Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯಾರ್ಥಿ, ಯುವಜನರಲ್ಲಿ ನಾಯಕತ್ವ ಗುಣ ಬೆಳೆಸಲು ‘ನನ್ನ ಮತ ನನ್ನ ಹಕ್ಕು’ ಕಾರ್ಯಕ್ರಮ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿದ್ಯಾರ್ಥಿ, ಯುವಜನರಲ್ಲಿ ನಾಯಕತ್ವ ಗುಣ ಬೆಳೆಸಲು ‘ನನ್ನ ಮತ ನನ್ನ ಹಕ್ಕು’ ಕಾರ್ಯಕ್ರಮ: ಡಿಕೆಶಿ

Bengaluru City

ವಿದ್ಯಾರ್ಥಿ, ಯುವಜನರಲ್ಲಿ ನಾಯಕತ್ವ ಗುಣ ಬೆಳೆಸಲು ‘ನನ್ನ ಮತ ನನ್ನ ಹಕ್ಕು’ ಕಾರ್ಯಕ್ರಮ: ಡಿಕೆಶಿ

Public TV
Last updated: September 15, 2025 4:01 pm
Public TV
Share
4 Min Read
DK Shivakumar 1
SHARE

ಬೆಂಗಳೂರು: ವಿದ್ಯಾರ್ಥಿ, ಯುವಜನರಲ್ಲಿ ನಾಯಕತ್ವ ಗುಣವನ್ನು ಬೆಳೆಸಬೇಕಿದೆ. ಮತದಾನ, ಪ್ರಜಾಪ್ರಭುತ್ವದ ಮೌಲ್ಯವನ್ನು ಅರಿತುಕೊಳ್ಳಲು ‘ನನ್ನ ಮತ, ನನ್ನ ಹಕ್ಕು’ (My Vote, My Right) ಕಾರ್ಯಕ್ರಮ ರೂಪಿಸಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅಭಿಪ್ರಾಯಪಟ್ಟರು.

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮತದಾನ ಮದ್ದುಗುಂಡಿಗಿಂತ ಬಲಾಢ್ಯ ಎನ್ನುವ ಮಾತಿದೆ. ಮಹಾರಾಜರು ಮನೆಯಲ್ಲಿ ಕುಳಿತಿದ್ದಾರೆ. ಮತದಾನದ ಹಕ್ಕಿನಿಂದ ಆಯ್ಕೆಯಾದವರು ಜನಸೇವೆ ಮಾಡುತ್ತಿದ್ದಾರೆ. ನಾನು, ಸಿದ್ದರಾಮಯ್ಯ ಅವರು ಸೇರಿದಂತೆ ಅನೇಕ ನಾಯಕರ ಉದಯವಾಗಿದ್ದೇ ಮತದಾನದ ಹಕ್ಕಿನಿಂದ. ಜನರ ಮತಗಳಿಂದ ನಾವು ಅಧಿಕಾರಕ್ಕೆ ಬಂದಿದ್ದೇವೆ. ಜವಾಬ್ದಾರಿಯುತ ಸ್ಥಾನಗಳನ್ನು ಅಲಂಕರಿಸಿದ್ದೇವೆ ಎಂದರು. ಇದನ್ನೂ ಓದಿ: ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಹುಲ್ ಗಾಂಧಿ ಭೇಟಿ

ಅರ್ಜುನ ಕೃಷ್ಣನನ್ನು ಒಮ್ಮೆ ಕೇಳುತ್ತಾನೆ. ಎಲ್ಲರು ನಮ್ಮ ಮೇಲೆ ದಾಳಿ ಮಾಡುತ್ತಿದ್ದಾರೆ, ನಿಂದಿಸುತ್ತಿದ್ದಾರೆ, ಬಾಣಗಳನ್ನು ಪ್ರಯೋಗ ಮಾಡುತ್ತಿದ್ದಾರೆ, ಏನೂ ತೋಚದಾಗಿದೆ ಎಂದು. ಆಗ ಕೃಷ್ಣ, ನಿನ್ನ ಮೇಲೆ ಎಷ್ಟೇ ದಾಳಿಯಾಗಬಹುದು, ಆದರೆ ಕಾಪಾಡುವುದಕ್ಕೆ ಯಾರಾದರೂ ಒಬ್ಬರು ಇದ್ದೇ ಇರುತ್ತಾರೆ ಎಂದು ಹೇಳುತ್ತಾನೆ. ಅದೇ ರೀತಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತ ಹಾಗೂ ಮತದಾನದ ಹಕ್ಕೇ ನಮ್ಮನ್ನು ಕಾಪಾಡುವುದು. ವಿಚಾರ ಏನೇ ಇರಬಹುದು, ಆದರೆ ಜನರು ತೆಗೆದುಕೊಳ್ಳುವ ತೀರ್ಮಾನ ನಾಯಕರನ್ನು ತಯಾರು ಮಾಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆ ಸಾಧ್ಯತೆ – ರೆಡ್ ಅಲರ್ಟ್ ಘೋಷಣೆ

