Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ವರ್ಷಕ್ಕೆ ಕಿಕ್ – ಬಸವೇಶ್ವರ ನಗರದಲ್ಲಿ ಮೊದಲ MSIL ಮಳಿಗೆ ಉದ್ಘಾಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸ ವರ್ಷಕ್ಕೆ ಕಿಕ್ – ಬಸವೇಶ್ವರ ನಗರದಲ್ಲಿ ಮೊದಲ MSIL ಮಳಿಗೆ ಉದ್ಘಾಟನೆ

Bengaluru City

ಹೊಸ ವರ್ಷಕ್ಕೆ ಕಿಕ್ – ಬಸವೇಶ್ವರ ನಗರದಲ್ಲಿ ಮೊದಲ MSIL ಮಳಿಗೆ ಉದ್ಘಾಟನೆ

Public TV
Last updated: January 1, 2024 6:37 pm
Public TV
Share
2 Min Read
MSIL
SHARE

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್ (MSIL) ಇಲ್ಲಿನ ಬಸವೇಶ್ವರ ನಗರದ ತಿಮ್ಮಯ್ಯ ರಸ್ತೆಯಲ್ಲಿ ಹೊಸದಾಗಿ ಆರಂಭಿಸಿರುವ ಸರ್ಕಾರಿ ಪ್ರೀಮಿಯಂ ಮದ್ಯ ಮಾರಾಟ ಮಳಿಗೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮನೋಜ್ ಕುಮಾರ್ ನೂತನ ವರ್ಷಾರಂಭದ ದಿನವಾದ ಸೋಮವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, `ಮಧ್ಯಮ ವರ್ಗದಿಂದ ಹಿಡಿದು ಸಮಾಜದ ಪ್ರತಿಯೊಂದು ವರ್ಗದ ಗ್ರಾಹಕರನ್ನೂ ಸೆಳೆಯುವುದು ಎಂಎಸ್ಐಎಲ್ ನ ಗುರಿಯಾಗಿದೆ. ಇದರಂತೆ, ಹೊಸ ರೂಪ ಪಡೆದಿರುವ ಈ ಬೋಟಿಕ್‌ನಲ್ಲಿ ಸಾಮಾನ್ಯ ಬೆಲೆಯಿಂದ ಹಿಡಿದು ಅತ್ಯಂತ ದುಬಾರಿ ಬೆಲೆಯ ಬ್ರಾಂಡೆಡ್ ಮದ್ಯದ ಉತ್ಪನ್ನಗಳು ಸುಲಭವಾಗಿ ಸಿಗಲಿದೆ. ಚಿತ್ತಾಕರ್ಷಕ ಒಳಾಂಗಣ ವಿನ್ಯಾಸ ಮತ್ತು ಗ್ರಾಹಕರಿಗೆ ಹಿತಕರ ಅನುಭವ ಸಿಗುವಂತೆ ಮಾಡಲು ಇಲ್ಲಿ ಆದ್ಯತೆ ಕೊಡಲಾಗಿದ್ದು, ಜಾಗತಿಕ ಗುಣಮಟ್ಟದ ಮಾಲ್ ರೀತಿಯಲ್ಲಿ ಈ ಪ್ರೀಮಿಯಂ ಬೋಟಿಕ್ ಇದೆ” ಎಂದರು.

 

ಎಂಎಸ್ಐಎಲ್ ಅಧ್ಯಕ್ಷರೂ ಆದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ (MB Patil) ಅವರ ಸಲಹೆ ಮೇರೆಗೆ ಹಾಲಿ ಇರುವ ಮದ್ಯ‌ ಮಾರಾಟ ಮಳಿಗೆಗಳನ್ನು ಹೈಟೆಕ್ ರೀತಿಯಲ್ಲಿ ವಿನ್ಯಾಸ ಮಾಡಲು ಆರಂಭಿಸಿದ್ದು ಹಂತಹಂತವಾಗಿ‌ ಎಲ್ಲವನ್ನೂ ಬದಲಿಸಲಾಗುವುದು ಎಂದರು. ಇದನ್ನೂ ಓದಿ: ನ್ಯೂ ಇಯರ್ ಪಾರ್ಟಿಯಲ್ಲಿ ಗಲಾಟೆ – ಮೂಗನ್ನೇ ಕಚ್ಚಿಕಿತ್ತ ಯುವಕ

