ಮೈಸೂರು: ಪ್ರಗತಿಪರ ಚಿಂತಕ, ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಮಹೇಶ್ ಚಂದ್ರ ಗುರು (68) ಹೃದಯಘಾತದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರೊ.ಮಹೇಶ್ ಚಂದ್ರ ಗುರು (Prof Mahesh Chandra Guru) ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: MUDA Scam| ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ `ಸುಪ್ರೀಂ ತೀರ್ಪು’ ಆಧಾರ – ರಾಜ್ಯಪಾಲರ ಆದೇಶದಲ್ಲಿ ಏನಿದೆ?
ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ ಮಹೇಶ್ ಚಂದ್ರ ಗುರು ನಂತರ ಮಂಗಳೂರು ವಿಶ್ವವಿದ್ಯಾಲಯದಲ್ಲಿ (Mangalore University) ಜರ್ನಲಿಸಂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ನಂತರ ಮೈಸೂರು ವಿವಿಗೆ (Mysuru University) ವರ್ಗಾವಣೆಗೊಂಡು 2019ರಲ್ಲಿ ಸೇವೆಯಿಂದ ನಿವೃತ್ತರಾದರು.
ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಗಣನೀಯವಾಗಿ ಗುರುತಿಸಿಕೊಂಡಿದ್ದ ಪ್ರೊ.ಮಹೇಶ್ ಚಂದ್ರ ಗುರು ಅವರು ಎಡಪಂಥೀಯ ವಾದವನ್ನು ಪ್ರತಿಪಾದಿಸುತ್ತಿದ್ದರು.