DK Shivakumar Siddaramaiah

ನಾವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಇಡೀ ಪ್ರಪಂಚದಲ್ಲಿಯೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶ ನಮ್ಮದು. ಈ ಕಲ್ಪನೆ ಇದೇ ನೆಲದಲ್ಲಿ ಹುಟ್ಟಿತು. ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸಿ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎನ್ನುವ ತತ್ವವನ್ನು ಸಾರಿ, ಜಾತಿ, ಧರ್ಮ, ಪಂಥಗಳ ಬೇಧವಿಲ್ಲದ ಸಮ ಸಮಾಜದ ಕನಸು 900 ವರ್ಷಗಳ ಹಿಂದೆ ಹುಟ್ಟಿತು ಎಂದು ನುಡಿದರು. ಇದನ್ನೂ ಓದಿ: ಪ್ರತಾಪ್ ಸಿಂಹ ಭಾರತೀಯ ನಾಗರಿಕನಂತೆ ನಡೆದುಕೊಳ್ಳಲಿ: ಮಹದೇವಪ್ಪ

ಸ್ಪರ್ಧಾತ್ಮಕ ಯುಗದಲ್ಲಿ ನಾಯಕತ್ವ ಗುಣವಿಲ್ಲದಿದ್ದರೆ ಬೆಳವಣಿಗೆ ಸಾಧ್ಯವಿಲ್ಲ. ಸಚಿವರಾದ ಹೆಚ್.ಸಿ.ಮಹಾದೇವಪ್ಪ ಅವರು ವಿಶ್ವವಿದ್ಯಾಲಯಗಳಿಗೆ ತೆರಳಿ ಪಾಠ ಮಾಡಬಹುದು, ಅಷ್ಟು ಜ್ಞಾನವನ್ನು ಹೊಂದಿದ್ದಾರೆ. ಹೊಸ ಪೀಳಿಗೆಗೆ ಪ್ರಜಾಪ್ರಭುತ್ವ, ಮತದಾನದ ಬಗ್ಗೆ ತಿಳಿಸಬೇಕಿದೆ. ವಿದ್ಯಾರ್ಥಿಗಳಿಗೆ 18 ವರ್ಷವಾದ ನಂತರ ಮತದಾನದ ಮಹತ್ವ ತಿಳಿಯುತ್ತದೆ. ರಾಜಕೀಯದ ವ್ಯಾಖ್ಯಾನದ ಪ್ರಕಾರ ನಲವತ್ತೊಂಬತ್ತು ಸೊನ್ನೆಯಾಗುತ್ತದೆ, ಐವತ್ತೊಂದು ನೂರಾಗುತ್ತದೆ. ನಾನು ಏಳನೇ ತರಗತಿಯಲ್ಲಿ ಇರುವಾಗಲೇ ಶಾಲಾ ಚುನಾವಣೆಯಲ್ಲಿ ಭಾಗವಹಿಸಿದ್ದೆ. ಅಂದು ನನ್ನ ಗುರುತು ನಕ್ಷತ್ರವಾಗಿತ್ತು. ಅಂದು ಸಾರ್ವಜನಿಕ ಜೀವನಕ್ಕೆ ಕಾಲಿಟ್ಟವನು ಇಂದು ರಾಜ್ಯದ ಉಪಮುಖ್ಯಮಂತ್ರಿಯಾಗಿ ಜನರ ಸೇವೆ ಮಾಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ತಾವಾಗೇ ಮತಾಂತರ ಆಗುವವರಿಗೆ ಅವಕಾಶ ಇದೆ – ಸಚಿವ ಬೋಸರಾಜು

