ಮಂಡ್ಯ: ಮೈಸೂರು ಮಹಾರಾಜರಾದ ಯಧುವೀರ್ ಒಡೆಯರ್ ನೇತೃತ್ವದೊಂದಿಗೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕಮಲವನ್ನು ಅರಳಿಸಲು ಬಿಜೆಪಿ ತಂತ್ರ ರೂಪಿಸುತ್ತಿದೆ ಎನ್ನಲಾಗಿದೆ.
ಬಿಜೆಪಿಯು ಸದ್ದಿಲ್ಲದೆ ಮೈಸೂರು ರಾಜಮನೆತನವನ್ನು ಮಂಡ್ಯಕ್ಕೆ ಕರೆತರಲು ಸಿದ್ದತೆ ನಡೆಸಿದ್ದು, ಜಿಲ್ಲೆಯಲ್ಲಿ ಪ್ರಾಬಲ್ಯವಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಅನ್ನು ಮಣಿಸಲು ತಂತ್ರ ರೂಪಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಮೈಸೂರು ಮಹಾರಾಜ ಯಧುವೀರ್ ಒಡೆಯರ್ ಅವರನ್ನು ಅಖಾಡಕ್ಕೆ ಇಳಿಸಲು ಸಿದ್ಧತೆ ನಡೆಸಿರುವುವಾಗಿ ತಿಳಿದು ಬಂದಿದೆ.
ಈಗಾಗಲೇ ಬಿಜೆಪಿಯು ಯಧುವೀರ್ ಒಡೆಯವರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಸಹ ಒಡೆಯರ್ ಅವರನ್ನೇ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ. ಅಲ್ಲದೇ ಯಧುವೀರ್ ಅವರು ಮಂಡ್ಯದಿಂದ ಸ್ಪರ್ಧಿಸಿದರೆ, ಸಕ್ಕರೆ ನಾಡಿನ ಜನರು ಅವರ ಕೈ ಹಿಡಿಯುವ ಸಾಧ್ಯತೆ ಹೆಚ್ಚು ಎಂದು ಎನ್ನುವ ವಿಚಾರ ಬಿಜೆಪಿ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv