– ಬೇರೆ ಹುಡುಗಿಯನ್ನು ಮದುವೆಯಾಗಲು ಮುಂದಾಗಿದ್ದಕ್ಕೆ ಕೃತ್ಯ
ಲಕ್ನೋ: ಪ್ರೀತಿಯಿಂದ ಹಿಂದೆ ಸರಿದಿದ್ದಕ್ಕೆ 22 ವರ್ಷದ ಯುವತಿಯೊಬ್ಬಳು ತನ್ನ ಪ್ರಿಯಕರನನ್ನು ಹೋಟೆಲ್ ರೂಮ್‌ಗೆ ಕರೆಸಿ ಆತನ ಗುಪ್ತಾಂಗವನ್ನು ಕತ್ತರಿಸಿದ್ದಾಳೆ. ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಘಟನೆ ನಡೆದಿದೆ. 24 ವರ್ಷದ ತನ್ನ ಪ್ರಿಯಕರನಿಗೆ ಬೇರೊಬ್ಬ ಹುಡುಗಿಯ ಜೊತೆ ಮದುವೆ ನಿಶ್ಚಯವಾಗಿರುವುದು ಗೊತ್ತಾದ ಬಳಿಕ ಪ್ರಿಯತಮೆ ಈ ಕ್ರೂರ ಕೃತ್ಯ ಎಸಗಿದ್ದಾಳೆ. ಇವರಿಬ್ಬರೂ ಎಂಟು ವರ್ಷಗಳಿಂದ ಪ್ರೀತಿಸುತ್ತಿದ್ದರು.
ಆತ್ಮಹತ್ಯೆಗೆ ಯತ್ನ!:
ಹಲ್ಲೆಯ ನಂತರ ಯುವತಿ ತನ್ನ ಕೈಯ ನರವನ್ನು ಕತ್ತರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತನ್ನ ಮರ್ಮಾಂಗಕ್ಕೆ ಕತ್ತರಿಸುತ್ತಿದ್ದಂತೆಯೇ ಯುವಕ ಪೊಲೀಸರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ. ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ: ದೆಹಲಿ ಹೈಕೋರ್ಟ್
- Advertisement
- Advertisement
ಯುವತಿಗೆ ಸಿಟ್ಯಾಕೆ..?
ಯುವಕ ಮದುವೆಗೆ ತಯಾರಿ ನಡೆಸುತ್ತಿರುವ ವಿಷಯ ಯುವತಿಗೆ ಗೊತ್ತಾಗಿದೆ. ಹೀಗಾಗಿ ಆತನನ್ನು ಕೊನೆಯ ಬಾರಿ ನೋಡಬೇಕು ಎಂದು ಹೇಳಿ ಹೋಟೆಲ್ ಕೊಠಡಿಗೆ ಕರೆಸಿಕೊಂಡಿದ್ದಾಳೆ. ಬಳಿಕ ಯುವತಿ ಯುವಕನ ಗುಪ್ತಾಂಗವನ್ನು ಕತ್ತರಿಸಿದ್ದಾಳೆ. ಪೊಲೀಸರು ತಕ್ಷಣ ಬಂದು ಆಸ್ಪತ್ರೆಗೆ ಸೇರಿಸಿದ ಕಾರಣ ಯುವತಿ ಹಾಗೂ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ತಡರಾತ್ರಿ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ
ಗೊಂದಲದ ಹೇಳಿಕೆಗಳು!
ಕಾರಿನಲ್ಲಿಯೇ ಪ್ರಿಯತಮೆ ಈ ಕೃತ್ಯವೆಸಗಿದ್ದಾಳೆ ಎಂದು ಯುವಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಆದರೆ ಘಟನೆ ನಡೆದಿರುವುದು ಹೋಟೆಲ್‌ನಲ್ಲಿ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಶುರು ಮಾಡಿದ್ದು, ಇಬ್ಬರ ಮೊಬೈಲ್ ಫೋನ್‌ಗಳನ್ನೂ ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ ರೇಪ್ & ಮರ್ಡರ್ ಕೇಸ್ | ಘಟನಾ ಸ್ಥಳದಲ್ಲಿ ಪ್ರತಿರೋಧದ ಪುರಾವೆ ಇಲ್ಲ – ಸಿಬಿಐಗೆ CFSL ವರದಿ ಸಲ್ಲಿಕೆ