ಚಾಮರಾಜನಗರದ ಸಂಸದರಾಗಿದ್ದ ದಿವಂಗತ ಧ್ರುವನಾರಾಯಣ ಅವರು ಒಂದು ಮತದ ಅಂತರದಿಂದ ಜಯಗಳಿಸಿದರು. ಅವರ ವಿರುದ್ಧ ನಿಂತಿದ್ದ ಪ್ರಸ್ತುತ ಕೊಳ್ಳೆಗಾಲದ ಶಾಸಕರಾಗಿರುವ ಕೃಷ್ಣಮೂರ್ತಿ ಅವರ ಚಾಲಕ ಸಮಯ ಮೀರಿ ಹೋಯಿತು ಎಂದು ಮತ ಹಾಕಲಿಲ್ಲ. ಇದರಿಂದ ಅವರು ಸೋಲಬೇಕಾಯಿತು. ರಾಜಸ್ಥಾನದ ಸಿ.ಪಿ.ಜೋಶಿಯವರು ಎರಡು ಅಥವಾ ಮೂರು ಮತಗಳಿಂದ ಸೋತರು. ಇಲ್ಲದಿದ್ದರೆ ಅಂದು ಮುಖ್ಯಮಂತ್ರಿಗಳಾಗಬೇಕಾತ್ತು. ಆದ ಕಾರಣಕ್ಕೆ ಒಂದೊಂದು ಮತವೂ ಅಮೂಲ್ಯ ಎಂದು ತಿಳಿಸಿದರು. ಇದನ್ನೂ ಓದಿ: ಪ್ರತಾಪ್ ಸಿಂಹ, ಬಿಜೆಪಿ ನಾಯಕರು ಮೊದಲು ಸಂವಿಧಾನ ಓದಿಕೊಳ್ಳಲಿ: ಡಿಕೆಶಿ

ದೇಶದಲ್ಲಿ ಮತದಾನದ ವಯಸ್ಸನ್ನು 21 ರಿಂದ 18ಕ್ಕೆ ಇಳಿಸಿದ ಸಂದರ್ಭ. ನಾನು ಇದೇ ಸಂದರ್ಭದಲ್ಲಿ ಪಾಸ್ ಪಡೆದು ಸಂಸತ್ತಿನಲ್ಲಿ ನಡೆಯುತ್ತಿದ್ದ ಚರ್ಚೆಯನ್ನು ವೀಕ್ಷಣೆ ಮಾಡಲು ತೆರಳಿದ್ದೆ. ಅಂದು ವಿರೋಧ ಪಕ್ಷದವರು ರಾಜೀವ್ ಗಾಂಧಿ ಅವರ ವಿರುದ್ಧ ಮುಗಿಬಿದ್ದಿದ್ದರು. ಆಡುವ ಮಕ್ಕಳಿಗೆ ಮತದಾನದ ಹಕ್ಕು ನೀಡಲಾಗಿದೆ ಎಂದು ಟೀಕೆ ಮಾಡುತ್ತಿದ್ದರು. ಆಗ ರಾಜೀವ್ ಗಾಂಧಿ ಅವರು ‘ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗೆ ಗಡಿ ಕಾಯಲು ಬಂದೂಕು ನೀಡುತ್ತೇವೆ. ಮತದಾನದ ಹಕ್ಕು ನೀಡುವುದು ತಪ್ಪೇ?’ ಎಂದಿದ್ದರು. ನಾನು ಈ ದೇಶದ ಯುವಶಕ್ತಿಯ ಮೇಲೆ ನಂಬಿಕೆ ಇಟ್ಟಿದ್ದೇನೆ ಎಂದರು ಎಂದು ನೆನಪನ್ನು ಮೆಲುಕು ಹಾಕಿದರು. ಇದನ್ನೂ ಓದಿ: ಬಾಗಲಕೋಟೆ ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ ದಾಳಿ

18ನೇ ವಯಸ್ಸಿಗೆ ಮಾನಸಿಕ ದೃಢತೆ ಬರುತ್ತದೆ, ಸ್ವಂತವಾಗಿ ಆಲೋಚನೆ ಮಾಡುವ ಶಕ್ತಿ ಬರುತ್ತದೆ. ಮತಗಳಿಗೆ ಯಾರನ್ನು ಬೇಕಾದರೂ ಹೇಗೆ ನಿರೂಪಿಸುವ ಶಕ್ತಿಯಿದೆ. ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗ, ಪತ್ರಿಕಾಂಗ ಇವು ಪ್ರಜಾಪ್ರಭುತ್ವದ ಆಧಾರ ಸ್ತಂಭಗಳು. ನಾವು ತಪ್ಪು ಮಾಡಿದರೆ ಕಾಯಲು ನ್ಯಾಯಾಂಗವಿದೆ. ಪತ್ರಿಕಾಂಗ ಎಲ್ಲರ ತಪ್ಪನ್ನು ಸಮಾಜಕ್ಕೆ ತೋರಿಸುತ್ತದೆ. ಆದರೆ ಇಂದು ಮತಗಳ್ಳತನಕ್ಕೆ ಕೆಲವರು ಕೈ ಹಾಕಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಸಾಕಷ್ಟು ಹೆಚ್ಚು-ಕಡಿಮೆಯಾಗಿದೆ. ಇದರ ವಿರುದ್ಧ ರಾಹುಲ್ ಗಾಂಧಿಯವರು ಹೋರಾಟ ರೂಪಿಸಿದ್ದಾರೆ ಎಂದರು. ಇದನ್ನೂ ಓದಿ: ಮದ್ದೂರು | ಕೋರ್ಟ್‌ಗೆ ತಲುಪಲಾಗದ ವೃದ್ಧನ ಬಳಿ ಬಂದು ತೀರ್ಪು ನೀಡಿದ ಜಡ್ಜ್

