ಮಂಡ್ಯ: ಜಿಲ್ಲೆಯ ಕಬ್ಬು ಬೆಳೆಗಾರರ ಜೀವನಾಡಿ ಮೈಶುಗರ್ ಕಾರ್ಖಾನೆಯನ್ನು ಶೀಘ್ರವೇ ಆರಂಭಿಸಲು ಎಲ್ಲ ಕ್ರಮ ಕೈಗೊಳ್ಳಲಾಗಿದ್ದು, ಇದಕ್ಕಾಗಿ ಬಜೆಟ್‍ನಲ್ಲಿ ಸಿಎಂ ಬೊಮ್ಮಾಯಿ 50 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಬೃಹತ್ ಆರೋಗ್ಯ ಮೇಳ ಉದ್ಘಾಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮಂಡನೆಯಾದ ರಾಜ್ಯ ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ಕಾರ್ಖಾನೆ ಆರಂಭಕ್ಕೆ ಹಸಿರು ನಿಶಾನೆ ತೋರಿಸಿದ್ದು, ಯಂತ್ರ ಇತ್ಯಾದಿಗಳ ದುರಸ್ತಿಗಾಗಿ 50 ಕೋಟಿ ರೂ. ಬಿಡುಗಡೆ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಆರೋಗ್ಯ ಕ್ಷೇತ್ರಕ್ಕೆ ಒತ್ತು ನೀಡಿದ ರಾಜ್ಯ ಬಜೆಟ್: ಕೆ.ಗೋಪಾಲಯ್ಯ
Advertisement
Advertisement
ಸದ್ಯಕ್ಕೆ ಕಾರ್ಖಾನೆ ಆರಂಭಕ್ಕೆ ಅಗತ್ಯವಾದ ಅನುದಾನವನ್ನು ಸಿಎಂ ನೀಡಿದ್ದಾರೆ. ಉಳಿದ ಹಣವನ್ನು ಇತರೆ ಮೂಲಗಳಿಂದ ಹಂತ-ಹಂತವಾಗಿ ಪಡೆಯಲು ಕ್ರಮ ಕೈಗೊಳ್ಳಲಾಗಿದೆ. ಸಚಿವರಾದ ಡಾ.ಕೆ.ಸಿ.ನಾರಾಯಣ ಗೌಡರು ಮತ್ತು ನಾನು ಇಬ್ಬರೂ ಸೇರಿ ಈ ಭಾಗದ ಜನರ ಆಸೆ ಈಡೇರಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಿರುವುದಾಗಿ ತಿಳಿಸಿದರು.
Advertisement
Advertisement
ಜಿಲ್ಲೆಯ ನಿರುದ್ಯೋಗ ಯುವಕ ಯುವತಿಯರಿಗೆ ಅನುಕೂಲ ಕಲ್ಪಿಸುವ ಹಿನ್ನೆಲೆಯಲ್ಲಿ ಇದೇ ಮಾರ್ಚ್ 19 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಈ ಮೂಲಕ ಜಿಲ್ಲೆಯ ಸಾವಿರಾರು ವಿದ್ಯಾವಂತ ನಿರುದ್ಯೋಗಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದರು. ಇದನ್ನೂ ಓದಿ: ಮಜಾಟಾಕೀಸ್ ರಾಣಿಯ ಸ್ನೇಹಿತೆ ಉಕ್ರೇನ್ ನಲ್ಲಿ ಕಳೆದ 10 ದಿನಗಳು: ಶ್ವೇತಾ ಚೆಂಗಪ್ಪ ಬಿಚ್ಚಿಟ್ಟ ರಹಸ್ಯ
ಈ ಸಂದರ್ಭದಲ್ಲಿ ಯುವಜನ ಖಾತೆ ಮತ್ತು ರೇಷ್ಮೆ ಖಾತೆ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಉಪಸ್ಥಿತರಿದ್ದರು.