ನವದೆಹಲಿ: ಬಾಂಗ್ಲಾದೇಶದಲ್ಲಿ (Bangladesh) ಇಸ್ಕಾನ್‌ನ (ISKCON) ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ (Chinmoy Krishna Das Brahmachari) ಅವರ ಬಂಧನವನ್ನು ಭಾರತ (India) ಖಂಡಿಸಿದೆ.
ಚಿನ್ಮಯ್ ಕೃಷ್ಣ ದಾಸ್ ಅವರ ಬಂಧನ ಮತ್ತು ಜಾಮೀನು ನಿರಾಕರಣೆಯ ಬಗ್ಗೆ ಭಾರತ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಅಲ್ಪ ಸಂಖ್ಯಾತರ ಧಾರ್ಮಿಕ ಸ್ಥಳಗಳನ್ನು ಅಪವಿತ್ರಗೊಳಿಸುವುದು ಸೇರಿದಂತೆ ಪದೇ ಪದೇ ದಾಳಿ ಮಾಡಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದೆ.
Advertisement
ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಸೇರಿದಂತೆ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ಸುರಕ್ಷತೆ ಹಾಗೂ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ನಾವು ಬಾಂಗ್ಲಾದೇಶದ ಅಧಿಕಾರಿಗಳನ್ನು ಭಾರತ ಒತ್ತಾಯಿಸಿದೆ.
Advertisement
ಚಿನ್ಮಯ್ ಕೃಷ್ಣ ದಾಸ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ಬಂಧಿಸಲಾಗಿದೆ. ಚಿತ್ತಗಾಂಗ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ದಾಸ್ ಅವರನ್ನು ಕಸ್ಟಡಿಗೆ ಪೊಲೀಸರು ಕೇಳದ ಕಾರಣ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅವರ ಬಂಧನದ ಅವಧಿಯಲ್ಲಿ ಎಲ್ಲಾ ಧಾರ್ಮಿಕ ಸವಲತ್ತುಗಳನ್ನು ನೀಡುವಂತೆಯೂ ಕೋರ್ಟ್ ನಿರ್ದೇಶಿಸಿದೆ.
Advertisement
Advertisement
ಅಕ್ಟೋಬರ್‌ನಲ್ಲಿ ಅವರು ಭಾಷಣ ಮಾಡಿದ ರ‍್ಯಾಲಿಯಲ್ಲಿ ಬಾಂಗ್ಲಾದೇಶದ ಧ್ವಜಕ್ಕೆ ಅಗೌರವ ತೋರಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು ಬಾಂಗ್ಲಾದೇಶದ ಮಾಧ್ಯಮಗಳು ವರದಿ ಮಾಡಿವೆ. ಕೇಸರಿ ಧ್ವಜವನ್ನು ಹಾರಿಸಿದ ಆರೋಪ ಹೊರಿಸಲಾದ 18 ಮಂದಿಯಲ್ಲಿ ಅವರು ಒಬ್ಬರು.
ದಾಸ್ ಅವರಿಗೆ ಜಾಮೀನು ನೀಡದಿದ್ದರೆ ಪಶ್ಚಿಮ ಬಂಗಾಳದ ಹಿಂದೂಗಳು ಪೆಟ್ರಾಪೋಲ್ ಗಡಿಯನ್ನು ಬಂದ್ ಮಾಡಿ ಪ್ರತಿಭಟಿಸುವುದಾಗಿ ಎಚ್ಚರಿಸಿದ್ದಾರೆ.