ಮೈಸೂರು ಸ್ಯಾಂಡಲ್ ಸೋಪ್‌ಗೆ (Mysore Sandal Soap) ಪ್ರತಿ ಕನ್ನಡಿಗನೂ ರಾಯಭಾರಿ ಎಂದು ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ (Ramya) ಹೇಳಿಕೊಂಡಿದ್ದಾರೆ.
ತೆಲುಗು ನಟಿ ತಮನ್ನಾ ಭಾಟಿಯಾ (Tamannaah Bhatia ) ಅವರನ್ನು ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಯಾಗಿ ಆಯ್ಕೆ ಮಾಡಿರುವುದರಿಂದ ಎದ್ದಿರುವ ವಿವಾದದ ಬೆನ್ನಲ್ಲೇ ರಮ್ಯಾ, ಇನ್ಸ್ಟಾದಲ್ಲಿ ಸ್ಟೋರಿ ಹಂಚಿಕೊಂಡಿದ್ದಾರೆ. ಅದರಲ್ಲಿ, ಉತ್ಪನ್ನಗಳ ಪ್ರಮೋಷನ್‌ಗೆ ರಾಯಭಾರಿಗಳನ್ನು ನೇಮಿಸುವುದು ಹಳೆಯ ಸಂಪ್ರದಾಯ. ಇದರಿಂದ ತೆರಿಗೆ ಪಾವತಿದಾರರ ಹಣ ವ್ಯರ್ಥಮಾಡಿದಂತಾಗುತ್ತದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ – ಬರೋಬ್ಬರಿ 6.20 ಕೋಟಿ ಸಂಭಾವನೆ
ಒಂದು ಉತ್ಪನ್ನಕ್ಕೆ ಜನ ಗ್ರಾಹಕರಾಗಲು, ಆ ಉತ್ಪನ್ನ ಉತ್ತಮವಾಗಿರಬೇಕು. ನಮ್ಮ ಮೈಸೂರು ಸ್ಯಾಂಡಲ್ ಸೋಪ್ ಉತ್ತಮ ಉತ್ಪನ್ನವಷ್ಟೇ ಅಲ್ಲ, ಅದು ನಮ್ಮ ಪರಂಪರೆಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಬಳಸಿದ ಪ್ರತಿಯೊಬ್ಬ ವ್ಯಕ್ತಿಯು ಅದರ ರಾಯಭಾರಿ. ಪ್ರತಿಯೊಬ್ಬ ಕನ್ನಡಿಗ ಸಹ ಅದರ ರಾಯಭಾರಿ, ಅದನ್ನು ಪ್ರತಿಯೊಬ್ಬ ಕನ್ನಡಿಗನು ಉಚಿತವಾಗಿ ಜಗತ್ತಿಗೆ ಪರಿಚಯ ಮಾಡಿಕೊಡುವ ಕೆಲಸ ಮಾಡುತ್ತಾನೆ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಪಿ.ಎಸ್. ಆಪಲ್ ಒಂದು ಯಶಸ್ವಿ ಬ್ರ್ಯಾಂಡ್, ಅದು ‘ಬ್ರಾಂಡ್ ಅಂಬಾಸಿಡರ್‌ನ್ನು ಹೊಂದಿಲ್ಲ. ರಾಯಭಾರಿಗಾಗಿ ಆ ಕಂಪನಿ ಹಣ ವ್ಯಯಿಸುವುದಿಲ್ಲ. ಇನ್ನೂ ನಾನು ಕಂಡಂತೆ ಡವ್ ಸೋಪ್‌ನದ್ದು ಅತ್ಯುತ್ತಮ ಅಭಿಯಾನಗಳಲ್ಲಿ ಒಂದು ಎಂದು ಹೇಳಿಕೊಂಡಿದ್ದಾರೆ.
ಮೈಸೂರು ಸ್ಯಾಂಡಲ್ ಸೋಪ್‌ಗೆ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಲಾಗಿದ್ದು, ನಟಿಗೆ ಕರ್ನಾಟಕ ಸರ್ಕಾರ 6.20 ಕೋಟಿ ರೂ. ಹಣ ಕೊಟ್ಟಿದೆ. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಕೂಡ ಪೋಸ್ಟ್ ಮಾಡಿದ್ದು, ಸಂಚಲನ ಮೂಡಿಸಿದೆ. ಇದನ್ನೂ ಓದಿ: Video | ತಮನ್ನಾಗೆ 6.20 ಕೋಟಿ – ನಟಿ ತಾರಾ ಬೇಸರ