ಐಜ್ವಾಲ್ (ಮಿಜೋರಾಂ): ಮ್ಯಾನ್ಮಾರ್ ಸೈನಿಕರನ್ನು ಕರೆದೊಯ್ಯಲು ಬಂದಿದ್ದ ಮಿಲಿಟರಿ ವಿಮಾನವು (Myanmar military plane) ಮಿಜೋರಾಂನ ಲೆಂಗ್‌ಪುಯಿ ಏರ್‌ಪೋರ್ಟ್‌ನಲ್ಲಿ ರನ್‌ವೇಯಿಂದ ಸ್ಕಿಡ್ ಆಗಿದೆ. ಘಟನೆಯಲ್ಲಿ ಕನಿಷ್ಠ ಆರು ಜನರು ಗಾಯಗೊಂಡಿದ್ದಾರೆ.
Advertisement
ಮಂಗಳವಾರ ಮಿಜೋರಾಂನ (Mizoram) ಲೆಂಗ್‌ಪುಯಿ ವಿಮಾನ ನಿಲ್ದಾಣದ ಟರ್ಮಿನಲ್ ತಲುಪುವ ಮೊದಲು ಅಂದರೆ ಬೆಳಗ್ಗೆ 10.19 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಘಟನೆ ನಡೆದ ವೇಳೆ ವಿಮಾನದಲ್ಲಿ ಒಟ್ಟು 14 ಮಂದಿ ಇದ್ದರು ಎನ್ನಲಾಗಿದೆ.
Advertisement
#WATCH | Mizoram: Six people were injured after a plane from the Burmese Army crashed at Lengpui airport. 14 people were on board with the pilot. The injured were admitted to Lengpui Hospital: Mizoram DGP pic.twitter.com/aVscbDDoY4
— ANI (@ANI) January 23, 2024
Advertisement
ಈ ಸಂಬಂಧ ಮಿಜೋರಾಂ ಡಿಜಿಪಿ ಅನಿಲ್ ಶುಕ್ಲಾ ಪ್ರತಿಕ್ರಿಯಿಸಿ, ಲ್ಯಾಂಡಿಂಗ್ ವೇಳೆ ಉಂಟಾದ ತಾಂತ್ರಿಕ ದೋಷದಿಂದಾಗಿ ವಿಮಾನ ಪತನಗೊಂಡಿದೆ. ಈ ವಿಮಾನದಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ಇದರಲ್ಲಿ 6 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಉಳಿದ 8 ಮಂದಿ ಸುರಕ್ಷಿತವಾಗಿದ್ದಾರೆ. ಇವರನ್ನು ಲೆಂಗಪುಯಿನಲ್ಲಿರುವ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಇದನ್ನೂ ಓದಿ: ರಿಯಲ್ ಎಸ್ಟೇಟ್ ಬ್ರೋಕರ್ ಮೇಲೆ ‘ಕೈ’ ಕಾರ್ಪೋರೇಟರ್ ಸಹೋದರನಿಂದ ಮಾರಣಾಂತಿಕ ಹಲ್ಲೆ
Advertisement