ದರೋಡೆ, ಅತ್ಯಾಚಾರ, ಜೈಲಿಗೆ ಹೋಗೋದ್ರಲ್ಲಿ ಮುಸ್ಲಿಮರೇ ನಂ.1- ವಿವಾದಕ್ಕೀಡಾದ ಅಜ್ಮಲ್ ಹೇಳಿಕೆ

Public TV
1 Min Read
BADRUDDIN AJMAL

ಡಿಸ್ಪುರ್: ದರೋಡೆ, ಅತ್ಯಾಚಾರ, ಲೂಟಿ ಮಾಡುವುದರಲ್ಲಿ ನಾವೇ ನಂಬರ್ ಒನ್ ಎಂದು ಹೇಳುವ ಮೂಲಕ ಆಲ್ ಇಂಡಿಯಾ ಯುನೈಡೆಟ್ ಡೆಮಾಕ್ರಟಿಕ್ ಫ್ರಂಟ್ (AIUDF)  ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ (Badruddin Ajmal) ವಿವಾದಕ್ಕೀಡಾಗಿದ್ದಾರೆ.

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ತಮ್ಮ ಧರ್ಮದವರ ಬಗ್ಗೆಯೇ ಬಾಯಿಬಿಟ್ಟಿದ್ದಾರೆ. ಮುಸ್ಲಿಮರು ದರೋಡೆ, ಅತ್ಯಾಚಾರ. ಸುಲಿಗೆಯಂತಹ ಎಲ್ಲಾ ಅಪರಾಧಗಳಲ್ಲಿ ನಂಬರ್ ಒನ್ ಆಗಿದ್ದೇವೆ. ಜೈಲಿಗೆ ಹೋಗುವುದರಲ್ಲಿಯೂ ನಾವೇ ನಂಬರ್ ಒನ್ ಎಂದು ಹೇಳಿ ಫಜೀತಿಗೆ ಸಿಲುಕಿದ್ದಾರೆ.

ಅಜ್ಮಲ್ ಹೇಳಿಕೆಯ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಪರ ವಿರೋಧ ಚರ್ಚೆಗಳು ಕೂಡ ಹುಟ್ಟಿಕೊಂಡಿದೆ. ಅಲ್ಲದೆ ಮುಸ್ಲಿಂ ಸಂಘಟನೆಗಳ ನಾಯಕರು, ಧಾರ್ಮಿಕ ಗುರುಗಳೇ ಅಜ್ಮಲ್ ಹೇಳಿಕೆಯನ್ನು ಖಂಡಿಸಿದ್ದಾರೆ. ಇದನ್ನೂ ಓದಿ: 20 ಕೋಟಿ ಕೊಡಿ, ಇಲ್ಲದಿದ್ದರೆ ಕೊಲೆ ಮಾಡ್ತೀವಿ: ಮುಕೇಶ್ ಅಂಬಾನಿಗೆ ಬೆದರಿಕೆ

ಈ ಬೆನ್ನಲ್ಲೇ ಅಜ್ಮಲ್ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ತಮ್ಮ ಹೇಳಿಕೆಯನ್ನು ಒಪ್ಪಿಕೊಂಡಿರುವ ಅವರು, ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಶಿಕ್ಷಣದ ಕೊರತೆಯಿಂದ ಜನ ಈ ರೀತಿಯ ಕೃತ್ಯಗಳಿಗೆ ಮುಂದಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

Web Stories

Share This Article