ರಾಯಚೂರು: ರಾಜ್ಯಾದ್ಯಂತ ಫೋನ್ ಕದ್ದಾಲಿಕೆ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ನನ್ನ ಫೋನನ್ನೂ ಕದ್ದಾಲಿಕೆ ಮಾಡಲಾಗಿದೆ ಎಂದು ಮಸ್ಕಿಯ ಅನರ್ಹ ಶಾಸಕ ಪ್ರತಾಪ್‍ಗೌಡ ಪಾಟೀಲ್ ತಿಳಿಸಿದ್ದಾರೆ.
ಈ ಕುರಿತು ಕೊಪ್ಪಳದ ಮುನಿರಾಬಾದ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋನ್ ಕದ್ದಾಲಿಕೆ ಪ್ರಕರಣದಲ್ಲಿ ಹಲವರು ಶಾಮೀಲಾಗಿದ್ದಾರೆ. ನನ್ನ ಹಾಗೂ ನನ್ನ ಆಪ್ತ ಕಾರ್ಯದರ್ಶಿಯ ಫೋನ್ ಸಹ ಕದ್ದಾಲಿಕೆ ಮಾಡಲಾಗಿದೆ. ಈ ಕುರಿತು ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
Advertisement
Advertisement
ಪೊಲೀಸ್ ಅಧಿಕಾರಿಗಳು ಸಹ ಶಾಮೀಲಾಗಿದ್ದರಿಂದ ಎಸ್‍ಐಟಿ ಇಲ್ಲವೇ ಸಿಐಡಿ ತನಿಖೆ ನಡೆಸುವುದು ಸೂಕ್ತ. ಸರ್ಕಾರ ಈ ಪ್ರಕರಣವನ್ನು ಈಗಾಗಲೇ ಗಂಭೀರವಾಗಿ ಪರಿಗಣಿಸಿದೆ. ಸರ್ಕಾರ ತ್ವರಿತವಾಗಿ ಉನ್ನತ ಮಟ್ಟದ ತನಿಖೆಗೆ ಮುಂದಾಗಬೇಕು. ಇಲ್ಲದಿದ್ದಲ್ಲಿ ಎರಡು ದಿನದೊಳಗೆ ಅನರ್ಹ ಶಾಸಕರು ಸಭೆ ಸೇರಿ ತೀರ್ಮಾನಿಸಿ ಹೈಕೋರ್ಟ್ ಮೂಲಕ ಉನ್ನತ ತನಿಖೆಗೆ ಕೋರುತ್ತೇವೆ. ಈ ಬಗ್ಗೆ ನಾಳೆ ಎಲ್ಲ ಅನರ್ಹ ಶಾಸಕರು ಸಭೆ ಸೇರಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
Advertisement
Advertisement
ಈ ಕುರಿತು ನಿನ್ನೆ ಟ್ವೀಟ್ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದರು. ನಾನು ಫೋನ್ ಕದ್ದಾಲಿಕೆ ಮಾಡಿಲ್ಲ. ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೆ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್ ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದರು. ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಟ್ವೀಟ್ ಮಾಡುವ ಮೂಲಕ ತಮ್ಮ ಮೇಲಿನ ಆರೋಪವನ್ನು ಕುಮಾರಸ್ವಾಮಿ ಸಾರಾಸಗಟಾಗಿ ತಿರಸ್ಕರಿಸಿದ್ದರು.