Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೀಸಲಾತಿ ಪ್ರಮಾಣವನ್ನು 70-75% ಗೆ ಹೆಚ್ಚಳ ಮಾಡೋದು ನನ್ನ ಇಚ್ಛೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೀಸಲಾತಿ ಪ್ರಮಾಣವನ್ನು 70-75% ಗೆ ಹೆಚ್ಚಳ ಮಾಡೋದು ನನ್ನ ಇಚ್ಛೆ: ಸಿದ್ದರಾಮಯ್ಯ

Bengaluru City

ಮೀಸಲಾತಿ ಪ್ರಮಾಣವನ್ನು 70-75% ಗೆ ಹೆಚ್ಚಳ ಮಾಡೋದು ನನ್ನ ಇಚ್ಛೆ: ಸಿದ್ದರಾಮಯ್ಯ

Public TV
Last updated: November 19, 2025 6:52 pm
Public TV
Share
3 Min Read
Siddaramaiah 1 6
SHARE

– 17ನೇ ಬಜೆಟನ್ನೂ ನಾನೇ ಮಂಡಿಸುತ್ತೇನೆ
– ಪ್ರತಿಭೆ ಯಾರ ಸ್ವತ್ತೂ ಅಲ್ಲ, ಅವಕಾಶ ಸಿಕ್ಕಾಗ ಹೊರಗೆ ಬರುತ್ತದೆ

ಬೆಂಗಳೂರು: ನಮ್ಮ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಒಪ್ಪಿಕೊಂಡು ಜಾರಿ ಮಾಡಲು ಸಿದ್ಧವಿದೆ. ಮೀಸಲಾತಿ (Reservation) ಪ್ರಮಾಣವನ್ನು ಶೇ. 70-75 ಕ್ಕೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದೆ. ನನಗೆ ಕೊನೆಯ ಉಸಿರು ಇರುವವರೆಗೂ,ನಾನು ರಾಜಕಾರಣದಲ್ಲಿ ಇರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಆಯೋಜಿಸಿದ್ದ ಎಲ್.ಜಿ.ಹಾವನೂರು ವರದಿಯ ಸುವರ್ಣ ಮಹೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ದೇವರು,ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ ಬಿಜೆಪಿ-ಆರ್‌ಎಸ್‌ಎಸ್‌(BJP-RSS) ಸೇರಿ ಇವರೇ ಮೂಲ ಆರ್‌ಎಸ್‌ಎಸ್‌ವರಿಗಿಂತ (RSS) ಇವರೇ ಹೆಡ್ಗೇವಾರ್ ರೀತಿ ಮಾತಾಡ್ತಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಆರ್‌ಎಸ್‌ ಎಬಿವಿಪಿ ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. ಇವರ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರ ಹಾಕಿದರು.

ಹಾವನೂರು ವರದಿಯನ್ನು ದೇವರಾಜ ಅರಸರು ಹಿಂದುಳಿದವರ ಬೈಬಲ್ ಎಂದು ಕರೆದಿದ್ದಾರೆ. ಸುಪ್ರೀಂ ಕೋರ್ಟ್ ಕೂಡ ಹಾವನೂರು ವರದಿಯನ್ನು ಅಪಾರವಾಗಿ ಮೆಚ್ಚಿಕೊಂಡಿದೆ. ಸಾಮಾನ್ಯ ಹಳ್ಳಿಯ ಪರಿಶಿಷ್ಟ ಕುಟುಂಬದಲ್ಲಿ ಹುಟ್ಟಿದ ಹಾವನೂರು ಅವರು ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭಟನೆ ಮಾಡುವ ಗುಣ ಹೊಂದಿದ್ದರು. ಹಾವನೂರು ಈ ಜಾತಿಯ ಮೊದಲ ವಕೀಲರಾಗಿದ್ದರು ಎಂದು ಸ್ಮರಿಸಿದರು. ಇದನ್ನೂ ಓದಿ: ಜನವರಿಗೆ ಡಿಕೆಶಿ ಅಧ್ಯಕ್ಷ ಸ್ಥಾನ ತ್ಯಜಿಸ್ತಾರಾ – ಮತ್ತೆ ತ್ಯಾಗದ ಬಗ್ಗೆ ಡಿಸಿಎಂ ಮಾತನಾಡಿದ್ದೇಕೆ?

ನಾನು ಹಣಕಾಸು ಮಂತ್ರಿಯಾದಾಗ ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ. ನನಗೆ ಅವಕಾಶ ಸಿಕ್ಕಿದ್ದರಿಂದ ನಾನು ಇಷ್ಟೆಲ್ಲಾ ಮಾಡಲು ಸಾಧ್ಯವಾಯಿತು. ಅವಕಾಶ ಸಿಗದಿದ್ದರೆ ನನ್ನಿಂದ ಇದನ್ನು ಮಾಡಲು ಸಾಧ್ಯವಿರಲಿಲ್ಲ. ಆದ್ದರಿಂದ ದಮನಿತ ಜಾತಿಗಳಿಗೆ ಅವಕಾಶ ಮುಖ್ಯ ಎಂದರು.

ಬೇಡರ ಜಾತಿಯಲ್ಲಿ ಜನಿಸಿದ ಹಾವನೂರು ಅವರು ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕಾಗ ಹೊರಗೆ ಬರುತ್ತದೆ ಎಂದರು. ನಾನು 1991 ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದೆ. ಆಗ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದೆ. ನನ್ನ ಅರ್ಜಿ ಪರವಾಗಿ ಹಾವನೂರು ಅವರು ವಾದಿಸಿದ್ದರು. ಆ ಸಂದರ್ಭದಲ್ಲಿ ನಾನು ಹಾವನೂರು ಅವರ ಜೊತೆ ಆತ್ಮೀಯತೆ ಬೆಳೆದಿತ್ತು ಎಂದು ಸ್ಮರಿಸಿದರು. ಇದನ್ನೂ ಓದಿ: ದೆಹಲಿಯಲ್ಲಿ ಡಿಕೆಶಿಯಿಂದ ಚೆಕ್‌ಮೇಟ್‌ ಆಟ – ಖರ್ಗೆ ಬಳಿ ಡಿಸೈಡ್‌ ರಹಸ್ಯ ಏನು?

ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇರಬೇಕು ಎನ್ನುವುದು ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತಾಗಿತ್ತು. ನಮ್ಮಲ್ಲಿ ಶಿಕ್ಷಣ ಪ್ರಮಾಣ ಶೇ.68 ರಷ್ಟಿದ್ದರೂ ಜಾತಿ ವ್ಯವಸ್ಥೆ ಇನ್ನಷ್ಟು ಗಟ್ಟಿಯಾಗುತ್ತಿದೆ. ಜಾತಿ ವ್ಯವಸ್ಥೆಯಿಂದ ಅನುಕೂಲ ಮಾಡಿಕೊಂಡವರು ಈ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತಿದ್ದರೆ. ಹಿಂದುಳಿದವರು ಇನ್ನೂ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ. ಮೇಲು ಜಾತಿಯ ಬಡವರನ್ನೂ ಬಹುವಚನದಿಂದ ಕರೆಯುವುದು, ಕೆಳ ಜಾತಿಯ ಶ್ರೀಮಂತರನ್ನು ಏಕವಚನದಲ್ಲಿ ಕರೆಯುವುದೇ ಗುಲಾಮಿ ಮನಸ್ಥಿತಿಯ ಸಂಕೇತ ಎಂದರು.

ವಿದ್ಯಾವಂತರು ವಿದ್ಯೆ ಪಡೆದಷ್ಟೂ ಮೌಢ್ಯವನ್ನು ಹೆಚ್ಚೆಚ್ಚು ನಂಬುತ್ತಾರೆ. ಬಡತನಕ್ಕೆ ಹಣೆಬರಹ ಕಾರಣ ಎಂದು ನಂಬುವವರು ಇನ್ನೂ ಇದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾವಂತರೂ ಮೌಢ್ಯವನ್ನು ನಂಬುತ್ತಾರೆ ಎಂದರು. ಬುದ್ದ, ಬಸವಣ್ಣ, ಅಂಬೇಡ್ಕರ್ ಅವರೆಲ್ಲಾ ಬಂದು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು. ಇವರು ಹೋರಾಡಿದಾಗ ಜಾತಿ ವ್ಯವಸ್ಥೆ ಸಡಿಲ ಆದಂತೆ ಕಾಣುತ್ತದೆ. ಆದರೆ ಬಳಿಕ ಮತ್ತೆ ಗಟ್ಟಿಯಾಗುತ್ತದೆ. ಜಾತಿ ವ್ಯವಸ್ಥೆ ಮಾತ್ರ ಹೋಗುತ್ತಿಲ್ಲ.ಅದಕ್ಕೇ ಆರ್ಥಿಕ, ಸಾಮಾಜಿಕ ಅಸಮಾನತೆಗೆ ತುತ್ತಾಗಿರುವ ಜನರೇ ಸ್ವಾತಂತ್ರ್ಯ ಸೌಧವನ್ನು ಧ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಅವರು ಎಚ್ಚರಿಸಿದ್ದನ್ನು ನಾವು ಮರೆಯಬಾರದು ಎಂದು ಹೇಳಿದರು.

ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ಜಾತಿ ಗಣತಿಗೆ ಒತ್ತಡ ಹೇರಿದರು. ಮೊನ್ನೆ ನನಗೂ ಏನಾಯ್ತು ನಿಮ್ಮ ಗಣತಿ ಎಂದು ನನಗೆ ಕೇಳಿದರು ಎಂದು ಸಿಎಂ ನುಡಿದರು. ರಾಹುಲ್ ಗಾಂಧಿಯವರಿಗೆ ಸ್ಪಷ್ಟತೆ ಇರುವುದರಿಂದಲೇ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಜಾತಿ ಗಣತಿ ನಡೆಸುವಂತೆ ಮಾಡಿದ್ದಾರೆ. ನಮ್ಮ ಸರ್ಕಾರ ಕೂಡ ಈ ಗಣತಿಯನ್ನು ಒಪ್ಪಿಕೊಂಡು ಜಾರಿ‌ಮಾಡಲು ಬದ್ದವಾಗಿದೆ ಎಂದರು.

ತಮ್ಮ ಭಾಷಣದ ನಡುವೆ ಸಿಎಂ ಮನುಸ್ಮೃತಿಯ ಶೂದ್ರ ವಿರೋಧಿ ಅಧ್ಯಾಯಗಳನ್ನು ಓದಿದರು. ಶೂದ್ರ ಸಮುದಾಯವನ್ನು ನಾಯಿಗೆ ಹೋಲಿಸಿ ತಾರತಮ್ಯ ಆಚರಿಸುವ ಶ್ಲೋಕಗಳನ್ನು ಓದಿ, ನೀವೆಲ್ಲಾ ಮನಯಸ್ಮೃತಿ ಓದಿ ಜಾತಿ ತಾರತಮ್ಯದ ಪ್ರಮಾಣವನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

TAGGED:karnatakapoliticsreservationsiddaramaiahಕರ್ನಾಟಕಮೀಸಲಾತಿರಾಜಕೀಯಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

KN Rajanna
Bengaluru City

ಪದತ್ಯಾಗಕ್ಕೂ ಸಿದ್ಧರಿದ್ದಾರೆ ಸಿದ್ದರಾಮಯ್ಯ – ಮುಂದೆ ದಲಿತರು ಸಿಎಂ ಆಗ್ಬೇಕು: ರಾಜಣ್ಣ ಸ್ಫೋಟಕ ಹೇಳಿಕೆ

Public TV
By Public TV
17 minutes ago
Vachanananda Swamiji Managuli Sangabasava Swamiji
Davanagere

ನಾನು ಪಂಚಮಸಾಲಿ ಪೀಠಕ್ಕೆ ಬರೋದು ಭಕ್ತರಿಗೆ ಬಿಟ್ಟ ವಿಚಾರ: ಮನಗುಳಿ ಸಂಗನಬಸವ ಶ್ರೀ

Public TV
By Public TV
24 minutes ago
Nitesh Rane
Court

ಮಹಾ ಸಚಿವ ನಿತೇಶ್ ರಾಣೆಗೆ 1 ತಿಂಗಳು ಜೈಲು ಶಿಕ್ಷೆ

Public TV
By Public TV
51 minutes ago
Raichur Man Death Heat Stroke Suspected copy
Districts

ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು – ಬಿಸಿಲಿನ ತಾಪಮಾನಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
2 hours ago
Massive fire breaks out in plastic godown PG girls in Bengaluru save their lives by jumping over wall
Bengaluru City

ಪ್ಲಾಸ್ಟಿಕ್ ಗೋಡೌನ್‌ನಲ್ಲಿ ಅಗ್ನಿ ಅವಘಡ- ಗೋಡೆ ಹಾರಿ ಜೀವ ಉಳಿಸಿಕೊಂಡ ಬೆಂಗಳೂರಿನ ಪಿಜಿ ಯುವತಿಯರು

Public TV
By Public TV
2 hours ago
Indonesia Train Accident
Crime

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ – 7 ಪ್ರಯಾಣಿಕರು ಸಾವು, 81 ಮಂದಿಗೆ ಗಾಯ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?