ಎಂಎಸ್ಐಎಲ್ ರಾಜ್ಯದಲ್ಲಿ ಒಟ್ಟು 1,029 ಮದ್ಯ ಮಾರಾಟ ಮಳಿಗೆಗಳನ್ನು ನಡೆಸುತ್ತಿದೆ. ಈ ಪೈಕಿ 200 ಮಳಿಗೆಗಳನ್ನು ಬೋಟಿಕ್ ಆಗಿ ಮೇಲ್ದರ್ಜೆಗೇರಿಸಲಾಗುತ್ತಿದ್ದು, ಇದರಲ್ಲಿ 20 ಮಳಿಗೆಗಳು ಬೆಂಗಳೂರಿನಲ್ಲೇ ಇರಲಿವೆ. ಇನ್ನು ಕೆಲವೇ ದಿನಗಳಲ್ಲಿ ಡಾ.ರಾಜಕುಮಾರ್ ರಸ್ತೆ, ಆರ್ ಪಿಸಿ ಬಡಾವಣೆ ಮತ್ತು ವಿಜಯನಗರದಲ್ಲಿ ಇಂತಹ ಬೋಟಿಕ್ ಮದ್ಯಪ್ರಿಯರಿಗೆ ಮುಕ್ತವಾಗಲಿವೆ ಎಂದು ಅವರು ಹೇಳಿದರು.

 

ಇದಲ್ಲದೆ ಶಿವಾನಂದ ವೃತ್ತ, ವರ್ತೂರು, ಕೆಂಗೇರಿ ಉಪನಗರ, ಮಾರುತಿ ಸೇವಾ ನಗರ, ಹನುಮಂತ ನಗರ ಮತ್ತು ಸರ್ಜಾಪುರ ರಸ್ತೆಯಲ್ಲಿರುವ ದೊಡ್ಡಕನ್ನಹಳ್ಳಿಯಲ್ಲಿ ಇರುವ ಎಂಎಸ್ಐಎಲ್ ಮಳಿಗೆಗಳನ್ನು ಬೋಟಿಕ್ ಗಳಾಗಿ ರೂಪಾಂತರಿಸುವ ಕೆಲಸ ಪ್ರಗತಿಯಲ್ಲಿದೆ. ಈ ಎಲ್ಲ ಮಳಿಗೆಗಳಲ್ಲೂ ಚಿಲ್ಲರೆ ಮಾರಾಟ ದರದಲ್ಲಿ ಅತ್ಯುತ್ಕೃಷ್ಟ ಮದ್ಯಗಳು ಲಭ್ಯವಾಗಲಿವೆ ಎಂದು ಅವರು ನುಡಿದರು.

ಎಂಎಸ್ಐಎಲ್ ರಾಜ್ಯದಲ್ಲಿರುವ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಇಂತಹ ತಲಾ 2 ಬೋಟಿಕ್ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ತಲಾ ಒಂದು ಇಂತಹ ಬೋಟಿಕ್ ತೆರೆಯಲಿದೆ. ಇವೆಲ್ಲವೂ ಇನ್ನು ಮೂರ್ನಾಲ್ಕು ತಿಂಗಳುಗಳಲ್ಲಿ ಹಂತಹಂತವಾಗಿ ಆರಂಭವಾಗಲಿವೆ. ಮದ್ಯಪ್ರಿಯರು ಯಾವುದೇ ತೊಂದರೆ ಇಲ್ಲದೆ, ತಮಗೆ ಬೇಕಾದ ದರ್ಜೆಯ ಮದ್ಯದ ಉತ್ಪನ್ನಗಳನ್ನು ಇಲ್ಲಿ ಖರೀದಿಸಬಹುದು ಎಂದು ಮನೋಜ್ ಕುಮಾರ್ ಮಾಹಿತಿ ನೀಡಿದರು.

