ರಾಜ್ಯದ ಜನತೆಗೆ ಮುಜರಾಯಿ ಇಲಾಖೆ ಗುಡ್‌ನ್ಯೂಸ್ – ವೈಷ್ಣೋದೇವಿಗೆ ತೆರಳುವ ಭಕ್ತರಿಗೆ 5,000 ಸಹಾಯಧನ

Public TV
1 Min Read
vaishno devi temple jammu kashmir

ಬೆಂಗಳೂರು: ರಾಜ್ಯದ ಜನತೆಗೆ ಮುಜರಾಯಿ ಇಲಾಖೆ (Muzrai Department) ಗುಡ್‌ನ್ಯೂಸ್ ನೀಡುವುದರ ಜೊತೆಗೆ ಹಲವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯದ ಧಾರ್ಮಿಕ ಪರಿಷತ್ತಿನಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಮಹತ್ವದ ನಿರ್ಧಾರಗಳು ಏನು?
* ವೈಷ್ಣೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನ ಘೋಷಣೆ.
* ವೈಷ್ಣೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ 5,000 ರೂ. ಸಹಾಯ ಧನ ನೀಡಲು ತೀರ್ಮಾನ.
* ಸರ್ಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ 3/4 ಎಕರೆ ಜಾಗದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಾಣಕ್ಕೆ ನಿರ್ಧಾರ.
* 120 ವರ್ಷಗಳ ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರ ಮಾಡಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲು ತೀರ್ಮಾನ.
* ಮಕ್ಕಳಿಗೆ ನೀಡುತ್ತಿರುವ ವಿದ್ಯಾ ಸಹಾಯ ಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈಗಾಗಲೇ ಮುಕ್ತಾಯವಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಅನುಕೂಲವಾಗುವಂತೆ ಡಿಸೆಂಬರ್ 31 ರವರೆಗೂ ಕಾಲಾವಕಾಶ.
* ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಸ್ತಿಯನ್ನು ಸರ್ವೆ ಮಾಡಿ, ಒತ್ತುವರಿ ತೆರವು ಮಾಡಿ ದಾಖಲೆ ಮಾಡಲು ಹಾಗೂ ಆಸ್ತಿಗಳನ್ನು ರಕ್ಷಿಸಲು ತೀರ್ಮಾನ.
* ಅವಧಿ ಮುಗಿಯುವ 14 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅವಧಿ ಮುಗಿದ ನಂತರ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲು, ಅರ್ಜಿ ಸ್ವೀಕಾರವಾಗಿರುವ 28 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅರ್ಜಿ ಸ್ವೀಕಾರವಾಗದೇ ಇರುವ 13 ದೇವಾಲಯಗಳಿಗೆ ಪುನಃ ಅರ್ಜಿ ಕರೆಯಲು ಹಾಗೂ ಬೇಲೂರು ಶ್ರೀ ಚನ್ನಕೇಶವ ದೇವಾಲಯದ ಖಾಲಿ ಇರುವ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ.

Share This Article