ಮಂಗಳೂರು: ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ದೇವಸ್ಥಾನಕ್ಕೆ ಆಹಾರ ಸಚಿವ ಯುಟಿಖಾದರ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿರೋದು ಇದೀಗ ಮುಸ್ಲಿಂ ಮೂಲಭೂತವಾದಿಗಳ ವಿರೋಧಕ್ಕೆ ಕಾರಣವಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಮಂಗಳೂರಿನ ಪ್ರಸಿದ್ಧ ಕೊರಗಜ್ಜನ ಕ್ಷೇತ್ರದಲ್ಲಿ ಕೊರಗಜ್ಜನಿಗೆ ನರ್ತನ ಸೇವೆ ನಡೆದಿತ್ತು. ಈ ಸಂದರ್ಭದಲ್ಲಿ ಸಚಿವ ಯುಟಿ ಖಾದರ್ ಕೂಡಾ ಭೇಟಿ ನೀಡಿದ್ದರು. ಅಲ್ಲದೇ ಸ್ವತಃ ದೈವ ಪಾತ್ರಿಯಿಂದ ಕೊರಗಜ್ಜನ ಪ್ರಸಾದವನ್ನೂ ಸ್ವೀಕರಿಸಿದ್ರು. ಆದರೆ ಇದೀಗ ಖಾದರ್ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿರೋದು ಮುಸ್ಲಿಂ ಮೂಲಭೂತವಾದಿಗಳ ಕಣ್ಣು ಕೆಂಪಾಗಿಸಿದೆ.
Advertisement
Advertisement
ಖಾದರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕವಾಗಿ ಟೀಕಿಸಿದ್ದು, ಮುಸ್ಲಿಂನಾಗಿ ಖಾದರ್ ಹಿಂದೂ ಕ್ಷೇತ್ರಕ್ಕೆ ಭೇಟಿ ನೀಡಿದ್ದು ತಪ್ಪು ಎಂದು ಟೀಕಿಸಿದ್ದಾರೆ. ಹಿಂದೂಗಳ ಕ್ಷೇತ್ರಕ್ಕೆ ಭೇಟಿ ನೀಡಿರೋದ್ರಿಂದ ಹಿಂದೂಗಳು ಮತವನ್ನು ನೀಡೋದಿಲ್ಲ. ಸುಮ್ಮನೆ ನಾಟಕವಾಡೋದು ಬಿಟ್ಟು ಮುಸ್ಲಿಂ ಧರ್ಮದ ಅನುಯಾಯಿಯಾಗಿ ಮುಂದುವರಿಯಿರಿ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ದೈವಕ್ಕೆ ಬೈಯ್ದಿದ್ದಕ್ಕೆ ಇಡೀ ಕುಟುಂಬಕ್ಕೆ ಅನಾರೋಗ್ಯ – ಕೊರಗಜ್ಜನಲ್ಲಿ ಯುವಕನಿಂದ ಕ್ಷಮೆಯಾಚನೆ
Advertisement
Advertisement
ಈ ಹಿಂದೆ ಕೇವಲ ಹಿಂದೂ ಸಂಘಟನೆಗಳ ಮುಖಂಡರು ಸೇರಿದಂತೆ ಬಿಜೆಪಿ ನಾಯಕರನ್ನು ಮಾತ್ರ ಗುರಿಯಾಗಿಸಿಕೊಂಡಿದ್ದ ಮುಸ್ಲಿಂ ಮೂಲಭೂತವಾದಿಗಳು, ಇದೀಗ ಸಚಿವರನ್ನೇ ಟಾರ್ಗೆಟ್ ಮಾಡಿರೋದು ಧರ್ಮ ಧರ್ಮಗಳ ನಡುವೆ ದ್ವೇಷ ಬಿತ್ತೋ ಹುನ್ನಾರ ನಡೀತಿರೋದು ಜನಸಾಮಾನ್ಯರ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಉಡುಪಿಯ ಕೊರಗಜ್ಜನ ಮಹಿಮೆ ಮತ್ತೊಮ್ಮೆ ಸಾಬೀತು- ಕದ್ದ ಬೆಳ್ಳಿ ಆಭರಣಗಳನ್ನು ಹಿಂದುರಿಗಿಸಿದ ಖದೀಮರು