DistrictsKarnatakaLatestMain PostMysuru

ವಿದ್ಯಾರ್ಥಿನಿ ಜೊತೆ ಶಿಕ್ಷಕನ ರೊಮ್ಯಾನ್ಸ್ – ವೀಡಿಯೋ ವೈರಲ್

ಮೈಸೂರು: ಶಾಲೆಯಲ್ಲಿ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕ ರೊಮ್ಯಾನ್ಸ್ ಮಾಡುತ್ತಿರುವ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಸಾಮಾನ್ಯವಾಗಿ ತಂದೆ, ತಾಯಿ ಬಳಿಕ ವಿದ್ಯೆ ಕಲಿಸುವ ಗುರುವಿಗೆ ಭಾರತೀಯ ಪರಂಪರೆಯಲ್ಲಿ ಪೂಜ್ಯ ಸ್ಥಾನವಿದೆ. ಶಿಕ್ಷಕನನ್ನು ದೇವರು ಎಂದು ಕೂಡ ಪರಿಗಣಿಸಲಾಗುತ್ತದೆ. ಆದರೆ ಮೈಸೂರು ಜಿಲ್ಲೆ ಹೆಚ್.ಡಿ. ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿ ಜೊತೆಗೆ ರಾಸಲೀಲೆಯಲ್ಲಿ ತೊಡಗಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಸಿದ್ದರಾಮಯ್ಯನಿಗೆ ಪಾಠ ಮಾಡಲು ನಾನು ಎಲ್‍ಕೆಜಿ ಟೀಚರ್ ಅಲ್ಲ: ಈಶ್ವರಪ್ಪ

ಶಾಲೆಯ ಖಾಲಿ ಕೊಠಡಿಯಲ್ಲಿ ವಿದ್ಯಾರ್ಥಿನಿ ಜೊತೆಗೆ ಶಿಕ್ಷಕ ಸರಸ-ಸಲ್ಲಾಪ ನಡೆಸುತ್ತಿರುವ ವೀಡಿಯೋವನ್ನು ವಿದ್ಯಾರ್ಥಿಗಳೇ ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಇದೀಗ ವೀಡಿಯೋ ವೈರಲ್ ಆದ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದ್ದು, ಶಾಲೆಗೆ ಭೇಟಿ ನೀಡಿ ಪರಿಶೀಲಿಸುವ ಭರವಸೆಯನ್ನು ಬಿಇಓ ನೀಡಿದ್ದಾರೆ. ಇದನ್ನೂ ಓದಿ: 2-3 ವಾರಗಳಲ್ಲಿ 3ನೇ ಅಲೆ ಕಡಿಮೆಯಾಗುತ್ತೆ: ಸುಧಾಕರ್

Leave a Reply

Your email address will not be published.

Back to top button