 

ಇಂತಹ ಬೋಟಿಕ್ ಗಳಿಂದ ಸಂಸ್ಥೆಯ ವಹಿವಾಟು 30%ರಿಂದ 40%ರಷ್ಟು ಏರಿಕೆಯಾಗಲಿದೆ. ಇಲ್ಲಿ ಸಿಗುವ ಬ್ರಾಂಡೆಡ್ ಮದ್ಯದ ಬಗೆಗಳಿಗೆ ಗುಣಮಟ್ಟದ ಖಾತ್ರಿ ಇರಲಿದೆ. ಈ ಮೂಲಕ ಸಂಸ್ಥೆಯು ಹೊಸ ಹೆಜ್ಜೆ ಇಡುತ್ತಿದೆ. ಸಂಸ್ಥೆಯು ವಹಿವಾಟನ್ನು 4 ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಿಕೊಳ್ಳುವ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ವಾರ್ಷಿಕ 10 ಸಾವಿರ ಕೋಟಿ ರೂ. ಮೊತ್ತದ ಚಿಟ್ ಫಂಡ್ ವ್ಯವಹಾರ, ಲೇಖನ ಸಾಮಗ್ರಿಗಳ ಮಾರಾಟಕ್ಕೆ ಫ್ರಾಂಚೈಸಿಗಳ ಆರಂಭ, 10 ಮೆಗಾ ಮೆಡಿಕಲ್ ಶಾಪ್ ಆರಂಭ ಮುಂತಾದ ಉಪಕ್ರಮಗಳನ್ನು ಕೈಗೊಳ್ಳಲಿದೆ. ಜೊತೆಗೆ ಪ್ರತಿಯೊಂದು ವಹಿವಾಟಿನಲ್ಲೂ ಕಾರ್ಪೊರೇಟ್ ಸ್ಪರ್ಶ ನೀಡಲಾಗುವುದು ಎಂದು ಅವರು ವಿವರಿಸಿದರು.

TAGGED:bengaluruMB PatilMSILNew Yearಎಂಬಿ ಪಾಟೀಲ್ಎಂಸ್‌ಐಎಲ್‌ಬೆಂಗಳೂರು
Share This Article
Facebook Whatsapp Whatsapp Telegram

Cinema news

darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru City Cinema Court Latest Main Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories

You Might Also Like

DK Shivakumar
Districts

ಡಿಕೆಶಿ, ಕಿಚ್ಚ ಸುದೀಪ್‌ ಭಾಗವಹಿಸಿದ್ದ ಕಾರ್ಯಕ್ರಮದ ವೇದಿಕೆಯಲ್ಲಿ ಬೆಂಕಿ ಅವಘಡ – ತಪ್ಪಿದ ದುರಂತ

Public TV
By Public TV
11 minutes ago
Sudeep 2
Districts

ಡಿಕೆಶಿ ಲ್ಯಾಂಡ್‌ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್‌ – ಅಧಿಕಾರಿಗಳಲ್ಲಿ ಕೆಲಕಾಲ ಆತಂಕ

Public TV
By Public TV
29 minutes ago
BWSSB Bengaluru Water Board
Bengaluru City

ಜಲಮಂಡಳಿಯ ಒನ್ ಟೈಮ್ ಸೆಟಲ್ಮೆಂಟ್ ಯೋಜನೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ

Public TV
By Public TV
30 minutes ago
Jeevaraj 3
Chikkamagaluru

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಮೇಲುಗೈ – ಶಾರದಾಂಬೆ ದರ್ಶನ ಪಡೆದ ಅಭ್ಯರ್ಥಿ ಜೀವರಾಜ್

Public TV
By Public TV
51 minutes ago
Air Arabia flight
Latest

ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚೆನ್ನೈನಲ್ಲಿ ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

Public TV
By Public TV
1 hour ago
DK Shivakumar TB Dam
Bellary

ಟಿಬಿ ಡ್ಯಾಂ ಮುಂದಿನ 50 ವರ್ಷ ಸುಭದ್ರ, ಕ್ರಸ್ಟ್ ಗೇಟ್‌ಗಳ ಅಳವಡಿಕೆ ಪೂರ್ಣ- ಮೇ 15ಕ್ಕೆ ಲೋಕಾರ್ಪಣೆ: ಡಿಕೆಶಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?