ನನ್ನ ಮನೆ ಸಂಪೂರ್ಣ ಜಲಾವೃತವಾಗಿದೆ- ಗಮನಹರಿಸುವಂತೆ ಜಗ್ಗೇಶ್ ಮನವಿ

By
1 Min Read

ನಟ ಕಮ್ ರಾಜ್ಯ ಸಭಾ ಸದಸ್ಯ ಜಗ್ಗೇಶ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ನವರಸನಾಯಕ ಜಗ್ಗೇಶ್ ಅವರ ಮಾಯಸಂದ್ರದ ಮನೆ ಜಲಾವೃತವಾಗಿದೆ. ಈ ಕುರಿತು ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ.

ಸ್ಯಾಂಡಲ್‌ವುಡ್‌ನಲ್ಲಿ 150ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುವ ಜಗ್ಗೇಶ್ ಈಗ ನಟನೆಯ ಜತೆ ರಾಜ್ಯಸಭಾ ಸದಸ್ಯರಾಗಿ ಕೂಡ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ತಮ್ಮ ಮನೆ ಜಲಾವೃತವಾಗಿರೋದರ ಬಗ್ಗೆ ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದಾರೆ. ನೀರಾವರಿನಿಗಮದವರಿಗೆ ಗಮನ ಹರಿಸಿ ಎಂದು ಮನವಿ ಮಾಡಿದ್ದಾರೆ.

ಮಾಯಸಂದ್ರದ ನನ್ನ ಮನೆ ಸಂಪೂರ್ಣ ಜಲಾವೃತ. ಬಹುತೇಕರು ನೀರು ಹರಿವ ಸರ್ಕಾರದ ಜಾಗದಲ್ಲಿ ಮನೆಕಟ್ಟಿ ನೀರು ಹರಿಯುವ ಹೊಂಡಗಳ ಮುಚ್ಚಿದ್ದಾರೆ. ಮಾಯಸಂದ್ರ ತಳದಲ್ಲಿ ಇರುವ ಸುಮಾರು 20 ಆಸ್ತಿಗಳಿಗೆ ನಿರಂತರ ನೀರು ನುಗ್ಗುತ್ತದೆ ದಯಮಾಡಿ ನೀರಾವರಿನಿಗಮ ಗಮನ ಹರಿಸಿ ಎಂದು ನಟ ಜಗ್ಗೇಶ್ ವಿನಂತಿಸಿಕೊಂಡಿದ್ದಾರೆ. ಜೊತೆಗೆ ಸಿಎಂ ಬೊಮ್ಮಾಯಿ ಅವರಿಗೂ ಜಗ್ಗೇಶ್ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಜ್ಯೂ.ಎನ್‌ಟಿಆರ್ ಚಿತ್ರಕ್ಕೆ ಸಮಂತಾ ನೋ ಅಂದಿದ್ಯಾಕೆ?

ಈಗಾಗಲೇ ಜಲಾವೃತವಾಗಿರುವ ಮನೆಗಳ ಬಗ್ಗೆ ಮತ್ತು ನಟ ಜಗ್ಗೇಶ್ ಮನವಿಗೆ ನೀರಾವರಿನಿಗಮ ಯಾವ ರೀತಿಯಲ್ಲಿ ಸಾಥ್ ನೀಡಬಹುದು ಎಂಬುದನ್ನ ಕಾದುನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

Share This Article
Exit mobile version