ಮೈಸೂರು: ನನ್ನ ತಾಯಿಗೆ ವಯಸ್ಸಾಗಿದೆ. ಮರೆವು ಜಾಸ್ತಿ ಆಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ಹೇಳಿದ್ದಾರೆ.
ಸಿಬಿಐ (CBI) ದಾಳಿ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನ್ಮಾಡ್ತಿರಾ ಯಾರ ಮೇಲೆ ಪ್ರೀತಿ ಇರುತ್ತಾ ಅವರ ಮನೆ ದಾಳಿ ಮಾಡುತ್ತಾರೆ. ನಾನು ಈ ಕೆಲಸದಲ್ಲಿದ್ದಿನಿ. ಅವರು ಅಲ್ಲಿ ದಾಳಿ ಮಾಡಿದ್ದಾರೆ. ಜಮೀನು ನೋಡಿದರೆ, ಮನೆ ನೋಡಿದ್ದಾರೆ ಎಂದರು.
Advertisement
Advertisement
ಅಧಿಕಾರಿಗಳು ಏನೇನೂ ಮಾಡಿದ್ದಾರೋ ಗೊತ್ತಿಲ್ಲ. ನನ್ನ ತಾಯಿಗೆ ವಯಸ್ಸಾಗಿದೆ. ಮರೆವು ಜಾಸ್ತಿ ಆಗಿದೆ. ಸಿಬಿಐ ಅಂದಕೂಡಲೇ ನಮ್ಮ ಜನ ಗಡಗಡ ಅಂತಾರೆ. ನಾವು ಗಡಗಡ ಅಂತೀವಿ. ಹೀಗಾಗಿ ಅಲ್ಲಿ ಏನಾಗಿದೆ ಅಂತಾ ಯಾರಿಗೂ ಗೊತ್ತಾಗಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಹೊತ್ತಲ್ಲೇ ಡಿಕೆಶಿಗೆ CBI ಶಾಕ್ – ಆಸ್ತಿ ಮೌಲ್ಯಮಾಪನ
Advertisement
Advertisement
ಸಿಬಿಐ ದಾಳಿ: 5 ವರ್ಷದಲ್ಲಿ 75 ಕೋಟಿಗೂ ಅಧಿಕ ಆಸ್ತಿಗಳಿಸಿರುವ ಸಂಬಂಧ ಡಿಕೆಶಿ ವಿರುದ್ಧ ಸಿಬಿಐ ಎಫ್‍ಐಆರ್ ದಾಖಲಿಸಿತ್ತು. ತನ್ನ ಮೇಲಿನ ಪ್ರಕರಣವನ್ನು ರದ್ದು ಮಾಡುವಂತೆ ಡಿಕೆ ಶಿವಕುಮಾರ್ ಹೈಕೋರ್ಟ್ (HighCourt) ಮೇಟ್ಟಿಲೇರಿದ್ದರು. ಇದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಸಿಬಿಐ ಪರ ವಕೀಲರು ಹೆಚ್ಚುವರಿ ಆಕ್ಷೇಪಣೆಗೆ ಕಾಲಾವಧಿ ಕೇಳಿದ ಅರ್ಜಿ ಸಲ್ಲಿಸಿದ್ದರು. ನಂತರ ಆಸ್ತಿ ಮೌಲ್ಯಮಾಪನ ಮಾಡಿ ಹೆಚ್ಚಿನ ಆಕ್ಷೇಪಣೆ ಸಲ್ಲಿಕೆಗೆ ಕಾಲಾವಕಾಶ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಸಿಪಿಡಬ್ಲ್ಯೂಡಿ ಅಧಿಕಾರಿಗಳ ಜೊತೆ ತೆರಳಿ ಮೌಲ್ಯಮಾಪನ ಮಾಡಿದ್ದಾರೆ.