ಮೈಸೂರು: ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಕರ್ತವ್ಯದಲ್ಲಿರುವಾಗ ಜೀನ್ಸ್ ಪ್ಯಾಂಟ್ ಹಾಗೂ ಟಿ-ಶರ್ಟ್ ಧರಿಸುವಂತಿಲ್ಲ ಎಂದು ಡಿಡಿಪಿಯು ಶ್ರೀನಿವಾಸಮೂರ್ತಿ ಆದೇಶ ಹೊರಡಿಸಿದ್ದಾರೆ.
Advertisement
ಜಿಲ್ಲಾಧಿಕಾರಿಗಳ ಮೌಖಿಕ ಸೂಚನೆ (ನ.6) ಮೇರೆಗೆ ಈ ಆದೇಶ ಹೊರಡಿಸಲಾಗಿದೆ. ಉಪನಿರ್ದೇಶಕರ ಕಚೇರಿ ಹಾಗೂ ಜಿಲ್ಲೆಯ ಎಲ್ಲಾ ಸರ್ಕಾರಿ/ಅನುದಾನಿತ/ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಇನ್ಮುಂದೆ ಟಿ-ಶರ್ಟ್, ಜೀನ್ಸ್ ಪ್ಯಾಂಟ್ ಧರಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರೀ ಮಳೆಯಲ್ಲೇ ಬೈಕ್‌ನಲ್ಲಿ ಸಂಚಾರ- ಮರ ಬಿದ್ದು ಧರ್ಮಸ್ಥಳ ಯಾತ್ರಾರ್ಥಿ ಸಾವು!
Advertisement
Advertisement
ಈ ಸಂಬಂಧ ಜಿಲ್ಲಾಧಿಕಾರಿಗಳು ಅನಿರೀಕ್ಷಿತವಾಗಿ ಕಾಲೇಜುಗಳಿಗೆ ಭೇಟಿ ನೀಡಲಿದ್ದಾರೆ. ಆದ್ದರಿಂದ ಕಾಲೇಜಿನ ಮತ್ತು ಜಿಲ್ಲಾ ಕಚೇರಿಯ ಎಲ್ಲಾ ಪ್ರಾಂಶುಪಾಲರು, ಬೋಧಕರು-ಬೋಧಕೇತರ ನೌಕರರು ತಪ್ಪದೇ ಆದೇಶ ಪಾಲಿಸಬೇಕು. ಈ ಬಗ್ಗೆ ಕ್ರಮಕೈಗೊಂಡ ಸದರಿ ಮಾಹಿತಿಯನ್ನು ಅ.10ರೊಳಗೆ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಹಬ್ಬದ ವೇಳೆ ಪುರುಷರು ಧರಿಸಬಹುದಾದ 5 ಸಾಂಪ್ರದಾಯಿಕ ಉಡುಗೆಗಳು
Advertisement
ಈ ರೀತಿಯ ಯಾವುದೇ ಆದೇಶವನ್ನು ನಾನು ಹೊರಡಿಸಿಲ್ಲ. ಸಂಬಂಧಿಸಿದ ಅಧಿಕಾರಿಗಳ ಜೊತೆ ಮಾತನಾಡಿ ಆದೇಶ ಹಿಂಪಡೆಯುವಂತೆ ಹೇಳುತ್ತೇನೆ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ತಿಳಿಸಿದ್ದಾರೆ ಎನ್ನಲಾಗಿದೆ.