– ಭೂಕುಸಿತದಿಂದ ತತ್ತರಿಸಿದ್ದ ಪ್ರದೇಶದಲ್ಲಿ ಮತ್ತೊಂದು ಭೀತಿ!
ತಿರುವನಂತಪುರಂ: ಭೂಕುಸಿತದ ಕರಾಳ ಭೀಕರತೆಯನ್ನು ಅನುಭವಿಸಿದ ವಯನಾಡಿಗೆ ಈಗ ಭೂಕಂಪದ (Wayanad Earthquake) ಭೀತಿ ಎದುರಾಗಿದೆ. ಇಂದು ಬೆಳಗ್ಗೆ 10:15 ಕ್ಕೆ ವಯನಾಡಿನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
ಇತ್ತೀಚೆಗೆ ಭೂಕುಸಿತ ಸಂಭವಿಸಿದ ಚೂರಲ್ಮಲಾ – ಮುಂಡಕ್ಕೈ ಪ್ರದೇಶಗಳಿಂದ ಸುಮಾರು 15 ರಿಂದ 20 ಕಿಲೋಮೀಟರ್ ದೂರದಲ್ಲಿರುವ ಅಂಬಲವಾಯಲ್-ಎಡಕಲ್ ಪ್ರದೇಶಗಳಲ್ಲಿ ಬೆಳಗ್ಗೆ ಗುಡುಗು ಸದ್ದು ಕೇಳಿಸಿತು ಎನ್ನಲಾಗಿದೆ. ಇದನ್ನೂ ಓದಿ: ದೆಹಲಿ, ಮುಂಬೈನಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು – ಐಸಿಸ್ ಶಂಕಿತ ಭಯೋತ್ಪಾದಕ ಅರೆಸ್ಟ್
ಪಕ್ಕದ ಕೋಝಿಕ್ಕೋಡ್ ಮತ್ತು ಪಾಲಕ್ಕಾಡ್ ಜಿಲ್ಲೆಗಳ ಭಾಗಗಳಿಂದ ಇದೇ ರೀತಿಯ ಶಬ್ದಗಳು ಕೇಳಿಬಂದಿವೆ ಎಂದು ವರದಿಯಾಗಿದೆ. ಶಬ್ದ ಕೇಳಿ ಅಂಬಲವಾಯಲ್-ಎಡಕಲ್ ಭಾಗದ ಜನರು ಮನೆಯಿಂದ ಹೊರ ಬಂದರು. ಈ ಪ್ರದೇಶದಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಪರಿಹಾರ ಶಿಬಿರದಲ್ಲಿ ಹಲವು ಕುಟುಂಬಗಳು ಆಶ್ರಯ ಪಡೆದಿವೆ.
ಆರಂಭದಲ್ಲಿ ಗುಡುಗು ಇರಬಹುದು ಎಂದು ಹಲವರು ಭಾವಿಸಿದ್ದರು. ಆದರೆ ಶಬ್ದವು ಭೂಮಿಯ ಮೇಲ್ಮೈಯಿಂದ ಬಂದಿದೆ. ಹಲವರಿಗೆ ತಮ್ಮ ಮನೆಯ ಕಿಟಕಿ ಗಾಜುಗಳು ಅಲುಗಾಡಿರುವ ಅನುಭವವಾಗಿದೆ. ಭೂಕುಸಿತದ ತೀವ್ರತೆಯನ್ನು ಮೌಲ್ಯಮಾಪನ ಮಾಡಲು ಕೇಂದ್ರದ ತಜ್ಞರ ತಂಡವು ಈಗಾಗಲೇ ವಯನಾಡು ಪ್ರದೇಶಕ್ಕೆ ಭೇಟಿ ನೀಡುತ್ತಿದೆ. ಇದನ್ನೂ ಓದಿ: ಜಾಮೀನು ನಿರಾಕರಿಸುವ ಮೂಲಕ ಕೆಳ ಹಂತದ ನ್ಯಾಯಲಯಗಳು ಸುರಕ್ಷಿತ ಆಟವಾಡುತ್ತಿವೆ: ಸುಪ್ರೀಂ ಆಕ್ರೋಶ
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಈಗಾಗಲೇ ಈ ಪ್ರದೇಶದಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ಜು.30 ರಂದು ಚೂರಲ್ಮಲಾ-ಮುಂಡಕ್ಕೈ ಪ್ರದೇಶಗಳಲ್ಲಿ ಸಂಭವಿಸಿದ ಭೂಕುಸಿತದಲ್ಲಿ 225 ಜನರು ಸಾವನ್ನಪ್ಪಿದ್ದಾರೆ. 131 ಕ್ಕೂ ಹೆಚ್ಚು ಜನರು ಇನ್ನೂ ನಾಪತ್ತೆಯಾಗಿದ್ದಾರೆ.