ನವದೆಹಲಿ: ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ. ನಾನು ಕ್ಷಮೆ ಕೇಳುವುದಿಲ್ಲ ಎಂದು ಬಿಜೆಪಿಗೆ (BJP) ಕಾಂಗ್ರೆಸ್ (Congress) ಮುಖಂಡ ರಾಹುಲ್ ಗಾಂಧಿ (Rahul Gandhi) ತಿರುಗೇಟು ನೀಡಿದರು.
ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ವಿಚಾರಕ್ಕೆ ಸಂಬಂಧಿಸಿದ ಒಂದು ದಿನದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಹರಿಹಾಯ್ದರು.
ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಅವರು ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ. ಪ್ರಧಾನಿ ಮೋದಿ ಅವರ ಕಣ್ಣುಗಳಲ್ಲಿ ನಾನು ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಲು ಅವರು ಬಯಸುವುದಿಲ್ಲ ಎಂದು ಹೇಳಿದರು.
ದೇಶದ ಆಂತರಿಕ ವ್ಯವಹಾರಗಳಲ್ಲಿ ಅಂತಾರಾಷ್ಟ್ರೀಯ ಶಕ್ತಿಗಳ ಹಸ್ತಕ್ಷೇಪವನ್ನು ರಾಹುಲ್ ಗಾಂಧಿ ಬಯಸಿದ್ದರು ಎಂಬ ಬಿಜೆಪಿಯ ಆರೋಪಗಳನ್ನು ಅವರು ನಿರಾಕರಿಸಿದ ಅವರು, ಲಂಡನ್‌ನಲ್ಲಿ ನೀಡಿದ ಹೇಳಿಕೆಗಳ ಮೇಲಿನ ಆರೋಪಗಳಿಗೆ ಸದನದಲ್ಲಿ ಪ್ರತಿಕ್ರಿಯಿಸಲು ಅವಕಾಶ ನೀಡುವಂತೆ ಸ್ಪೀಕರ್ ಅವರನ್ನು ಕೇಳಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹ – ವಯನಾಡಿನಲ್ಲಿ ಬ್ಲ್ಯಾಕ್ ಡೇ ಆಚರಣೆ
ನನಗೆ ಒಂದೇ ಒಂದು ಹೆಜ್ಜೆ ಇದೆ. ಅದು ಸತ್ಯಕ್ಕಾಗಿ ಹೋರಾಡುವುದಾಗಿದೆ. ಈ ದೇಶದ ಪ್ರಜಾಪ್ರಭುತ್ವದ ಸ್ವರೂಪವನ್ನು ರಕ್ಷಿಸುವುದು. ಅದಕ್ಕಾಗಿ ನನ್ನನ್ನು ಜೀವನಪರ್ಯಂತ ಅನರ್ಹಗೊಳಿಸಿ, ಜೈಲಿಗೆ ಹೋಗಲು ನಾನು ಸಿದ್ಧ ಎಂದರು. ಇದನ್ನೂ ಓದಿ: ರಾಹುಲ್ ಗಾಂಧಿ ಅನರ್ಹತೆ ಸಂವಿಧಾನಬಾಹಿರ: ಶರದ್ ಪವಾರ್