ಇಡೀ ದೇಶಕ್ಕೆ ಮಾದರಿಯಾಗುವಂತಹ ಸರ್ಕಾರವನ್ನು ಕರ್ನಾಟಕದ ಜನರು ಅಧಿಕಾರಕ್ಕೆ ತಂದಿದ್ದಾರೆ. ಬಲಿಷ್ಠವಾದ ಸಮಾಜದ ಬಗ್ಗೆ ಕಳಕಳಿ ಇರುವ ಸರ್ಕಾರವನ್ನು ಜನರು ಆರಿಸಲು ಮತದಾನದ ಹಕ್ಕೇ ಕಾರಣ. ಇದಕ್ಕಾಗಿ ಪ್ರಜಾಪ್ರಭುತ್ವ ಉಳಿಯಬೇಕು. ಮತದಾನದ ಹಕ್ಕು ಉಳಿಯಬೇಕು. ಯುವ ಪೀಳಿಗೆ ಈ ದೇಶದ ಆಸ್ತಿಯಾಗಬೇಕು ಎಂದು ಹೇಳಿದರು. ಇದನ್ನೂ ಓದಿ: Bengaluru | ಆಟೋಗೆ ಕಸ ನೀಡದ ಮನೆಗಳಿಗೆ ನೋಟಿಸ್

TAGGED:bengalurucongressDK ShivakumarMy Vote My Rightvotingಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕಾಂಗ್ರೆಸ್ಡಿಕೆ ಶಿವಕುಮಾರ್ನನ್ನ ಮತ ನನ್ನ ಹಕ್ಕುಬೆಂಗಳೂರುಮತ
Share This Article
Facebook Whatsapp Whatsapp Telegram

Cinema news

The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood
Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories

You Might Also Like

Mexico India
Latest

ಅಮೆರಿಕ ಆಯ್ತು ಈಗ ಮೆಕ್ಸಿಕೋ – ಭಾರತದ ವಸ್ತುಗಳಿಗೆ 50% ಸುಂಕ

Public TV
By Public TV
1 hour ago
Raichur Mid Day Meal 1
Districts

ಎಸ್‍ಡಿಎಂಸಿ ಅಧ್ಯಕ್ಷ ಸಾಲ ತೀರಿಸದ್ದಕ್ಕೆ ಮಕ್ಕಳ ಬಿಸಿಯೂಟಕ್ಕೆ ಬ್ಯಾಂಕ್ ಅಡ್ಡಗಾಲು!

Public TV
By Public TV
2 hours ago
ಸಾಂದರ್ಭಿಕ ಚಿತ್ರ
Court

ಬಡವರಿಗೆ ಕಡಿಮೆ ದರದಲ್ಲಿ ಔಷಧಿ ನೀಡಿದರೆ ಏನು ಸಮಸ್ಯೆ – ಸರ್ಕಾರದ ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು

Public TV
By Public TV
2 hours ago
CKB ACCIDENT
Chikkaballapur

ಡಿವೈಡರ್ ಹಾರಿ ಬಸ್‍ಗೆ ಗುದ್ದಿದ ಕಾರು – ಮೂವರು ದುರ್ಮರಣ

Public TV
By Public TV
3 hours ago
accused arrested for killing friend and taking selfie video in hassan
Crime

ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಅರೆಸ್ಟ್‌

Public TV
By Public TV
3 hours ago
Construction of illegal mosques in Bagalkote Outrage from Hindu organizations
Bagalkot

ಬಾಗಲಕೋಟೆಯಲ್ಲಿ ಅಕ್ರಮ ಮಸೀದಿ ನಿರ್ಮಾಣ – ಹಿಂದೂ ಸಂಘಟನೆಗಳಿಂದ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?