯ ಅಜ್ಮಲ್ ಬೇಗ್ ಬೆಂಗಳೂರಿನ ರಸ್ತೆಗಳಿಗೆ ಮುಸ್ಲಿಂ ಸಮುದಾಯ ಹೆಸರನ್ನು ಮರುನಾಮಕರಣ ಮಾಡಲು ಹೊರಟಿದ್ದಾರೆ.
ಉತ್ತರ ಪ್ರದೇಶದ ಯೋಗಿ ಅದಿತ್ಯನಾಥ್ ಸರ್ಕಾರ ಅಲಹಾಬಾದ್ ಬದಲು ಪ್ರಯಾಗ್‍ರಾಜ್ ಹೆಸರನ್ನು ಮರುನಾಮಕರಣ ಮಾಡಿದ ಬೆನ್ನಲ್ಲೇ ಅಜ್ಮಲ್ ಬೇಗ್ ಅವರು ನಗರದ ರಸ್ತೆಗಳಿಗೂ ಮುಸ್ಲಿಮರ ಹೆಸರನ್ನು ಇಡುವಂತೆ ಬಿಬಿಎಂಪಿಗೆ ಮನವಿ ಮಾಡಿಕೊಂಡಿದ್ದಾರೆ.
Advertisement
Advertisement
ಯಾವ ರಸ್ತೆಗೆ ಯಾವ ಹೆಸರು?
ಖಾದ್ರಿ ಶಾಮಣ್ಣ ಅಂಡರ್ ಪಾಸ್ ನ ಪೈಪ್ ಲೈನ್ ರಸ್ತೆಗೆ ಗಫೂರ್ ರಸ್ತೆ, ಸುನ್ನಿ ಚೌಕದಿಂದ ಮೈಸೂರು ರಸ್ತೆವರೆಗಿನ ಪೈಪ್ ಲೈನ್ ರಸ್ತೆಗೆ ಸುಬಾನಿಯಾ ಮಸೀದಿ ಹೆಸರು, ಸಂತೋಷ್ ಟೆಂಟ್ ನಿಂದ ಶೋಭಾ ಟೆಂಟ್ ವರೆಗಿನ ರಸ್ತೆಗೆ ಜಾಮೀಯಾ ಮಸೀದಿ ಹೆಸರು, ಶಾಮಣ್ಣ ಗಾರ್ಡನ್ 6ನೇ ಕ್ರಾಸ್ ರಸೆಗೆ ಖುದಾದತ್ ಮಸೀದಿ ಹೆಸರು, ಬಾಪೂಜಿನಗರ 1ನೇ ಮುಖ್ಯ ರಸ್ತೆಗೆ ಹೀರಾ ಮಸೀದಿ ಎಂದು ನಾಮಕರಣ ಮಾಡುವಂತೆ ಬಿಬಿಎಂಪಿಗೆ ಮನವಿ ಸಲ್ಲಿಸಿದ್ದಾರೆ.
Advertisement
Advertisement
4 ತಿಂಗಳ ಹಿಂದೆ ಅಂದರೆ ಆಗಸ್ಟ್ 28ರಂದು ಅಜ್ಮಲ್ ಅವರು ಕೌನ್ಸಿಲ್ ಸಭೆಯಲ್ಲಿ ಈ ಪ್ರಸ್ತಾಪವನ್ನು ಇರಿಸಿದ್ದು, ಈಗ ತಡವಾಗಿ ಬೆಳಕಿಗೆ ಬಂದಿದೆ. ಅಜ್ಮಲ್ ಅವರ ಈ ಮನವಿಗೆ ವಿಪಕ್ಷ ಬಿಜೆಪಿ ನಾಯಕ ಪದ್ಮನಾಭ ರೆಡ್ಡಿ ಹಾಗೂ ಬಿಜೆಪಿ ಪಾಲಿಕೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸದ್ಯ ಮುಂದಿನ ಕೌನ್ಸಿಲ್ ಸಭೆಯಲ್ಲಿ ಮತ್ತೆ ಈ ಮನವಿಯ ಅರ್ಜಿಯ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ.
ಯಾಕೆ ಮರುನಾಮಕರಣಕ್ಕೆ ಮುಂದಾಗಿದ್ದೀರಿ ಎಂದು ಪ್ರಶ್ನೆ ಕೇಳಿದ್ದಕ್ಕೆ ಸಮುದಾಯದವರು ಒತ್ತಾಯ ಮಾಡಿದ್ದಕ್ಕೆ ಅರ್ಜಿ ಸಲ್ಲಿಸಿದ್ದೇನೆ ವಿನಃ ನನ್ನ ಸ್ವಾರ್ಥಕ್ಕಾಗಿ ನಾನು ಅರ್ಜಿ ಸಲ್ಲಿಸಿಲ್ಲ ಎಂದು ಹೇಳಿದ್ದರು. ಈ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರವಾಗಿ ಸಂಪರ್ಕಿಸಲು ಯತ್ನಿಸಿದಾಗ ಅಜ್ಮಲ್ ಬೇಗ್ ಬೆ ಮೊಬೈಲ್ ಸ್ವಿಚ್ ಆಫ್ ಆಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv