ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಮೈ ಹೀರೊ’ (My Hero) ಚಿತ್ರಕ್ಕೆ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಚಿಕ್ಕಮಗಳೂರಿನ ಸುಂದರ ಪರಿಸರದಲ್ಲಿ ಹತ್ತುದಿನಗಳ ಚಿತ್ರೀಕರಣ ನಡೆದಿದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ (Jilali Rej Kallah), ಬಾಲನಟ ವೇದಿಕ್ ಕೌಶಿಕ್ (Vedic Kaushik), ದತ್ತಣ್ಣ, ಪ್ರಕಾಶ್ ಬೆಳವಾಡಿ (Prakash Belawadi) , ನಿರಂಜನ್ ದೇಶಪಾಂಡೆ, ತನುಜಾ ಕೃಷ್ಣಪ್ಪ, “ಕಾಂತಾರ” ಖ್ಯಾತಿಯ ನವೀನ್ ಬೊಂದೇಲ್ ಮುಂತಾದವರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.
Advertisement
ಈ ತಿಂಗಳ ಕೊನೆಗೆ ದ್ವಿತೀಯ ಹಂತದ ಚಿತ್ರೀಕರಣ ಮಧ್ಯಪ್ರದೇಶದಲ್ಲಿ ಆರಂಭವಾಗಲಿದೆ. ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ ಮೂರ್ತಿ ಅವರ ಛಾಯಾಗ್ರಹಣ “ಮೈ ಹೀರೊ” ಚತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಮತ್ತು ಜಿಮ್ ಶಿವು ಸಂಭಾಷಣೆ ಬರೆಯುತ್ತಿದ್ದಾರೆ. ಇದನ್ನೂ ಓದಿ: ಸಾಲುಮರದ ತಿಮ್ಮಕ್ಕನ ಆಶೀರ್ವಾದ ಪಡೆದ ಹಿಂದಿ ನಟಿ
Advertisement
Advertisement
ವಿಶ್ವದಾದ್ಯಂತ ಇರುವ ಸಾಮಾಜಿಕ ಸಮಸ್ಯೆಯೊಂದನ್ನು ಕೇಂದ್ರವಾಗಿಟ್ಟುಕೊಂಡು ಅವಿನಾಶ್ ವಿಜಯಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದು ಅವರಿಗೆ ಚೊಚ್ಚಲ ನಿರ್ದೇಶನದ ಚಿತ್ರ. ಎ.ವಿ.ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ಅವಿನಾಶ್ ವಿಜಯ ಕುಮಾರ್ ಅವರೆ ನಿರ್ಮಿಸುತ್ತಿದ್ದಾರೆ.
Advertisement
ಅಮೆರಿಕಾದಿಂದ ಬಂದ ಅಧಿಕಾರಿಯೊಬ್ಬರು ಭಾರತದ ಹುಡುಗನೊಬ್ಬನನ್ನು ಭೇಟಿಯಾಗುತ್ತಾರೆ. ಇವರಿಬ್ಬರ ನಡುವೆ ಹೆಚ್ಚಿನ ಕಥೆ ಸಾಗುತ್ತದೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.