– ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಗೆ ಸ್ವಾಮೀಜಿ ಖಂಡನೆ
ರಾಯಚೂರು: ಮಠಮಾನ್ಯಗಳು, ದೇವಾಲಯಗಳು, ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಬೇಕು ಎಂದು ಮಂತ್ರಾಲಯ ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ (Subhudendra Theertha Swamiji) ಒತ್ತಾಯಿಸಿದ್ದಾರೆ.
ರಾಯಚೂರಿನಲ್ಲಿ (Raichuru) ರಾಷ್ಟ್ರಧರ್ಮ ಪಾಲನಾ ಸಮಿತಿ ರಚನೆ ವಿಚಾರವಾಗಿ ಮಾತನಾಡಿದ ಮಂತ್ರಾಲಯ ಶ್ರೀಗಳು, ಸ್ವಾತಂತ್ರ್ಯ ಪೂರ್ವದಲ್ಲಿ ಆಯಾ ದೇವಸ್ಥಾನ, ಮಠಗಳ ಆಯಾ ಶಿಷ್ಯರು, ಭಕ್ತರ, ಸಮುದಾಯ ಮುಖಂಡರ ನೇತೃತ್ವದಲ್ಲಿ ನಿರ್ವಹಣೆ, ಕಾರ್ಯಚಟುವಟಿಕೆ ನಡೆಯುತ್ತಿತ್ತು. ಈಗ ಲೌಕಿಕ ಕಾನೂನುಗಳಿಂದ ಇದೆಲ್ಲಾ ಸರ್ಕಾರದ ವಶದಲ್ಲಿ ಹೋಗಿದೆ. ಸರ್ಕಾರದ ರಾಜಕೀಯ ಹಿನ್ನೆಲೆಯಲ್ಲಿ ತಿರುಪತಿ ಲಡ್ಡುವಿನ (Tirupati Laddu Row) ಪ್ರಕರಣದಂತ ತೊಂದರೆಗಳು ಆಗುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ತಿರುಪತಿ ಪ್ರಸಾದದಲ್ಲಿ ಅಪವಿತ್ರ – ಶೃಂಗೇರಿ ಮಹಾಸ್ವಾಮಿಗಳಿಂದ ಉಪವಾಸ, ಮೌನ ವ್ರತ
ಆಯಾ ಪ್ರಾಂತದ ಮಠ, ದೇವಾಲಯಗಳು ಅಲ್ಲಿನ ಜನರ ನೇತೃತ್ವದಲ್ಲಿ ನಡೆಯಬೇಕು. ಇದಕ್ಕೆ ಸನಾತನ ಧರ್ಮ ಪರಿರಕ್ಷಣ ಸಂಬಂಧ ಯೋಜನೆಯನ್ನ ನಾವು ಕೂಡ ಬೆಂಬಲಿಸುತ್ತೇವೆ. ನಮ್ಮ ಊರಿನ ಆಚಾರ-ಸಂಪ್ರದಾಯ ಬಗ್ಗೆ ಬೇರೆ ಯಾರೋ ಬಂದು ಹೇಳುವುದಲ್ಲಾ. ನಮ್ಮ ಊರಿನ ಹಿರಿಯರು, ಸಮುದಾಯದ ಹಿರಿಯರು, ವಿದ್ವಾಂಸರು, ಮಠಾಧೀಶರ ನೇತೃತ್ವದಲ್ಲಿ ನಡೆಯಬೇಕು ಎಂದಿದ್ದಾರೆ.
ಮುಜರಾಯಿ ಇಲಾಖೆಯಿಂದ ಮಠ ಮಾನ್ಯಗಳು, ದೇವಾಲಯ, ಧಾರ್ಮಿಕ ಶ್ರದ್ಧಾ ಕೇಂದ್ರಗಳು ಮುಕ್ತವಾಗಬೇಕು ಅಂತಾ ಒತ್ತಾಯಿಸುತ್ತೇವೆ ಎಂದು ಮಂತ್ರಾಲಯ ಶ್ರೀಗಳು ಹೇಳಿದ್ದಾರೆ. ಇದನ್ನೂ ಓದಿ: ಅಪವಿತ್ರ ಆರೋಪ ನಡುವೆಯೂ ತಿರುಪತಿ ಲಡ್ಡುಗೆ ಬೇಡಿಕೆ – ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಲಡ್ಡು ಮಾರಾಟ