ಚಂಡೀಗಡ: ಪಂಜಾಬ್‍ನ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ `ಭ್ರಷ್ಟಾಚಾರ ಮುಕ್ತ’ ಸಹಾಯವಾಣಿ ಪ್ರಾರಂಭಿಸುತ್ತಿದ್ದು, ಮಾರ್ಚ್ 23ರಂದು ಅನಾವರಣಗೊಳ್ಳಲಿದೆ.
ಸ್ವಾತಂತ್ರ್ಯ ಹೋರಾಟಗಾರ ಭಗತ್‍ಸಿಂಗ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮಾರ್ಚ್ 23ರಂದು ಸಹಾಯವಾಣಿ ಪ್ರಾರಂಭಿಸಲಾಗುತ್ತದೆ ಎಂದೂ ಅವರು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಪುಟಿನ್‍ನನ್ನು ‘ಯುದ್ಧಾಪರಾಧಿ’ ಎಂದ ಬೈಡನ್
Advertisement
भगत सिंह जी के शहीदी दिवस पर, हम anti-corruption हेल्पलाइन नम्बर जारी करेंगे। वो मेरा पर्सनल वॉट्सऐप नंबर होगा। अगर आपसे कोई भी रिश्वत मांगे, उसकी वीडियो/ऑडियो रिकॉर्डिंग करके मुझे भेज देना। भ्रष्टाचारियों के ख़िलाफ़ सख्त एक्शन लिया जाएगा।
पंजाब में अब भ्रष्टाचार नहीं चलेगा।
— Bhagwant Mann (@BhagwantMann) March 17, 2022
Advertisement
`ಸಹಾಯವಾಣಿ ಸಂಖ್ಯೆಯು ನನ್ನ ವೈಯಕ್ತಿಕ ಸಂಪರ್ಕ ಸಂಖ್ಯೆಯಾಗಿದ್ದು, ಯಾರೇ ಲಂಚ ಕೇಳಿದರೂ ಅದರ ಆಡಿಯೋ, ವಿಡಿಯೋ ಅನ್ನು ಈ ಸಂಖ್ಯೆಗೆ ಕಳುಹಿಸಿ’ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
Advertisement
Advertisement
ಯಾವುದೇ ಸರ್ಕಾರಿ ಅಧಿಕಾರಿಗಳಿಗೆ ತೊಂದರೆ ಕೊಡಬೇಕು ಎನ್ನುವುದು ನನ್ನ ಉದ್ದೇಶವಲ್ಲ. ಶೇ.99 ಸರ್ಕಾರಿ ನೌಕರರು ಪ್ರಾಮಾಣಿಕರಾಗಿದ್ದಾರೆ. ಆದರೆ, ಶೇ.1 ರಷ್ಟು ನೌಕರರು ಭ್ರಷ್ಟರಾಗಿದ್ದಾರೆ. ಎಎಪ್ ನಿಂದ ಮಾತ್ರ ಈ ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯ ಆದ್ದರಿಂದ ಈ ಸಹಾಯವಾಣಿ ಆರಂಭಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಹ್ಯಾಪಿ ಬರ್ತ್ ಡೇ ಅಪ್ಪು : ದಕ್ಷಿಣದ ಸಿನಿತಾರೆಯರ ಭಾವುಕ ಸಂದೇಶ