ಶ್ರೀನಗರ: ಜಮ್ಮುವಿನ (Jammu) ಸುಂಜ್ವಾನ್ ಸೇನಾ ಶಿಬಿರದಲ್ಲಿ (Sunjwan Military Base) ಯೋಧರೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದು, ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಶಂಕೆ ವ್ಯಕ್ತವಾಗಿದೆ.
ಸೋಮವಾರ ಈ ಘಟನೆ ನಡೆದಿದೆ. ಸುಂಜ್ವಾನ್ ಮಿಲಿಟರಿ ಶಿಬಿರದಲ್ಲಿ ಯೋಧರನ್ನು ಸೆಂಟ್ರಿ ಡ್ಯೂಟಿಗಾಗಿ ನಿಯೋಜನೆ ಮಾಡಲಾಗಿತ್ತು. ಆ ದಿನ ಬೆಳಗ್ಗೆ ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.ಇದನ್ನೂ ಓದಿ: ಸಿಎಂ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು – ಅಧಿಕೃತವಾಗಿ ಒಪ್ಪಿಕೊಂಡ ಸರ್ಕಾರ
ಇದು ಉಗ್ರರ ದಾಳಿ ಇರಬಹುದು ಎಂದು ಭಾರತೀಯ ಸೇನೆ ಶಂಕಿಸಿದೆ. ಹೀಗಾಗಿ, ಸೇನೆ ಹಾಗೂ ಪೊಲೀಸ್ ತಂಡದಿಂದ ಶೋಧ ಕಾರ್ಯಾಚರಣೆವನ್ನು ಪ್ರಾರಂಭಿಸಿದ್ದಾರೆ. ಜೊತೆಗೆ ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕ ವೈಮಾನಿಕ ಕಣ್ಗಾವಲನ್ನು ನಿಯೋಜಿಸಲಾಗಿದೆ.
ಉಗ್ರಗಾಮಿಗಳು ಸೈನಿಕನ ಮೇಲೆ ಗುರಿಯಿಡಲು ಸ್ನೈಪರ್ ಬಂದೂಕನ್ನು ಬಳಸಿದ್ದು, ನಂತರ ಘಟನಾ ಸ್ಥಳದಿಂದ ಪಲಾಯನ ಮಾಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ಶಂಕಿಸಿದ್ದಾರೆ. ದಿನವಿಡೀ ಶೋಧಕಾರ್ಯ ಮುಂದುವರೆದಿದ್ದು, ರಕ್ಷಣಾ ಮೂಲಗಳ ಪ್ರಕಾರ ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕ ಯಾವುದೇ ಶಂಕಿತ ಉಗ್ರಗಾಮಿಗಳ ಚಲನವಲನಗಳು ಪತ್ತೆಯಾಗಿಲ್ಲ ಎಂದು ತಿಳಿಸಿವೆ.ಇದನ್ನೂ ಓದಿ: ಮುಡಾ ಹಿಂದಿನ ಆಯುಕ್ತರ ಅಮಾನತು ಆದೇಶವೇ ಸರ್ಕಾರಕ್ಕೆ ಸುಸೈಡ್ ನೋಟ್: ಶಾಸಕ ಶ್ರೀವತ್ಸ
ಸದ್ಯ ಶೋಧಕಾರ್ಯ ಮುಂದುವರೆದಿದ್ದು, ಉಗ್ರಗಾಮಿಗಳ ಯಾವುದೇ ಸುಳಿವು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.