ತುಮಕೂರು: ಎರಡು ದಿನದಲ್ಲಿ 11 ಕೋತಿಗಳು (Monkeys) ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತುಮಕೂರಿನ (Tumakuru) ದೇವರಾಯನದುರ್ಗ (Devarayanadurga) ಅರಣ್ಯ ಪ್ರದೇಶದಲ್ಲಿ ನಡೆದಿದೆ.
ದೇವರಾಯನದುರ್ಗ ಹಾಗೂ ದುರ್ಗದ ಹಳ್ಳಿ ನಡುವಿನ ಅರಣ್ಯ ಪ್ರದೇಶದಲ್ಲಿ ಎರಡು ದಿನಗಳಲ್ಲಿ 11 ಕೋತಿಗಳ ಮೃತದೇಹ ಪತ್ತೆಯಾಗಿದೆ. ಒಂದರ ನಂತರ ಮತ್ತೊಂದರಂತೆ ಕೋತಿಗಳ ಮೃತದೇಹ ಪತ್ತೆಯಾದ ಹಿನ್ನೆಲೆ ಅನುಮಾನಗೊಂಡು ಅರಣ್ಯ ಪ್ರದೇಶದಲ್ಲಿ ಎರಡು ದಿನ ಶೋಧ ಕಾರ್ಯ ನಡೆಸಲಾಯಿತು. ಮೊದಲ ದಿನ ಏಳು ಹಾಗೂ ಎರಡನೇ ದಿನ ನಾಲ್ಕು ಕೋತಿಗಳ ಮೃತದೇಹ ಪತ್ತೆಯಾಗಿದೆ. ಕೋತಿಗಳು ಯಾವುದೇ ಕಾಯಿಲೆಯಿಂದ ಮೃತಪಟ್ಟಿಲ್ಲ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಮಾಗಡಿ ತಹಶೀಲ್ದಾರ್‌ಗೆ ಚಪ್ಪಲಿಯಲ್ಲಿ ಹೊಡೆಸುತ್ತೇನೆ ಎಂದಿದ್ದ ಶಾಸಕ ಬಾಲಕೃಷ್ಣ ಕ್ಷಮೆಯಾಚನೆ
ಮೇಲ್ನೋಟಕ್ಕೆ ಮಂಗಗಳ ಸಾವಿಗೆ ವಿಷ ಪ್ರಾಶನದ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕವಾಗಿ ಸಾವಿನ ಕಾರಣದ ಪತ್ತೆಗೆ ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ. ಸದ್ಯ ಊರ್ಡಿಗೆರೆಯ ಪಶು ಆಸ್ಪತ್ರೆಯಲ್ಲಿ ಮೃತ ಕೋತಿಗಳ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಜಾಮೀನು ಅರ್ಜಿ ವಜಾ

