ವಿಜಯಪುರ: ನನಗೆ ಮದ ಏರಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ರೈತರು ಬರಗಾಲ ಬರಲಿ ಎಂದು ಆಶಿಸುತ್ತಾರೆ ಎಂಬ ತಮ್ಮ ಹೇಳಿಕೆ ಕುರಿತು ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ (Shivanand Patil) ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಲೋಕಸಭಾ ಚುನಾವಣೆ (Loksabha Election) ಹಿನ್ನೆಲೆಯಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಹೇಳುವ ಮೂಲಕ ಸಚಿವರು ಪರೋಕ್ಷವಾಗಿ ತಮ್ಮ ಹೇಳಿಕೆ ಸಮರ್ಥಿಸಿಕೊಂಡರು. ನಾನು ರೈತರ ವಿರೋಧಿ ಅಲ್ಲ, ರೈತರ ವಿರೋಧವಾಗಿ ಯಾವುದೇ ಹೇಳಿಕೆ ನೀಡಿಲ್ಲ. ಮೂರು ವರ್ಷಕ್ಕೊಮೆ ರೈತರ ಬೆಳೆಗಳಿಗೆ ಬೆಲೆ ಬರುತ್ತದೆ. ಉಳಿದ ಎರಡು ಬೆಲೆ ಇಲ್ಲದೆ ಕಂಗಾಲಾಗಿರುತ್ತಾರೆ. ಹಾಗಾಗಿ ರೈತರು ಸಾಲಮನ್ನಾ ಆಗಲಿ ಎಂದು ಆಶಯ ವ್ಯಕ್ತಪಡಿಸುತ್ತಾರೆ ಎಂದಿದ್ದೇನೆ ಅಂದರು.
Advertisement
Advertisement
ಇತ್ತೀಚೆಗೆ ಕೇಂದ್ರದ ಯೋಜನೆಗಳು ರೈತರಿಗೆ (Farmers) ಮುಳುವಾಗಿವೆ. ನನಗೆ ಮದ ಏರಿದೆ ಎಂದು ವಿರೋಧ ಪಕ್ಷದವರು ಹೇಳುತ್ತಾರೆ. ಆದರೆ ಇದೆಲ್ಲ ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ ಎಂದು ಸಚಿವರು ಆರೋಪಿಸಿದರು. ಅಲ್ಲದೆ ಬಿಜೆಪಿ ನಾಯಕರಿಗೆ ರೈತರ ಮೇಲೆ ಕರುಣೆ ಇದ್ದರೆ ಕೇಂದ್ರ ಸರ್ಕಾರದ ನೀತಿಗಳನ್ನು ಬದಲಾಯಿಸಲಿ. ವಿರೋಧ ಪಕ್ಷದ ನಾಯಕರು ರೈತರ ಸಮಸ್ಯೆ ಬಗ್ಗೆ ಪ್ರಧಾನಿ ಮೋದಿ ಗಮನಕ್ಕೆ ತರಲಿ ಎಂದು ಇದೇ ವೇಳೆ ಶಿವಾನಂದ್ ಪಾಟೀಲ್ ಒತ್ತಾಯಿಸಿದರು. ಇದನ್ನೂ ಓದಿ: ಸಾಲಮನ್ನಾ ಆಸೆಗಾಗಿ ರೈತರು ಬರಗಾಲಕ್ಕೆ ಕಾಯುತ್ತಾರೆ- ಶಿವಾನಂದ್ ಪಾಟೀಲ್ ವಿವಾದಾತ್ಮಕ ಹೇಳಿಕೆ
Advertisement
Advertisement
ಸಚಿವರು ಹೇಳಿದ್ದೇನು..?: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಸ್ವ ಸಹಾಯ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತಾನಾಡಿರುವ ಸಚಿವರು, ಸಾಲ ಮನ್ನಾದ ಆಸೆಗಾಗಿ ಬರಗಾಲ ಬರಲೆಂದು ರೈತರು ಕಾಯುತ್ತಾರೆ ಎಂದು ಹೇಳಿದ್ದಾರೆ. ಕೃಷ್ಣಾ ನದಿ ನೀರು ಪುಕ್ಕಟೆ ಆಗಿದೆ. ಕರೆಂಟ್ ಪುಕ್ಕಟೆ ಸಿಗುತ್ತಿದೆ. ಬಹಳಷ್ಟ ಮುಖ್ಯಮಂತ್ರಿಗಳು ಬೆಳೆ ಬೆಳೆಯಲು ಬೀಜನೂ ಕೊಟ್ಟರು, ಗೊಬ್ಬರನೂ ಕೊಟ್ಟರು. ಇನ್ನೂ ರೈತರಿಗೆ ಏನಪ್ಪಾ ಅಂದ್ರೆ ಒಂದು ಆಸೆ ಇರುತ್ತೆ, ಮಗನ್ ಮ್ಯಾಲ ಮ್ಯಾಲ ಬರಗಾಲ ಬೀಳಲಿ ಅಂತ ಹೇಳಿ. ಯಾಕಂದ್ರೆ ಸಾಲ ಮನ್ನಾ ಆಗುತ್ತೆ ಅಂತಾ. ಈ ರೀತಿಯಾಗಿ ಬಯಸಬಾರದು ಎಂದು ಹೇಳಿದ್ದರು.
ಸಚಿವರ ಹೇಳಿಕೆ ವೈರಲ್ ಆಗುತ್ತಿದ್ದಂತೆಯೇ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ರೈತರ ಬಗ್ಗೆ ಈ ರೀತಿಯಾಗಿ ಹೇಳಿಕೆ ಕೊಟ್ಟಿರುವುದನ್ನು ಖಂಡಿಸುವುದಾಗಿ ಬಿಜೆಪಿ ನಾಯಕರು ವಾಗ್ದಾಳಿಗಳನ್ನು ನಡೆಸಿದ್ದಾರೆ.