ಮೈಸೂರು: 2ನೇ ಮಗುವಿನ ನಿರೀಕ್ಷೆಯಲ್ಲಿದ್ದ ತುಂಬು ಗರ್ಭಿಣಿ ಹಂದಿಜ್ವರಕ್ಕೆ ಬಲಿಯಾಗಿದ್ದು, ಇದರಿಂದ ಜನರಲ್ಲಿ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ.
Advertisement
ಹುಣಸೂರು ತಾಲ್ಲೂಕಿನ ಕೋಣನ ಹೊಸಳ್ಳಿ ಗ್ರಾಮದ ಸ್ವಾಮಿ ನಾಯ್ಕ ಎಂಬವರ ಪುತ್ರಿ ಛಾಯಾ ಅವರು ಊ1ಓ1 ನಿಂದ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪೊಲೀಸ್ ಎಂದು ನಂಬಿಸಿ ಮಹಿಳೆಯ ಚಿನ್ನಾಭರಣ ಎಗರಿಸಿದ್ದ ಆರೋಪಿ ಅಂದರ್
Advertisement
Advertisement
ಛಾಯಾ ಅವರಿಗೆ ಈಗಾಗಳೇ 4 ವರ್ಷದ ಗಂಡು ಮಗುವಿದ್ದು, 2ನೇ ಮಗುವಿನ ನಿರೀಕ್ಷೆಯಲ್ಲಿದ್ದರು. ಇನ್ನು ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ ಛಾಯಾ ಹಂದಿಜ್ವರಕ್ಕೆ ತುತ್ತಾಗಿದ್ದರು. ಈ ಹಿನ್ನೆಲೆಯಲ್ಲಿ ಛಾಯಾ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಛಾಯಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.