ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಜಯನಗರ (Jayanagara) ನಿವಾಸಿಗಳ ಆಕ್ರೋಶದ ಕಟ್ಟೆ ಒಡೆದಿದೆ. ಅನುದಾನ ಬಿಡುಗಡೆ ಮಾಡದ್ದಕ್ಕೆ ʼನನ್ನ ತೆರಿಗೆ ನನ್ನ ಹಕ್ಕುʼ ಹೆಸರಿನಲ್ಲಿ ಹೋರಾಟಕ್ಕೆ ಜಯನಗರದ ಸಂಘ ಸಂಸ್ಥೆಗಳು ಮುಂದಾಗಿವೆ.
ಬೆಂಗಳೂರು ಉಸ್ತುವಾರಿ ಸಚಿವ ಡಿಕೆ ಶಿವಕುಮಾರ್ ಅವರಿಂದ ಆದ ಅನ್ಯಾಯವನ್ನು ಖಂಡಿಸಿ ಜಯನಗರ 70 ಸಂಘಟನೆಯ ಸದಸ್ಯರು ನನ್ನ ತೆರಿಗೆ ನನ್ನ ಹಕ್ಕು ಹೆಸರಿನಲ್ಲಿ ಭಾನುವಾರ ದೊಡ್ಡ ಮಟ್ಟದ ಹೋರಾಟಕ್ಕೆ ಮುಂದಾಗಿದ್ದಾರೆ.
Advertisement
ಈ ಪ್ರತಿಭಟನೆಗೆ ಸಂಬಂಧಿಸಿದಂತೆ ಮಾತನಾಡಿದ ಜಯನಗರ ಶಾಸಕ ರಾಮಮೂರ್ತಿ (CK Ramamurthy) ಅವರು, ಅನುದಾನ ವಿಚಾರವನ್ನು ಕೇಳಿದ್ದಕ್ಕೆ ನನ್ನ ಮುಂದೆ ತಗ್ಗಿ ಬಗ್ಗಿ ನಡೆಯಬೇಕು ಎಂದು ಹೇಳಿದ್ದಾರೆ. ನಾನು ನನ್ನ ಕ್ಷೇತ್ರದ ಜನರು, ಗುರು ಹಿರಿಯರ ಮುಂದೆ ತಗ್ಗಿ ಬಗ್ಗಿ ನಡೆಯುತ್ತೇನೆ. ಜಯನಗರ ಜನರು ತೆರಿಗೆ ಪಾವತಿಸುತ್ತಿದ್ದಾರೆ. ಈ ಕಾರಣಕ್ಕೆ ನನ್ನ ತೆರಿಗೆ ನನ್ನ ಹಕ್ಕು ಹೆಸರಿನಲ್ಲಿ ಬೃಹತ್ ಹೋರಾಟವನ್ನು ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜಕೀಯ ಏನಾದ್ರೂ ಇರಲಿ, ಜಯನಗರಕ್ಕೆ ಅನುದಾನ ಕೊಡಿ – ಡಿಕೆಶಿಗೆ ಸೆಲೆಬ್ರಿಟಿಗಳ ಮನವಿ
Advertisement
Advertisement
ಏನಿದು ವಿವಾದ?
ಅಕ್ಟೋಬರ್ ಕೊನೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರಿನ 27 ವಿಧಾನಸಭಾ ಕ್ಷೇತ್ರಗಳಿಗೆ ತಲಾ 10 ಕೋಟಿ ರೂ.ನಂತೆ 270 ಕೋಟಿ ರೂ. ಅನುದಾನ ಬಿಡುಗಡೆ ಮಾಡಿತ್ತು. ಆದರೆ ಈ ಪಟ್ಟಿಯಿಂದ ಡಿಸಿಎಂ ಡಿಕೆ ಶಿವಕುಮಾರ್ ಬೇಕಂತಲೇ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಪ್ರತಿನಿಧಿಸುವ ಜಯನಗರ ಕ್ಷೇತ್ರವನ್ನು ಹೊರಗಿಟ್ಟಿದ್ದು ವಿವಾದಕ್ಕೆ ಕಾರಣವಾಗಿದೆ.
Advertisement
ವಿಧಾನಸಭೆಯಲ್ಲಿ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಶಾಸಕ ಸಿ.ಕೆ.ರಾಮಮೂರ್ತಿ ಮಾತಾಡಿದ್ದರು ಎಂಬ ಕಾರಣಕ್ಕೆ ಜಯನಗರಕ್ಕೆ ಅನುದಾನ ನೀಡಿಲ್ಲ ಎಂದು ಹೇಳಲಾಗಿದೆ. ಇದು ವ್ಯಾಪಕ ಟೀಕೆ, ಆಕ್ರೋಶಕ್ಕೆ ಕಾರಣವಾಗುತ್ತಿದೆ. ಇದನ್ನೂ ಓದಿ: ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಇದು ಸೇಡಿನ ಕ್ರಮ, ಕಾಂಗ್ರೆಸ್‌ಗೆ ಮತ ಹಾಕದ ನಾಗರಿಕರನ್ನು ಈ ಸರ್ಕಾರ ಶಿಕ್ಷಿಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಇದಕ್ಕೆ ಪೂರಕವಾಗಿ ಡಿಸಿಎಂ ಮಾತಾಡಿದ್ದು, ನಾನೇ ಉದ್ದೇಶಪೂರ್ವಕವಾಗಿ ಜಯನಗರಕ್ಕೆ ಅನುದಾನ ಕೊಟ್ಟಿಲ್ಲ ಎಂದಿದ್ದಾರೆ. ಈ ಮೂಲಕ ತಮ್ಮ ನಡೆಯನ್ನು ಸಮರ್ಥನೆ ಮಾಡಿಕೊಂಡಿದ್ದರು.
ನಾಗಸಂದ್ರದಿಂದ ಮಾದಾವರ ಮೆಟ್ರೋ ಸೇವೆ ಲೋಕಾರ್ಪಣೆಗೂ ಮುನ್ನ ಡಿಕೆ ಶಿವಕುಮಾರ್ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಸಂಸದ ತೇಜಸ್ವಿ ಸೂರ್ಯ (Tejasvi Surya) ಅವರು ಜೊತೆಯಾಗಿ ಪ್ರಯಾಣಿಸಿದ್ದರು. ಈ ಸಂದರ್ಭದಲ್ಲಿ ತೇಜಸ್ವಿ ಸೂರ್ಯ ಅವರು ಜಯನಗರದ ಅನುದಾನ ವಿಚಾರವನ್ನು ಪ್ರಸ್ತಾಪಿಸಿ ಮನವಿ ಮಾಡಿದ್ದರು. ಈ ವೇಳೆ, ನಾನು ಬಂದ ಮೇಲೆ ಬೆಂಗಳೂರು ಅಧೋಗತಿ ಆಗೋಯ್ತು ಎಂದು ಅವನು (ಜಯನಗರ ಶಾಸಕ ರಾಮಮೂರ್ತಿ) ಹೇಳಿಕೆಯನ್ನು ನೀಡಿದ್ದ. ನನ್ನ ಜೊತೆ ಮಾತನಾಡಬೇಕಾದರೆ ತಗ್ಗಿಬಗ್ಗಿ ಇರಬೇಕು. ಬೇರೆಯವರ ಜೊತೆಗೆ ಇದ್ದಂತೆ ಇದ್ದರೆ ಆಗುವುದಿಲ್ಲ ಎಂದು ಹೇಳಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.